ಮಂಗಳೂರು: ಕಾಲೇಜಿನ ಪ್ರಾಧ್ಯಾಪಕಿಯೋರ್ವರ ಬಗ್ಗೆ ಕೀಳು ಮಟ್ಟದ ಭಾಷೆಯಲ್ಲಿ ಹಾಗೂ ಮಾನಹಾನಿಕರ ವಾಗಿ ಪತ್ರವನ್ನು ಬರೆದು ಸಾರ್ವಜನಿಕ ಸ್ಥಳದಲ್ಲಿ ಪೋಸ್ಟರ್ ಗಳನ್ನು ಅಂಟಿಸಿ ಕಿರುಕುಳ ನೀಡುತ್ತಿದ್ದ ಪ್ರಕರಣದ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಸ್ಟಡಿಯಲಿದ್ದ ಲೈಲಾದ ಪ್ರಕಾಶ್ ಶೆಣೈಗೆ ನ್ಯಾಯಾಲಯ ಜಾಮೀನು ನೀಡಿ ಬಿಡುಗಡೆಗೊಳಿಸಿದೆ.
ಮತ್ತಿಬ್ಬರು ಆರೋಪಿಗಳಾದ ಪ್ರದೀಪ್ ಪೂಜಾರಿ ಹಾಗೂ ತಾರನಾಥ ಬಿ. ಎಸ್ ಶೆಟ್ಟಿ ಇವರನ್ನು ಸಿಸಿಬಿ ಪೊಲೀಸರು ಹೆಚ್ಚಿನ ವಿಚಾರಣೆಗೆ ಮತ್ತೆರಡು ದಿನ ಪೊಲೀಸ್ ಕಸ್ಟಡಿಗೆ ಪಡೆದಿದ್ದಾರೆ. ಆರೋಪಿಗಳು ಕೆಲವು ಉಪನ್ಯಾಸಕಿಯರಿಗೆ ಹಾಗೂ ವಿದ್ಯಾರ್ಥಿನಿ ಯರಿಗೂ ಮಾನಸಿಕ ಕಿರುಕುಳ ನೀಡಿರುವ ಬಗ್ಗೆ ಪೊಲೀಸ್ ಕಸ್ಟಡಿ ಸಂದರ್ಭ ವಿಚಾರಣೆಯ ವೇಳೆ ತಿಳಿಸಿದ್ದಾರೆ.
ಕಾಲೇಜಿನಲ್ಲಿ ತಮ್ಮದೇ ಮಾತುಗಳನ್ನು ಎಲ್ಲರೂ ಪಾಲಿಸಬೇಕು ಇಲ್ಲದಿದ್ದರೆ ಯಾರಿಗೂ ಭವಿಷ್ಯವಿಲ್ಲ ಎಂಬಂತೆ ವರ್ತಿಸುತ್ತಿದ್ದರು, ಈ ಹಿಂದೆಯೂ ಕೆಲವೊಂದು ಉಪನ್ಯಾಸಕಿಯರಿಗೆ ಹಾಗೂ ವಿದ್ಯಾರ್ಥಿಗಳಿಗೆ ಕಿರುಕುಳ ನೀಡುತ್ತಿದ್ದರು ಪೊಲೀಸರಿಗೆ ದೂರು ನೀಡದಂತೆ ಬೆದರಿಕೆ ಯೊಡ್ಡಿದ್ದರು ಎಂದು ಪೊಲೀಸ್ ವಿಚಾರಣೆಯ ವೇಳೆ ಬೆಳಕಿಗೆ ಬಂದಿದೆ.