News Karnataka Kannada
Wednesday, May 01 2024
ಮಂಗಳೂರು

ಬಂಟ್ವಾಳ: ಬಿಜೆಪಿ ಸೋಲಿಸಿದರೆ ಮತೀಯ ರಾಜಕಾರಣದ ನಡು ಮುರಿದಂತೆ : ಮುನೀರ್ ಕಾಟಿಪಳ್ಳ

Bantwal: Defeating BJP will break the middle of communal politics: Muneer Katipalla
Photo Credit : By Author

 

ಬಂಟ್ವಾಳ: ಬಿಜೆಪಿಯನ್ನು ಸೋಲಿಸಿದರೆ ದಕ್ಷಿಣ ಕ‌ನ್ನಡ ಜಿಲ್ಲೆಯ ಕೋಮು ರಾಜಕಾರಣದ ನಡು ಮುರಿದಂತೆ.ಆಗ ಮಾತ್ರ ಶಿಕ್ಷಣ, ಉದ್ಯೋಗ, ಆರೋಗ್ಯದಂತಹ ಜನಸಾಮಾನ್ಯರ ಪ್ರಶ್ನೆಗಳು ಮುನ್ನಲೆಗೆ ಬರುತ್ತದೆ. ದುಡಿಯುವ ಜನರ ಹಕ್ಕುಗಳ ಕುರಿತು ಚರ್ಚೆ ಆರಂಭಗೊಳ್ಳುತ್ತದೆ. ಕಾರ್ಮಿಕ ವರ್ಗ ಆ ನಿಟ್ಟಿನಲ್ಲಿ ಒಗ್ಗಟ್ಟಿನಿಂದ ಮತ ಚಲಾಯಿಸಿ ಬಂಟ್ವಾಳದಲ್ಲಿ ಬಿಜೆಪಿಯನ್ನು ಸೋಲಿಸಲು ಮುಂದಾಗಬೇಕು ಎಂದು ಸಿಪಿಐಎಂ ಮುಖಂಡ ಮುನೀರ್ ಕಾಟಿಪಳ್ಳ ಹೇಳಿದರು.

ಅವರು ಬಂಟ್ವಾಳ ತಾಲೂಕು ಮಂಡಾಡಿಯಲ್ಲಿ ಸಿಪಿಐಎಂ ಸ್ಥಳೀಯ ಸಮಿತಿ ಆಯೋಜಿಸಿದ್ದ ಚು‌ನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಮುಂದುವರಿಸುತ್ತಾ ಅವರು, ಅತ್ಯಂತ ಹೆಚ್ಚು ಗ್ರಾಮೀಣ ಪ್ರದೇಶಗಳನ್ನು ಒಳಗೊಂಡ ಬಂಟ್ವಾಳ ಕ್ಷೇತ್ರದಲ್ಲಿ ಕಳೆದ ಐದು ವರ್ಷದಲ್ಲಿ ಜನಸಾಮಾನ್ಯರ ಬದುಕಿಗೆ ಸಂಬಂಧಿಸಿ ಯಾವುದೇ ಅಭಿವೃದ್ದಿ ಕಾರ್ಯಗಳು ನಡೆದಿಲ್ಲ. ಸರಕಾರಿ ಶಾಲಾ ಕಾಲೇಜು, ಆಸ್ಪತ್ರೆ, ಉದ್ಯೋಗ ಸೃಷ್ಟಿಗೆ ಸಂಬಂಧಿಸಿ ಬಿಜೆಪಿ ಶಾಸಕರು ದಯನೀಯ ವೈಫಲ್ಯ ಕಂಡಿದ್ದಾರೆ. ಧರ್ಮಗಳ ನಡುವೆ ಎತ್ತಿಕಟ್ಟುವ ದ್ವೇಷದ ರಾಜಕಾರಣದಿಂದ ಗೆಲುವು ಸಾಧಿಸಿದರು ಬಿಜೆಪಿ ಶಾಸಕರು ಈಗಲೂ ಅದೇ ದಾರಿಯಲ್ಲಿ ಚುನಾವಣೆ ಎದುರಿಸುತ್ತಿದ್ದಾರೆ. ಇಂತಹ ಜನ ವಿರೋಧಿ ಬಿಜೆಪಿಯನ್ನು ಸೋಲಿಸುವುದು ಕಾರ್ಮಿಕ ವರ್ಗ ಆದ್ಯತೆ ಎಂದು ಹೇಳಿದರು.

ಸಭೆಯಲ್ಲಿ ಭಾಗವಹಿಸಿದ ಸಿಪಿಐಎಂ ಬಂಟ್ವಾಳ ತಾಲೂಕು ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು ಮಾತನಾಡುತ್ತಾ, ಬಂಟ್ವಾಳ ತಾಲೂಕಿನ ಮುಗ್ಧ ಯುವಕರ ಮೆದುಳಿಗೆ  ಧರ್ಮರಕ್ಷಣೆಯ ಅಮಲನ್ನು ಸೇರಿಸಿ ಧ್ವೇಷ ರಾಜಕಾರಣವನ್ನೇ ಸಾಧನೆಯನ್ನಾಗಿಸಿದ ಬಿಜೆಪಿ ಶಾಸಕರು ಕ್ಷೇತ್ರದ ಅಭಿವೃದ್ದಿ ಗೆ ಕಿಂಚಿತ್ತೂ ಗಮನ ನೀಡಿಲ್ಲ.ಆದರೆ ಗ್ರಾಮ ವಿಕಾಸ ಯಾತ್ರೆಯ ಮೂಲಕ ಸುಳ್ಳುಗಳ ಸರಮಾಲೆಯನ್ನು ಪೋಣಿಸಿ ಜನತೆಗೆ ಮಂಕು ಭೂದಿ ಎರಚಿದ್ದಾರೆ ಎಂದು ಹೇಳಿದರು.

ಸಭೆಯ ಅಧ್ಯಕ್ಷತೆಯನ್ನು ಸಿಪಿಐಎಂ ಬಂಟ್ವಾಳ ತಾಲೂಕು ಮುಖಂಡರಾದ ಬಿ ಉದಯ ಕುಮಾರ್ ರವರು ವಹಿದ್ದರು.
ವೇದಿಕೆಯಲ್ಲಿ ಕಾರ್ಮಿಕ ಮುಖಂಡರಾದ ಗಿರಿಜಾ, ಕುಶಲ,ಯುವಜನ ನಾಯಕರಾದ ಸುರೇಂದ್ರ ಕೋಟ್ಯಾನ್ ಜಯಶೀಲ ಮುಂತಾದವರು ಉಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
15229
Jaya Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು