ಮಂಗಳೂರು

ನೈಟ್ ಕರ್ಫ್ಯೂ ಜಾರಿ ಹಿನ್ನೆಲೆ ಮಂಗಳೂರು ಪೋಲಿಸ್ ಕಮೀಷನರ್ ಎನ್ ಶಶಿಕುಮಾರ್ ಹೇಳಿಕೆ

ಮಂಗಳೂರು :  ರಾಜ್ಯದಾದ್ಯಂತ ಇಂದಿನಿಂದ ನೈಟ್ ಕರ್ಫ್ಯೂ ಜಾರಿ ಹಿನ್ನೆಲೆ ಮಂಗಳೂರು ಪೋಲಿಸ್ ಕಮೀಷನರ್ ಎನ್ ಶಶಿಕುಮಾರ್ ಹೇಳಿಕೆ.  ದ.ಕ ಜಿಲ್ಲೆ ಕೇರಳ ರಾಜ್ಯದ ಜೊತೆ ಸಾಕಷ್ಟು ರೀತಿಯಲ್ಲಿ ಸಂಪರ್ಕ ಹೊಂದಿದೆ. ರೋಡ್ ಹೊರತು ಪಡಿಸಿ ಕಾಲುದಾರಿ ಮೂಲಕ‌ ಕೇರಳ ಜೊತೆ ಸಂಪರ್ಕವಿದೆ.

ದ.ಕ ಜಿಲ್ಲೆಯನ್ನ ಸಂಪರ್ಕಿಸುವ 7 ರಸ್ತೆಗಳು ಕಮೀಷನರೇಟ್ ವ್ಯಾಪ್ತಿಯಲ್ಲಿವೆ. ಅತಿಮುಖ್ಯವಾದ ತಲಪಾಡಿ ಚೆಕ್ ಪೋಸ್ಟ ನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ನೈಟ್ ಕರ್ಫ್ಯೂ ವೇಳೆಯಲ್ಲಿ ಅನಾವಶ್ಯಕವಾಗಿ ಯಾರು ಸಂಚಾರ ಮಾಡುವಂತಿಲ್ಲ. ತುರ್ತು ಪರಿಸ್ಥಿತಿಯಲ್ಲಿ ಓಡಾಟ ಮಾಡುವವರಿಗೆ ಗುರುತಿನ ಚೀಟಿ ಕಡ್ಡಾಯ.

ರೈಲ್ವೆ, ಏರ್ಪೋರ್ಟ್ ಗೆ ಹೋಗುವವರು ಟಿಕೆಟ್ ತೋರಿಸಿ ಸಂಚರಿಸಿ. ನಗರದಲ್ಲಿ ಒಟ್ಟು 36 ಚೆಕ್ ಪೊಸ್ಟ್ ಹಾಕಲು ಸೂಚನೆ ನೀಡಲಾಗಿದೆ. ಅಧಿಕಾರಿಗಳಿಗೆ ತುಂಬಾ ಕಟ್ಟುನಿಟ್ಟಾಗಿ ತಪಾಸಣೆ ನಡೆಸುವಂತೆ ಸೂಚಿಸಲಾಗಿದೆ. ಪ್ರಮುಖ ರಸ್ತೆಗಳಿಗೆ ಬ್ಯಾರಿಕೇಡ್ ಹಾಕಿ ಸಂಚಾರಕ್ಕೆ ನಿರ್ಬಂಧ ಹೇರಲಾಗುವುದು ಎಂದು ಮಂಗಳೂರು ಪೋಲಿಸ್ ಕಮೀಷನರ್ ಎನ್ ಶಶಿಕುಮಾರ್ ಹೇಳಿಕೆ ನೀಡಿದ್ದಾರೆ.

Sneha Gowda

Recent Posts

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

14 mins ago

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

30 mins ago

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

58 mins ago

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

1 hour ago

ಕಿಯಾ ಕಾರಿಗೆ ಅಡ್ಡ ಬಂದ ಕುದುರೆ: ಸರಣಿ ಅಪಘಾತ

ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…

1 hour ago

ಹಿರಿಯಡ್ಕ: ಕಾಲೇಜಿಗೆ ಹೋದ ಯುವತಿ ನಾಪತ್ತೆ

ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

1 hour ago