News Karnataka Kannada
Friday, May 03 2024
ಮಂಗಳೂರು

ಬಂಟ್ವಾಳ ನಿರೀಕ್ಷಣಾ ಮಂದಿರಕ್ಕೆ ಭೇಟಿ ನೀಡಿದ ರೈತಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ

New Project (36)
Photo Credit :

ಬಂಟ್ವಾಳ: ಕೇಂದ್ರ ಕೃಷಿ ಮತ್ತು ರೈತಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆಯವರು ಭಾನುವಾರ ಬಂಟ್ವಾಳ ನಿರೀಕ್ಷಣಾ ಮಂದಿರಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಕೇಂದ್ರದ ನೂತನ ಸಚಿವೆಯನ್ನು ಭಗವದ್ಗೀತೆ ನೀಡಿ ಅಭಿನಂದಿಸಿ ಸಚಿವೆ ಶೋಭಾ ಕರಂದ್ಲಾಜೆಯವರೊಂದಿಗೆ ಸಹೋದರತ್ವದ ಪ್ರತೀಕವಾದ ರಕ್ಷಾಬಂಧನ ಆಚರಿಸಿದರು.
ಪ್ರತಿ ತಾಲೂಕಿನಲ್ಲಿ ಮುಂದಿನ ದಿನಗಳಲ್ಲಿ FPO(ರೈತರ ಉತ್ಪಾದಕರ ಸಂಸ್ಥೆ) ಪ್ರಾರಂಭಿಸುವುದಾಗಿ ಕೃಷಿ ಸಚಿವೆ ಈ ಸಂದರ್ಭದಲ್ಲಿ ಹೇಳಿದರು.ಕಿಯೋನಿಕ್ಸ್ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್ ರವರು ಕೋಟಿ-ಚೆನ್ನಯರ ಚರಿತ್ರೆ ಪುಸ್ತಕವನ್ನು ಸಚಿವೆಗೆ ನೀಡಿ ಅಭಿನಂದಿಸಿದರು.ಈ ಸಂದರ್ಭದಲ್ಲಿ ರಾಜ್ಯ ನಗರ ನೀರು ಮತ್ತು ಒಳಚರಂಡಿ ಮಂಡಳಿಯ ಸುಲೋಚನಾ ಜಿ.ಕೆ ಭಟ್,ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ,ಬೂಡ ಅಧ್ಯಕ್ಷರಾದ ದೇವದಾಸ ಶೆಟ್ಟಿ,ಜಿಲ್ಲಾ ಬಿಜೆಪಿ ಪ್ರ.ಕಾರ್ಯದರ್ಶಿ ರಾಮದಾಸ ಬಂಟ್ವಾಳ, ಬಂಟ್ವಾಳ ಬಿಜೆಪಿ ಪ್ರ.ಕಾರ್ಯದರ್ಶಿಗಳಾದ ಡೊಂಬಯ ಅರಳ,ರವೀಶ್ ಶೆಟ್ಟಿ ಕರ್ಕಳ, ಪ್ರಮುಖರಾದ ರಮಾನಾಥ ರಾಯಿ,ಚಿದಾನಂದ ರೈ ಕಕ್ಯ,ಗಣೇಶ್ ರೈ ಮಾಣಿ,ಸುದರ್ಶನ್ ಬಜ,ಪುರುಷೋತ್ತಮ ಶೆಟ್ಟಿ ವಾಮದಪದವು,ನಂದರಾಮ ರೈ,ಆನಂದ ಶಂಭೂರು,ಪ್ರಕಾಶ್ ಅಂಚನ್ ಉಪಸ್ಥಿತರಿದ್ದರು.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು