ಮಂಗಳೂರು

ನೇತ್ರಾವತಿ ಸ್ನಾನಘಟದಲ್ಲಿ ಚಿನ್ನಾಭರಣ ಕಳ್ಳತನ ಮಾಡಿದ ಕಳ್ಳನ ಬಂಧನ

ಬೆಳ್ತಂಗಡಿ : ಶ್ರೀ ಕ್ಷೇತ್ರ‌ ಧರ್ಮಸ್ಥಳ ದೇವಸ್ಥಾನಕ್ಕೆ ಬರುವ ಯಾತ್ರಿಕರು ನೇತ್ರಾವತಿ ಸ್ನಾನಘಟದಲ್ಲಿ ಬ್ಯಾಗ್ ಚಿನ್ನಾಭರಣ ಹಾಗೂ ಹಣವನ್ನು ಕಳ್ಳತನ ಮಾಡಿದ ಪ್ರಕರಣವೊಂದರ ತನಿಖೆ ನಡೆಸಿದ ಪೊಲೀಸರು ಅಂತರ್ ರಾಜ್ಯ ಕಳ್ಳನನ್ನು ಬಂಧಿಸಿ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ಶ್ರೀಧರ‌ ನಾಯರಿ ಎಂಬವರು ಸ್ನಾನ ಮಾಡಲು ಧರ್ಮಸ್ಥಳದ ನೇತ್ರಾವತಿ ಸ್ನಾನಘಟದ ಬಳಿ ತಮ್ಮ‌ ಚಿನ್ನಾಭರಣ ಹಾಗೂ ಹಣ ಇದ್ದ ಬ್ಯಾಗ್ ಇಟ್ಟಿದ್ದರು ಈ ವೇಳೆ ಯಾರೋ ಕಳ್ಳರ‌ ಪಾಲಾಗಿತ್ತು ಈ ಕುರಿತು ಧರ್ಮಸ್ಥಳ ಠಾಣೆಯಲ್ಲಿ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದು ಮಹಾರಾಷ್ಟ್ರ ರಾಜ್ಯದ ಸೊಲ್ಲಾಪುರ ಜಿಲ್ಲೆಯ ಸಾಂಗೋಲಾ ತಾಲೂಕಿನ ಷಾರೆ ಗ್ರಾಮದ ಇಂದಿರಾನಗರದ ನಿವಾಸಿ ಮಿತುನ್ ಚೌವಾಣ್(31) ನನ್ನು ಬಂಧಿಸಿದ ಆತನ ಬಳಿಯಿದ್ದ 80,000/- ಮೌಲ್ಯದ 37 ಗ್ರಾಂನ ಚಿನ್ನದ ಓಲೆ, 32,000/- ಮೌಲ್ಯದ 8.04 ಗ್ರಾಂ ನ ಲಕ್ಷ್ಮೀ ಮಲೆ, 16,230 ಮೌಲ್ಯದ ‌ಚಿನ್ನದ ಸರ, 40,000/- ಮೌಲ್ಯದ 10.2 ಗ್ರಾಂ ನ ಬ್ರಾಸ್ ಲೈಟ್ , 15,000/- ಮೌಲ್ಯದ ಬ್ರಾಸ್ ಲೈಟ್ , 8,500/- ಮೌಲ್ಯದ 2.190 ಗ್ರಾಂ ನ ಉಂಗುರ ಗಳನ್ನು ವಶಪಡಿಸಿಕೊಂಡಿದ್ದಾರೆ. ಇದರ ಒಟ್ಟು ಮೌಲ್ಯ 2.4 ಲಕ್ಷ ಎಂದು ಅಂದಾಜಿಸಲಾಗಿದೆ.
ಆರೋಪಿ ದೇಶದ ವಿವಿಧ ಪ್ರಸಿದ್ಧ ಯಾತ್ರ ಸ್ಥಳಗಳಿಂದ ಕಳ್ಳತನ ಮಾಡುವ ಅಭ್ಯಾಸ ಹೊಂದಿದ್ದು ಇತನ ಮೇಲೆ ಮಹಾರಾಷ್ಟ್ರ ರಾಜ್ಯದ ಪುಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿದೆ.

ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪೊಲೀಸ್ ಉಪಾಧೀಕ್ಷರು ಬಂಟ್ವಾಳ ಉಪವಿಭಾಗದ ಪ್ರತಾಪ್ ಸಿಂಗ್ ತೋರಟ್ ಮತ್ತು ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ಅವರ ನೇತ್ರತ್ವದಲ್ಲಿ ಪಿಎಸ್ಐ ಕೃಷ್ಣಕಾಂತ್ ಪಾಟೀಲ್ ಅವರ ವಿಶೇಷ ತಂಡದ ಸಿಬ್ಬಂದಿಗಳಾದ ಬೆನ್ನಿಚ್ಚನ್ ,ಪ್ರಶಾಂತ್ ,ರಾಹುಲ್, ಸತೀಶ್ ನಾಯ್ಕ್ ,ವಿಜು, ರವೀಂದ್ರ , ಕೃಷ್ಣಪ್ಪ ಹಾಗೂ ಜಿಲ್ಲಾ ಗಣಕ ಯಂತ್ರ ವಿಭಾಗದ ಸಂಪತ್ ಮತ್ತು ದಿವಾಕರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

ಪ್ರಕರಣ ಭೇದಿಸಿದ ತಂಡಕ್ಕೆ ಪೊಲೀಸ್ ಅಧೀಕ್ಷಕರು ಬಹುಮಾನ ಘೋಷಿಸಿದ್ದಾರೆ.

Sneha Gowda

Recent Posts

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

26 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

51 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

2 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

3 hours ago