Categories: ಮಂಗಳೂರು

ನ. 19 ಕ್ಕೆ ಎಡ್ವಿನ್ ಡಿ ’ ಸೊಜಾ ನುಡಿನಮನ ಕಾರ್ಯಕ್ರಮ

ಮಂಗಳೂರು: ಇತ್ತೀಚೆಗೆ ನಿಧನರಾದ, ತಮ್ಮ ’ಕಾಳೆಂ ಭಾಂಗಾರ್’ ಕಾದಂಬರಿಗೆ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿದ್ದ, ಹಿರಿಯ ಕೊಂಕಣಿ ಸಾಹಿತಿ ಎಡ್ವಿನ್ ಜೆ. ಎಫ್. ಡಿ’ ಸೊಜಾ ಇವರಿಗೆ, ಸಂತ ಎಲೋಶಿಯಸ್ ಕಾಲೇಜು(ಸ್ವಾಯತ್ತ) ಕೊಂಕಣಿ ಸಂಸ್ಥೆಯ ನೇತೃತ್ವದಲ್ಲಿ, ಸಾಹಿತ್ಯ ಅಕಾಡೆಮಿ, ಹೊಸ ದೆಹಲಿ, ವಿಶ್ವ ಕೊಂಕಣಿ ಕೇಂದ್ರ, ಶಕ್ತಿನಗರ, ಮೈಕಲ್ ಡಿ ಸೊಜಾ ವಿಶನ್ ಕೊಂಕಣಿ ಮತ್ತು ರಾಕ್ಣೊ ವಾರಪತ್ರಿಕೆ ಸಹಯೋಗದಲ್ಲಿ, ಕೊಂಕಣಿ ಸಂಘಟನೆಗಳ ವತಿಯಿಂದ ನ. 19 ಭಾನುವಾರ ಬೆಳಗ್ಗೆ 10 ಕ್ಕೆ, ಸಂತ ಅಲೋಶಿಯಸ್ ಕಾಲೇಜಿನ ಸಾನಿಧ್ಯ ಸಭಾಂಗಣದಲ್ಲಿ ನುಡಿನಮನ ಸಲ್ಲಿಸಲಾಗುವುದು.

ಗೋವಾ ವಿಶ್ವವಿದ್ಯಾಲಯದ ,ಕೊಂಕಣಿ ವಿಭಾಗ ವಿಶ್ರಾಂತ ಮುಖ್ಯಸ್ಥೆ ಡಾ| ಚಂದ್ರಲೇಖಾ ಡಿ’ಸೊಜಾ ಹಾಗೂ ಜ್ಞಾನಪೀಠ ಪುರಸ್ಕೃತ ಕೊಂಕಣಿ ಸಾಹಿತಿ ದಾಮೋದರ್ ಮಾವ್ಜೋ ಕೃತಿಯನ್ನು ಕನ್ನಡಕ್ಕೆ ಅನುವಾದಿಸಿದ ಕವಿ-ಕಥೆಗಾರ ಕಿಶೂ, ಬಾರ್ಕೂರು ಎಡ್ವಿನ್ ಡಿ ಸೊಜಾ ಇವರಿಗೆ ನುಡಿನಮನ ಸಲ್ಲಿಸಲಿದ್ದಾರೆ. ಸಂತ ಅಲೋಶಿಯಸ್ ಕಾಲೇಜಿನ, ಕೊಂಕಣಿ ಸಂಸ್ಥೆಯ ಮುಖ್ಯಸ್ಥ ವಂ| ಡಾ| ಮೆಲ್ವಿನ್ ಪಿಂಟೊ, ನೀರುಡೆ ಗೌರವಾರ್ಪಣೆ ಮಾಡಲಿದ್ದಾರೆ.

ಕೊಂಕಣಿ ಸಾಹಿತ್ಯ ಸಂಘಟನೆಗಳು, ಕೊಂಕಣಿ ಸಾಹಿತ್ಯದ ವಿದ್ಯಾರ್ಥಿಗಳು ಮತ್ತು ಎಡ್ವಿನ್ ಜೆ. ಎಫ್. ಡಿ ಸೊಜಾ ಅವರ ಅಭಿಮಾನಿಗಳಿಗೆ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಪುಷ್ಪನಮನ ಸಲ್ಲಿಸಲು ಅವಕಾಶವಿದೆ ಎಂದು ಸಂತ ಅಲೋಶಿಯಸ್ ಕಾಲೇಜು (ಸ್ವಾಯತ್ತ) ಕೊಂಕಣಿ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Ramya Bolantoor

Recent Posts

ಆಮ್ ಆದ್ಮಿ ಪಕ್ಷಕ್ಕೆ 7 ಕೋಟಿ ರೂ ವಿದೇಶಿ ಫಂಡಿಂಗ್: ತನಿಖೆ ಕೋರಿ ಗೃಹ ಸಚಿವಾಲಯಕ್ಕೆ ಇಡಿ ಪತ್ರ

ಆಮ್ ಆದ್ಮಿ ಪಕ್ಷಕ್ಕೆ  ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್‌ಸಿಆರ್‌ಎ ತನಿಖೆಯನ್ನು ಕೋರಿ…

2 hours ago

ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಸಾವು

ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…

2 hours ago

ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ: ಲೇವಡಿ ಮಾಡಿದ ಆರ್.‌ ಅಶೋಕ್‌

ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರದ…

2 hours ago

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

3 hours ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

3 hours ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

3 hours ago