Categories: ಮಂಗಳೂರು

ಬಯಲು ರಂಗ ಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ

ಮಂಗಳೂರು, ಜ 17 : ಮಂಗಳೂರಿನ ಉರ್ವಸ್ಟೋರ್‌ನಲ್ಲಿರುವ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಆವರಣದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ, ಮಂಗಳೂರು ಇದರ ಅನುದಾನದಲ್ಲಿ ಬಯಲು ರಂಗ ಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ಸೋಮವಾರ ನೆರವೇರಿತು.

ಶಿಲಾನ್ಯಾಸ ನೆರವೇರಿಸಿದ ಶಾಸಕ ಡಿ. ವೇದವ್ಯಾಸ ಕಾಮತ್ ಮಾತನಾಡಿ, ಮಂಗಳೂರು ಕೇಂದ್ರೀಕರಿಸಿ ಬಯಲು ರಂಗ ಮಂದಿರ ನಿರ್ಮಾಣ ಮಾಡಬೇಕೆಂಬ ಬೇಡಿಕೆ ಹಲವು ಸಮಯಗಳಿಂದಿತ್ತು. ಇದೀಗ ರೂ.25 ಲಕ್ಷ ವೆಚ್ಚದಲ್ಲಿ ನಿರ್ಮಾಣಕ್ಕೆ ಮುಂದಾಗಿದ್ದು, ಶಂಕುಸ್ಥಾಪನೆ ನೆರವೇರಿಸಲಾಗಿದೆ. ಕಲಾವಿದರ ಪ್ರತಿಭೆ ಬೆಳಗಿಸಲು ಇದರಿಂದ ಅವಕಾಶ ಸಿಗುತ್ತದೆ. ಕಟ್ಟಡದ ಹೆಚ್ಚುವರಿ ಅಭಿವೃದ್ಧಿ ಕಾಮಗಾರಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಅಧ್ಯಕ್ಷತೆಯನ್ನು ವಹಿಸಿದ್ದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ. ಕತ್ತಲ್‌ಸಾರ್ ರವರು ಪ್ರಸ್ತಾವನೆಗೈದು ಸ್ವಾಗತಿಸಿದರು. ಮನಪಾ ಮೇಯರ್ ಪ್ರೇಮಾನಂದ ಶೆಟ್ಟಿ ಶುಭಹಾರೈಸಿದರು.

ಸದಸ್ಯರುಗಳಾದ ಲೀಲಾಕ್ಷ ಕರ್ಕೇರ, ನರೇಂದ್ರ ಕೆರೆಕಾಡು, ನಾಗೇಶ್ ಕುಲಾಲ್, ರವೀಂದ್ರ ಶೆಟ್ಟಿ ಬಳಂಜ, ಚೇತಕ್ ಪೂಜಾರಿ, ಸಿದ್ಧಕಟ್ಟೆ ಮಲ್ಲಿಕಾ ಶೆಟ್ಟಿ, ರಿಜಿಸ್ಟ್ರಾರ್ ಕವಿತಾ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಕರ‍್ಯದರ್ಶಿ ಪ್ರದೀಪ್ ಡಿಸೋಜಾ, ಮನಪಾ ಸದಸ್ಯರಾದ ಗಣೇಶ್ ಕುಲಾಲ್, ಜಯಲಕ್ಷ್ಮಿ ಶೆಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ, ತುಳು ಅಕಾಡೆಮಿ ಮಾಜಿ ಸದಸ್ಯರಾದ ವಿ.ಜಿ ಪಾಲ್ ಮತ್ತು ಪ್ರಾಧಿಕಾರದ ಸಾರ್ವಜನಿಕ ಸಂಪರ್ಕಾಧಿಕಾರಿ ಪವನ್ ಶೆಟ್ಟಿ ಮತ್ತಿತರರಿದ್ದರು.

Gayathri SG

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

53 mins ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

1 hour ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

1 hour ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

2 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

2 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

2 hours ago