Categories: ಮಂಗಳೂರು

ಪುಂಜಾಲಕಟ್ಟೆಯ  ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌: ಉಚಿತ ಸಾಮೂಹಿಕ ವಿವಾಹ ಸಮಾರಂಭ

ಬಂಟ್ವಾಳ:  ವಿವಿಧ ಸಾಮಾಜಿಕ, ಆರೋಗ್ಯ, ಸಾಂಸ್ಕೃತಿಕ, ಕ್ರೀಡಾ ಕ್ಷೇತ್ರಗಳಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಸಮಾಜ ಸೇವೆಗೈಯುತ್ತಿರುವ ಪುಂಜಾಲಕಟ್ಟೆಯ  ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 38ನೇ ಸಂಭ್ರಮಾಚರಣೆಯ ಪ್ರಯುಕ್ತ 14ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ಎ.24ರಂದು ಇಲ್ಲಿನ ಬಂಗ್ಲೆ ಮೈದಾನದಲ್ಲಿ ಜರಗಲಿದೆ ಎಂದು ಕ್ಲಬ್‌ನ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಅವರು  ತಿಳಿಸಿದ್ದಾರೆ.
ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನಲ್ಲಿ  ಶುಕ್ರವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು  ಮಾತನಾಡಿ ವಿವರ ನೀಡಿದರು.
ಎ.23 ರಂದು ಸಂಜೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ. ಎ.24ರಂದು  ಬೆಳಗ್ಗೆ ಶ್ರೀ ಗೋಪಾಲಕೃಷ್ಣ  ದೇವಸ್ಥಾನದಿಂದ ಮದುವೆ ಮಂಟಪದವರೆಗೆ ವಧು-ವರರ ದಿಬ್ಬಣ ಮೆರವಣಿಗೆ ವಿವಿಧ ಸ್ತಬ್ಧ ಚಿತ್ರ ಹಾಗೂ ಜಿಲ್ಲೆಯ ಪ್ರಸಿದ್ಧ ಕಲಾತಂಡಗಳೊಂದಿಗೆ ಕೇರಳ ಚೆಂಡೆಗಳ ಆಕರ್ಷಣೆಯೊಂದಿಗೆ ವೈಭವಪೂರ್ವಕವಾಗಿ ಸಾಗಿ ಬರಲಿದೆ.
ಗುರುವಾಯನಕೆರೆ ಕೃಷ್ಣಭಟ್ ಅವರ ಪೌರೋಹಿತ್ಯದಲ್ಲಿ , ಮಧ್ಯಾಹ್ನ 11ರ ಶುಭ ಮುಹೂರ್ತದಲ್ಲಿ 20 ಜೋಡಿ ವಧು-ವರರಿಗೆ ಸಾಮೂಹಿಕ ವಿವಾಹ ನಡೆಯಲಿದೆ. ಬಳಿಕ ನಡೆಯುವ ಸಭಾ ಕಾರ್ಯಕ್ರಮದಲ್ಲಿ  ವಿವಿಧ ಸಾಧಕರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ ಮತ್ತು ಸ್ವಸ್ತಿಕ್ ಸಂಭ್ರಮ ಪುರಸ್ಕಾರ ಮಾಡಲಾಗುವುದು ಏಂದು ಅವರು ತಿಳಿಸಿದರು.
ಶ್ರೀ ಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರು ಆಶೀರ್ವಚನ ನೀಡಲಿರುವರು.  ಸಚಿವ  ಕೋಟ ಶ್ರೀನಿವಾಸ ಪೂಜಾರಿ ಅವರು ಸಭಾ ಕಾರ್ಯಕ್ರಮ ಉದ್ಘಾಟಿಸಲಿರುವರು. ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು  ಅವರು ಅಧ್ಯಕ್ಷತೆ ವಹಿಸಲಿರುವರು. ಸಂಸದ ನಳಿನ್ ಕುಮಾರ್ ಕಟೀಲು ಅವರು ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಿರುವರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಸ್ವಸ್ತಿಕ್ ಸಂಭ್ರಮ ಪ್ರಶಸ್ತಿ ಪ್ರದಾನ ಮಾಡುವರು. ಉದ್ಯಮಿ ರವಿಶಂಕರ ಶೆಟ್ಟಿ ಬಡಾಜೆ ಅವರು ಮಂಗಳ ಸೂತ್ರ ವಿತರಿಸಲಿರುವರು.
ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಸಹಿತ   ವಿವಿಧ ಕ್ಷೇತ್ರಗಳ ಗಣ್ಯ ವ್ಯಕ್ತಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಮಧ್ಯಾಹ್ನ ಸಾರ್ವಜನಿಕರಿಗೆ ವಿವಾಹ ಭೋಜನ ಏರ್ಪಡಿಸಲಾಗಿದೆ. ಸಂಜೆ ಮಂತ್ರ ದೇವತೆ ಕ್ರಿಯೇಶನ್ಸ್ ಅವರ ನಿರ್ಮಾಣದ ಚಂದ್ರನ್ ಕಿರು ಚಿತ್ರ ಬಿಡುಗಡೆ,  ಕ್ಲಬ್ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮದ ಪ್ರಯುಕ್ತ ಕುದ್ರೋಳಿ ಗಣೇಶ್ ಅವರಿಂದ ಮಸ್ತ್ ಮ್ಯಾಜಿಕ್ ನಡೆಯಲಿದೆ. ಬಳಿಕ ಕಂಡನಿ ಬುಡೆದಿ  ತುಳುನಾಟಕ ನಡೆಯಲಿದೆ ಎಂದರು.
ಕ್ಲಬ್‌ನ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ,ಪದಾಧಿಕಾರಿಗಳಾದ ರಾಜೇಶ್ ಪಿ. ಬಂಗೇರ, ಪ್ರಭಾಕರ ಪಿ.ಎಂ., ಉಪಸ್ಥಿತರಿದ್ದರು.
Sneha Gowda

