News Karnataka Kannada
Monday, April 29 2024
ಮಂಗಳೂರು

ನೈತಿಕ ಪೋಲಿಸ್ ಗಿರಿ ಸಮರ್ಥಿಸಿಕೊಂಡ ಮುಖ್ಯಮಂತ್ರಿಯ ಹೇಳಿಕೆಯಿಂದ ಕರಾವಳಿ ಜಿಲ್ಲೆಯಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದೆ : ಸಿಪಿಐಎಂ ತೀವ್ರ ಆತಂಕ

B Bommai
Photo Credit :
ಮಂಗಳೂರು : ಕರಾವಳಿ ಜಿಲ್ಲೆಯಲ್ಲಿ ನೈತಿಕ ಪೋಲಿಸ್ ಗಿರಿ ಪ್ರಕರಣಗಳು ವ್ಯಾಪಕವಾಗಿ ಹೆಚ್ಚುತ್ತಿದ್ದು, ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕಾದ ಪೋಲಿಸ್ ಇಲಾಖೆ ಮೂಕಪ್ರೇಕ್ಷಕರಾಗಿದ್ದು ಜಿಲ್ಲೆಯಲ್ಲಿ ಆತಂಕದ ಸನ್ನಿವೇಶ ನಿರ್ಮಾಣವಾಗಿದೆ.ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾದ ಮುಖ್ಯಮಂತ್ರಿಗಳು ಅಂತಹ ದುಷ್ಕ್ರತ್ಯಗಳಿಗೆ ಮತ್ತಷ್ಟು ಪ್ರೋತ್ಸಾಹ ನೀಡುವಂತೆ, ಭಾವನೆಗಳಿಗೆ ದಕ್ಕೆಯಾದಾಗ ಕ್ರಿಯೆಗೆ ಪ್ರತಿಕ್ರಿಯೆ ನಡೆಯುತ್ತದೆ ಎಂಬ ಹೇಳಿಕೆಯು ತೀರಾ ಖಂಡನೀಯವಾಗಿದೆ. ಇದರಿಂದ ಜಿಲ್ಲೆಯಲ್ಲಿ ಮತ್ತಷ್ಟು ಪ್ರಕ್ಷುಬ್ಧ ವಾತಾವರಣ ನಿರ್ಮಾಣಗೊಳ್ಳಲಿದೆ ಎಂದು ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದೆ.
ಬಿಜೆಪಿ ಸಂಘಪರಿವಾರ ತನ್ನ ಗುಪ್ತ ಅಜೆಂಡಾಗಳನ್ನು ಬಹಳ ವ್ಯವಸ್ಥಿತವಾಗಿ ಜಾರಿಗೊಳಿಸುತ್ತಿದ್ದು, ಶಿಕ್ಷಣ, ಉದ್ಯೋಗ,ಆರೋಗ್ಯ ಸೇರಿದಂತೆ ಜನರ ಬದುಕಿನ ವಿಚಾರಗಳನ್ನು ಬದಿಗೆ ಸರಿಸಿ ಕೇವಲ ಹಿಂದುತ್ವದ ಅಮಲನ್ನು ಯುವಜನತೆಯ ತಲೆಗೇರಿಸಿ ಕೋಮುದ್ವೇಷದಿಂದಲೇ ಜಿಲ್ಲೆಯ ರಾಜಕಾರಣವನ್ನು ನಿಯಂತ್ರಿಸುತ್ತಿದೆ.ಇದರಿಂದಾಗಿ ಪುಂಡುಪೋಕರಿಗಳು ಕಾನೂನನ್ನು ಕೈಗೆತ್ತಿ ಅಮಾಯಕರ ಮೇಲೆ ಧಾಳಿ ನಡೆಸುವ ಮೂಲಕ ಸಂಘಪರಿವಾರ ತನ್ನ ತಾಲಿಬಾನ್ ಸಂಸ್ಕ್ರತಿಯನ್ನು ಪ್ರದರ್ಶಿಸುತ್ತಿದೆ.ಇದನ್ನು ಕೂಡಲೇ ಮಟ್ಟ ಹಾಕಲು ಜಿಲ್ಲೆಯ ಪೋಲಿಸ್ ಇಲಾಖೆ ಹಾಗೂ ರಾಜ್ಯ ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸಿಪಿಐ(ಎಂ) ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು ಪತ್ರಿಕಾ ಹೇಳಿಕೆಯೊಂದರಲ್ಲಿ ತಿಳಿಸಿದ್ಸಾರೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು