News Karnataka Kannada
Monday, May 06 2024
ಮಂಗಳೂರು

ಪಿಲಿಕುಳ ಮೃಗಾಲಯಕ್ಕೆ ಬಿಳಿ ಹುಲಿಯೊಂದು ಸೇರ್ಪಡೆ

White Tiger
Photo Credit :

ಮಂಗಳೂರು: ಪಿಲಿಕುಳ ಮೃಗಾಲಯಕ್ಕೆ ಹೊಸ ಅತಿಥಿಯ ಆಗಮನವಾಗಿದೆ. ಇಲ್ಲಿರುವ ಹುಲಿಗಳ ಜೊತೆಗೆ ಬಿಳಿ ಹುಲಿಯೊಂದು ಸೇರ್ಪಡೆಯಾಗಿದ್ದು, ಪಿಲಿಕುಳದ ಆಕರ್ಷಣೆಯ ಕೇಂದ್ರವಾಗಿದೆ.

ಕೇಂದ್ರ ಮೃಗಾಲಯ ಪ್ರಾಧಿಕಾರದ ಪ್ರಾಣಿ ವಿನಿಮಯ ಯೋಜನೆಯಡಿಯಲ್ಲಿ ಚೆನ್ನೈನ ಅರಿಗರ್ ಅಣ್ಣ ಮೃಗಾಲಯದಿಂದ ಒಂದು ಬಿಳಿ ಹೆಣ್ಣು ಹುಲಿ `ಕಾವೇರಿ’ ಮತ್ತು ಹೆಣ್ಣು ಉಷ್ಟ್ರ ಪಕ್ಷಿಯನ್ನು ತರಿಸಿಕೊಳ್ಳಲಾಗಿದೆ. ಅದೇ ರೀತಿ ಪಿಲಿಕುಳ ಮೃಗಾಲಯದಿಂದ ಒಂದು ಬೆಂಗಾಲ್ ಹುಲಿ `ಸಂಜಯ್’, ನಾಲ್ಕು ಕಾಡುನಾಯಿಗಳು ಮತ್ತು ಕೆಲವು ಉರಗಗಳನ್ನು ಕಳುಹಿಸಿ ಕೊಡಲಾಗಿದೆ. ಪಿಲಿಕುಳದಲ್ಲಿ ಈಗಾಗಲೇ ಹನೊಂದು ಹುಲಿಗಳು (ಏಳು ಗಂಡು ನಾಲ್ಕು ಹೆಣ್ಣು) ಮತ್ತು ಎರಡು ಗಂಡು ಉಷ್ಟ್ರಪಕ್ಷಿಗಳಿವೆ.

ಹೊಸ ಅತಿಥಿಯಾಗಿ ಆಗಮಿಸಿರುವ ಬಿಳಿ ಹುಲಿಯನ್ನು ಕ್ವಾರಂಟೈನ್‌ನಲ್ಲಿ ಪ್ರತ್ಯೇಕಿಸಿ ಇಡಲಾಗಿದ್ದು,ಸ್ಥಳೀಯ ಪರಿಸರಕ್ಕೆ ಒಗ್ಗಿದ ನಂತರ ವಾರದೊಳಗಾಗಿ ಸಾರ್ವಜನಿಕ ವೀಕ್ಷಣೆಗೆ ಬಿಡಲಾಗುವುದು ಎಂದು ಪಿಲಿಕುಳ ಜೈವಿಕ ಉದ್ಯಾನವನದ ನಿರ್ದೇಶಕ ಎಚ್.ಜೆ.ಭಂಡಾರಿ ತಿಳಿಸಿದ್ದಾರೆ.

ಗುಜರಾತಿನ ರಾಜಕೋಟ್ ಮೃಗಾಲಯದಿಂದ ಏಷ್ಯಾಟಿಕ್ ಸಿಂಹ, ಭಾರತೀಯ ತೋಳಗಳು ಮತ್ತು ಕೆಲವು ಅಪರೂಪದ ಪಕ್ಷಿಗಳನ್ನು, ಮಹರಾಷ್ಟ್ರದ ಗೋರೆವಾದ ಮೃಗಾಲಯದಿಂದ ಬಿಳಿ ಕೃಷ್ಣಮೃಗಗಳು ಮತ್ತು ಕರಡಿಗಳನ್ನು ಹಾಗೂ ಓಡಿಶದ ನಂದನಕಾನನ ಮೃಗಾಲಯದಿಂದ ಅಪರೂಪದ ಹೋಗ್ ಜಿಂಕೆ, ನೀಲಗಾಯಿಗಳು ಮತ್ತು ಪಕ್ಷಿಗಳನ್ನು ಪ್ರಾಣಿವಿನಿಮಯ ಯೋಜನೆಯಡಿಯಲ್ಲಿ ತರಿಸಿಕೊಳ್ಳಲು ಕ್ರಮಕೈಗೊಳ್ಳಲಾಗಿದೆ. ಶೀಘ್ರದಲ್ಲೆ ಕೇಂದ್ರ ಮೃಗಾಲಯ ಪ್ರಾಧಿಕಾರದ ಒಪ್ಪಿಗೆ ದೊರಕಿದೊಡನೆ ಕಾರ್ಯರೂಪಕ್ಕೆ ತರಲಾಗುವುದು ಎಂದು ಎಚ್.ಜೆ.ಭಂಡಾರಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು