News Karnataka Kannada
Tuesday, April 30 2024
ಮಂಗಳೂರು

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ : ಎ.17,ಸಾಮೂಹಿಕ ವಿವಾಹ ನಿಶ್ಚಿತಾರ್ಥ

Children born late in marriage are a problem!
Photo Credit :
ಬಂಟ್ವಾಳ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ ೩೮ನೇ ವರ್ಷಾಚರಣೆ ಪ್ರಯುಕ್ತ  ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಎ.೨೪ರಂದು ನಡೆಯಲಿರುವ ೧೪ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ಪ್ರಯುಕ್ತ ವಧು-ವರರ ನಿಶ್ಚಿತಾರ್ಥ ಕಾರ್ಯಕ್ರಮ ಎ.೧೭ರಂದು ಪುಂಜಾಲಕಟ್ಟೆ ಬಂಗ್ಲೆ ಮೈದಾನದ ಒಳಾಂಗಣ ಕ್ರೀಡಾಂಗಣದ  ಸಭಾಂಗಣದಲ್ಲಿ ಜರಗಲಿದೆ.
ಈ ಬಾರಿ ಒಟ್ಟು ೩೦ ಜೋಡಿಗಳಿಗೆ ವಿವಾಹ ನಡೆಯಲಿದ್ದು,  ಇದಕ್ಕೆ ಪೂರ್ವಭಾವಿಯಾಗಿ ತುಳುನಾಡಿನ ಸಂಪ್ರದಾಯ ಪ್ರಕಾರ ನಿಶ್ಚಿತಾರ್ಥ ನಡೆಯಲಿದೆ. ಈ ಸಂದರ್ಭದಲ್ಲಿ ಭಾವೀ ವಧು-ವರರಿಗೆ ಮಂಗಳವಸ್ತ್ರವನ್ನು ವಿತರಿಸಲಾಗುವುದು.ಬಂಟ್ವಾಳ ಡಿವೈಎಸ್‌ಪಿ ಪ್ರತಾಪ್ ಸಿಂಗ್ ಥೊರಾಟ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಮಂಗಳೂರು ಉದ್ಯಮಿ ಶಶಿಧರ ಶೆಟ್ಟಿ ಕೊಳಂಬೆ ಅವರು   ಅಧ್ಯಕ್ಷತೆ ವಹಿಸುವರು.
ಬಂಟ್ವಾಳ ಮೆಸ್ಕಾಂ ಮುಖ್ಯ ಕಾರ್ಯ ನಿರ್ವಾಹಕ ಅಭಿಯಂತರ ರಾಮಚಂದ್ರಅವರು  ಮಂಗಳ ವಸ್ತ್ರ ವಿತರಿಸುವರು. ವಿವಿಧ ಕ್ಷೇತ್ರಗಳ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿರುವರು ಎಂದು ಕ್ಲಬ್ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಅವರು  ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು