Categories: ಮಂಗಳೂರು

ಫೆ.28 ರಂದು ಬೆಳಗಾವಿ, ಧಾರವಾಡ ಮತ್ತು ದ.ಕಜಿಲ್ಲೆಗಳಲ್ಲಿ ತಾತ್ಕಾಲಿಕ ಪ್ರವಾಸ ಕೈಗೊಳ್ಳಲಿರುವ ಬೊಮ್ಮಾಯಿ

ಫೆಬ್ರವರಿ 28 ರಂದು ಬೆಳಗಾವಿ, ಧಾರವಾಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ತಾತ್ಕಾಲಿಕ ಪ್ರವಾಸ ಕೈಗೊಳ್ಳಲಿರುವ  ಶ್ರೀ ಬಸವರಾಜ ಬೊಮ್ಮಾಯಿ, ಮಾನ್ಯ ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ.

ಫೆ.28 ಸೋಮವಾರ ಬೆಳಿಗ್ಗೆ 09.15 ರ ವೇಳೆ ಹೆಚ್.ಎ.ಎಲ್ ವಿಮಾನ ನಿಲ್ದಾಣ, ಬೆಂಗಳೂರುನಿಂದ ವಿಶೇಷ ವಿಮಾನದ ಮೂಲಕ ಹೊರಟು  10.30 ರ ವೇಳೆ ಸಾಂಬ್ರಾ ವಿಮಾನ ನಿಲ್ದಾಣ, ಬೆಳಗಾವಿ, ಬೆಳಗಾವಿ ಜಿಲ್ಲೆ ತಲುಪಲಿದ್ದಾರೆ.

11.00 ರ ವೇಳೆ ರಾಷ್ಟ್ರೀಯ ಹೆದ್ದಾರಿಗಳ ಮಂತ್ರಾಲಯ ಮತ್ತು ಭಾರತೀಯ ಹೆದ್ದಾರಿಗಳ ಪ್ರಾಧಿಕಾರ ಹಾಗೂ ಲೋಕೋಪಯೋಗಿ ಇಲಾಖೆ, ಕರ್ನಾಟಕ ಸರ್ಕಾರ ಇವರ ಸಹಯೋಗದಲ್ಲಿ ಆಯೋಜಿಸಿರುವ 05 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಶಂಕುಸ್ಥಾಪನೆ ಸಮಾರಂಭ ನಡೆಯಲಿದೆ (ರೂ.3,972 ಕೋಟಿ ವೆಚ್ಚ ಹಾಗೂ 238 ಕಿ.ಮೀ. ಉದ್ದ). ಈ ವೇಳೆ ಶ್ರೀ ನಿತಿನ್ ಗಡ್ಕರಿ, ಮಾನ್ಯ ಕೇಂದ್ರ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಸಚಿವರು ಭಾಗವಹಿಸಲಿದ್ದಾರೆ.

ಮಧ್ಯಾಹ್ನ 12.30 ರ ವೇಳೆ ಜಿಲ್ಲಾ ಕ್ರೀಡಾಂಗಣ, ನೆಹರು ನಗರ, III: ಅಂಬೇಡ್ಕರ್‌ ರಸ್ತೆ, ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣ, ಬೆಳಗಾವಿಯಿಂದ ವಿಶೇಷ ವಿಮಾನದ ಮೂಲಕ ಹೊರಟು 1 ರ ವೇಳೆ ಹುಬ್ಬಳ್ಳಿ, ವಿಮಾನ ನಿಲ್ದಾಣ, ಹುಬ್ಬಳ್ಳಿ, ಧಾರವಾಡ ಜಿಲ್ಲೆ ತಲುಪಲಿದ್ದಾರೆ.

01.20ರ ವೇಳೆ ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಭಾರತ ಸರ್ಕಾರ, ಕ್ಷೇತ್ರ ಜನಸಂಪರ್ಕ ಕಾರ್ಯಾಲಯ, ಧಾರವಾಡ ವತಿಯಿಂದ ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿ ನೀಡುವ ಪ್ರಚಾರ ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡುವುದು. ಈ ವೇಳೆ  ಶ್ರೀ ನಿತಿನ್ ಗಡ್ಕರಿ, ಮಾನ್ಯ ಕೇಂದ್ರ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಸಚಿವರು  ಭಾಗವಹಿಸಲಿದ್ದಾರೆ.