Recent Posts

ಜಮ್ಮು & ಕಾಶ್ಮೀರದ ಅನಂತ್‌ನಾಗ್‌-ರಾಜೌರಿ ಕ್ಷೇತ್ರದ ಮತದಾನ ಮುಂದೂಡಿಕೆ

ಲೋಕಸಭಾ ಚುನಾವಣೆ ಯ ಎರಡು ಹಂತದ ಮತದಾನ ಈಗಾಗಲೇ ಮುಗಿದಿದೆ. ಮೇ 7ರಂದು ಮೂರನೇ ಹಂತದ ಮತದಾನ ನಡೆಯಲಿದೆ. ಈ…

4 mins ago

ಮೇ 01 ರಂದು ಕರ್ನಾಟಕಕ್ಕೆ ಅಮಿತ್​ ಶಾ ಎಂಟ್ರಿ

ಲೋಕಸಭಾ ಚುನಾವಣಾ ಹಿನ್ನಲೆ ಮೊದಲ ಹಂತದ ಮತದಾನ ಈಗಾಗಲೇ ಮುಗಿದಿದ್ದು ಇದೀಗ 2ನೇ ಹಂತದ ಚುನಾವಣೆ ಪ್ರಚಾರ ಭರ್ಜರಿಯಾಗಿ ಸಾಗುತ್ತಿದೆ.ಪ್ರಧಾನಿ…

14 mins ago

ಆಂಪಿಯರ್ ಎಲೆಕ್ಟ್ರಿಕ್ ಕಂಪೆನಿ ಬಿಡುಗಡೆ ಮಾಡುತ್ತಿದೆ ನೆಕ್ಸಸ್ ಇವಿ ಸ್ಕೂಟರ್

ಗ್ರೀವ್ ಕಾಟನ್ ಮಾಲೀಕತ್ವದ ಆಂಪಿಯರ್ ಎಲೆಕ್ಟ್ರಿಕ್ ಕಂಪನಿ ತನ್ನ ಹೊಚ್ಚ ಹೊಸ ನೆಕ್ಸಸ್ ಇವಿ ಸ್ಕೂಟರ್ ಬಿಡುಗಡೆ ಮಾಡಿದ್ದು, ಹೊಸ…

33 mins ago

ಜೆಡಿಎಸ್ ತೊರೆದ ಮುಖಂಡರು ಕಾಂಗ್ರೆಸ್ ಸೇರ್ಪಡೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಮಠಾಣ, ನಿಜಾಂಪುರ, ಕೊಳಾರ(ಕೆ), ಗೋರನಳ್ಳಿ ಸೇರಿದಂತೆ ವಿವಿಧ ಗ್ರಾಮಗಳ ಜೆಡಿಎಸ್ ಮುಖಂಡರು ಪಕ್ಷ…

59 mins ago

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೈವೋಲ್ಟೇಜ್ ಕ್ಷೇತ್ರ ಅಫಜಲಪುರಕ್ಕೆ ಆಗಮನ

ಜಿಲ್ಲೆಯ ಬಿಜೆಪಿ ಲೋಕಸಭಾ ಅಭ್ಯರ್ಥಿ ಉಮೇಶ ಜಾಧವ್ ಅವರ ಪ್ರಚಾರ ನಿಮಿತ್ಯ ಜಿಲ್ಲೆಯ ಹೈವೊಲ್ಟೇಜ್ ಕ್ಷೇತ್ರ ಅಫಜಲಪುರ ಪಟ್ಟಣದಲ್ಲಿ ಬಿಜೆಪಿ…

1 hour ago

ಲೋಕಸಭಾ ಚುನಾವಣೆ : ಕಾಂಗ್ರೆಸ್​ ಹೊಸ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಲೋಕಸಭಾ ಚುನಾವಣೆಗೆ ಹಿನ್ನಲೆ ಸಂಬಂಧಿಸಿದಂತೆ ಇಂದು ಅಭ್ಯರ್ಥಿಗಳ ಹೊಸ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಬಿಡುಗಡೆ ಮಾಡಿರುವ ಕಾಂಗ್ರೆಸ್ ಪಕ್ಷದ…

1 hour ago