ಬೆಳ್ತಂಗಡಿ: ಖ್ಯಾತ ಚಲನಚಿತ್ರನಟ ಪುನೀತ್ರಾಜ್ ಕುಮಾರ್ ಅವರ ನಿಧನಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ತೀವ್ರ ಸಂತಾಪ ಸೂಚಿಸಿದ್ದಾರೆ.
ಸುದ್ದಿ ತಿಳಿದು ಆಘಾತವಾಯಿತು. ಅವರ ನೇರ ನಡೆ-ನುಡಿ, ಸಜ್ಜನಿಕೆ ಮತ್ತು ಸರಳ ವ್ಯಕ್ತಿತ್ವವನ್ನು ನಾನು ಕೂಡಾ ಮೆಚ್ಚಿಕೊಂಡಿದ್ದೇನೆ. ಅವರ ಭಾವಪೂರ್ಣ ನಟನೆಯಿಂದಾಗಿ ಅವರು ಕನ್ನಡಿಗರ ವಿಶೇಷ ಅಭಿಮಾನ ಮತ್ತು ಗೌರವಕ್ಕೆ ಪಾತ್ರರಾಗಿದ್ದರು.
ಅವರು ವಿಧಿವಶರಾಗಿರುವುದು ನಮಗೆಲ್ಲರಿಗೂ ತೀವ್ರ ದುಃಖವನ್ನುಂಟುಮಾಡಿದೆ. ಅವರ ಅಭಿಮಾನಿಗಳೆಲ್ಲರೂ ಈ ಸಂದರ್ಭವನ್ನು ತಾಳ್ಮೆಯಿಂದ ಸ್ವೀಕರಿಸಿ ಅವರ ಆತ್ಮಕ್ಕೆ ಚಿರಶಾಂತಿ ಕೋರೋಣ.
ಅವರು ಧರ್ಮಸ್ಥಳದಲ್ಲಿ ಒಂದೆರಡು ಕಾರ್ಯಕ್ರಮಗಳಲ್ಲಿ ಭಾಗವಹಿಸಿರುತ್ತಾರೆ. ನಾನು ಶ್ರೀ ಮಂಜುನಾಥ ಸ್ವಾಮಿಯಲ್ಲಿ ಪ್ರಾರ್ಥಿಸಿ ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಅವರ ಅಗಲುವಿಕೆಯಿಂದ ಕುಟುಂಬವರ್ಗದವರಿಗೆ ಮತ್ತು ಅಭಿಮಾನಿಗಳಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಹರಸಲೆಂದು ಪ್ರಾರ್ಥಿಸಿದ್ದಾರೆ.
ಪುನೀತ್ರಾಜ್ ಕುಮಾರ್ ಅವರ ನಿಧನಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ತೀವ್ರ ಸಂತಾಪ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.