01.30 ರ ವೇಳೆ ರಾಷ್ಟ್ರೀಯ ಹೆದ್ದಾರಿಗಳ ಮಂತ್ರಾಲಯ ಮತ್ತು ಭಾರತೀಯ ಹೆದ್ದಾರಿಗಳ ಪ್ರಾಧಿಕಾರ ಹಾಗೂ ಲೋಕೋಪಯೋಗಿ ಇಲಾಖೆ, ಕರ್ನಾಟಕ ಸರ್ಕಾರ ಇವರ ಸಹಯೋಗದಲ್ಲಿ ಆಯೋಜಿಸಿರುವ 26 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಲೋಕಾರ್ಪಣೆ ಸಮಾರಂಭ ನಡೆಯಲಿದೆ. ಈ ವೇಳೆ ಶ್ರೀ ನಿತಿನ್ ಗಡ್ಕರಿ, ಮಾನ್ಯ ಕೇಂದ್ರ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಸಚಿವರು ಭಾಗವಹಿಸಲಿದ್ದಾರೆ.

03.00 ರ ವೇಳೆ ಹುಬ್ಬಳ್ಳಿ ವಿಮಾನ ನಿಲ್ದಾಣ, ಹುಬ್ಬಳ್ಳಿ, ಧಾರವಾಡ ಜಿಲ್ಲೆಯಿಂದ ವಿಶೇಷ ವಿಮಾನದ ಮೂಲಕ ಹೊರಟು 03.45 ರ ವೇಳೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಬಟ್ಟೆ, ಮಂಗಳೂರು, ದಕ್ಷಿಣ ಕನ್ನಡ ಜಿಲ್ಲೆ ತಲುಪಲಿದ್ದಾರೆ.

04.30 ರ ವೇಳೆ ರಾಷ್ಟ್ರೀಯ ಹೆದ್ದಾರಿಗಳ ಮಂತ್ರಾಲಯ ಮತ್ತು ಭಾರತೀಯ ಹೆದ್ದಾರಿಗಳ ಪ್ರಾಧಿಕಾರ ಹಾಗೂ ಲೋಕೋಪಯೋಗಿ ಇಲಾಖೆ, ಕರ್ನಾಟಕ ಸರ್ಕಾರ ಇವರ ಸಹಯೋಗದಲ್ಲಿ ಆಯೋಜಿಸಿರುವ 15 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಲೋಕಾರ್ಪಣೆ ಸಮಾರಂಭ ನಡೆಯಲಿದೆ.

ಸಂಜೆ 06.00 ರ ವೇಳೆ ಕೆನರಾ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ (ಕೆ.ಸಿ.ಸಿ.ಐ), ಕರ್ನಾಟಕ – ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ಮಾಧ್ಯಮದವರೊಂದಿಗೆ ಮಾತನಾಡುವ ವೇಳೆ ನಳೀನ್ ಕುಮಾರ್ ಕಟೀಲ್ ತಿಳಿಸಿದರು.

Sneha Gowda

Recent Posts

ಡ್ರಾಪ್​ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನ

ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ಯುವಕನೋರ್ವ ಡ್ರಾಪ್​ ಕೊಡುವ ನೆಪದಲ್ಲಿ  ತಡರಾತ್ರಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ…

18 seconds ago

ಇಬ್ರಾಹಿಂ ರೈಸಿ ನಿಧನ: ನಾಳೆ ಭಾರತದಲ್ಲಿ ಒಂದು ದಿನದ ‘ಶೋಕಾಚರಣೆ’

ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ನಾಳೆ (ಮೇ 21) ಭಾರತದಲ್ಲಿ ಒಂದು ದಿನದ ರಾಜ್ಯ…

8 mins ago

ಪ್ರಕಟಣೆಯಾದ ಸಂಶೋಧನಾ ಬರಹಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ: ಡಾ. ಸುಧಾಕರ್ ವೈ.ಎನ್

ವಿದ್ಯಾರ್ಥಿಗಳು ಪ್ರಕಟಿಸುವ ಸಂಶೋಧನಾ ಬರಹಗಳು ಉನ್ನತ ವೇತನ ಶ್ರೇಣಿಯ ವೃತ್ತಿ ಅವಕಾಶಗಳನ್ನು ಪಡೆದುಕೊಳ್ಳುವಲ್ಲಿ ಉಪಯುಕ್ತವಾಗುತ್ತವೆ ಎಂದು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್…

12 mins ago

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಪಲಿತಾಂಶ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವನ್ನು…

22 mins ago

ಮಲ್ಲಮ್ಮ ಜಯಂತಿ ಆಚರಣೆಯ ದಿನ ಅಗೌರವ ತೋರಿದ ಪಿಡಿಒ ವಿರುದ್ಧ ಕ್ರಮಕ್ಕೆ ಆಗ್ರಹ

ಚಿಟಗುಪ್ಪ ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆಯ ದಿನದಂದು ಬೇಜವಾಬ್ದಾರಿತನದಿಂದ ವರ್ತಿಸಿ…

27 mins ago

ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವು

ಬನಹಟ್ಟಿ ಪಟ್ಟಣದಲ್ಲಿ ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

1 hour ago