ಬಂಟ್ವಾಳ: ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಗೊಂಡ ಕೇಪು ಗ್ರಾಮದ ಅಮೈ ನಿವಾಸಿ ಮಹಾಲಿಂಗ ನಾಯ್ಕ ಅವರ ಮನೆಗೆ ಬಂಟ್ವಾಳ ತಹಶೀಲ್ದಾರರ ನಿಯೋಗ ಭೇಟಿ ನೀಡಿ ಸನ್ಮಾನಿಸಲಾಯಿತು.
ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್ ಆರ್ ಅವರು ತಮ್ಮ ಸಿಬ್ಬಂದಿಗಳ ಜತೆ ಭೇಟಿ ನೀಡಿದ್ದು, ಮಹಾಲಿಂಗ ನಾಯ್ಕ ಅವರು ಕೊರೆದ ಸುರಂಗ ಮತ್ತು ತೋಟಗಳನ್ನು ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು. ಬಳಿಕ ಮಹಾಲಿಂಗ ನಾಯ್ಕ ಅವರನ್ನು ಶಾಲು ಹೊದಿಸಿ ಸನ್ಮಾನಿಸಿದರು.
ದ.ಕ ಜಿಲ್ಲಾಡಳಿತ ಮತ್ತು ತಾಲೂಕು ವತಿಯಿಂದ ನಡೆಸಿದ ಗೌರವಾರ್ಪಣೆ ತುಂಬನೇ ಖುಷಿ ತಂದಿದ್ದು, ಮತ್ತಷ್ಟು ಸಾಧನೆ ಮಾಡಲು ಪ್ರೇರಣೆಯಾಗಿದೆ ಎಂದು ಮಹಾಲಿಂಗ ನಾಯ್ಕ ಹೇಳಿದರು.
ಈ ಸಂದರ್ಭ ಉಪತಹಶೀಲ್ದಾರ್ ದಿವಾಕರ ಮುಗುಳ್ಯ, ನವೀನ್ ಕುಮಾರ್, ಕಂದಾಯ ನಿರೀಕ್ಷಕ ಮಂಜುನಾಥ, ಗ್ರಾಮ ಕರಣಿಕ ವಿನುತಾ, ಗ್ರಾಮ ಸಹಾಯಕ ಗಣೇಶ, ತಾಲೂಕ ಕಚೇರಿಯ ಸುಂದರ, ಶಿವಪ್ರಸಾದ್, ಮಹಮ್ಮದ್ ಆಸೀಪ್ ಭಾಗವಹಿಸಿದ್ದರು.
ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…