News Karnataka Kannada
Friday, May 17 2024
ಮಂಗಳೂರು

ಬಾಕಿ ಉಳಿದಿರುವವರಿಗೆ ಲಸಿಕೆ ಹಾಕಿಸುವುದು ಸವಾಲಿನ ಕೆಲಸ: ಡಿಸಿ

Photo Credit :

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ ಶೇ.80ರಷ್ಟು ಮಂದಿಗೆ ಲಸಿಕೆ ಹಾಕಿಸಲಾಗಿದೆ. ಆದರೆ ಬಾಕಿ ಉಳಿದವರಿಗೆ ಲಸಿಕೆ ಹಾಕಿಸುವುದು ತುಂಬಾ ಸವಾಲಿನ ಕೆಲಸ ಆಗಲಿದೆ. ಅದಕ್ಕಾಗಿ ಸಾಕಷ್ಟು ಪೂರ್ವ ಸಿದ್ಧತೆ ಮಾಡಿಕೊಂಡು ಇಂದಿನ ಲಸಿಕಾ ಅಭಿಯಾನವನ್ನು ಮಾಡುತ್ತಿದ್ದೇವೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪ್ರೆಸ್‍ಕ್ಲಬ್‍ನಲ್ಲಿ ಏರ್ಪಡಿಸಲಾದ ಕೋವಿಡ್ 19 ಲಸಿಕಾ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು.

ಕಳೆದ ವಾರ ಲಕ್ಷ ಮಂದಿಗೆ ಲಸಿಕೆ ಹಾಕಿಸುವ ಗುರಿ ಇಟ್ಟುಕೊಂಡು ಅಭಿಯಾನ ನಡೆಸಿದ್ದೆವು. ಆದರೆ ಪೂರ್ವ ಸಿದ್ಧತೆಗಳಿಲ್ಲದ ಕಾರಣಕ್ಕೆ ನಿರೀಕ್ಷಿತ ಪ್ರಗತಿ ಕಾಣಲು ಸಾಧ್ಯವಾಗಿರಲಿಲ್ಲ. ಈ ಬಾರಿಯ ಅಭಿಯಾನದಲ್ಲಿ 1.50 ಲಕ್ಷ ಡೋಸ್ ಲಸಿಕೆ ನೀಡುವ ಗುರಿ ಇಟ್ಟು ಅಭಿಯಾನ ನಡೆಸುತ್ತಿದ್ದೇವೆ. ಆದರೆ ಈ ಬಾರಿ ಸಾಕಷ್ಟು ಪೂರ್ವ ಸಿದ್ಧತೆ ಮಾಡಿಕೊಂಡು ಸುಮಾರು 600ಕ್ಕೂ ಹೆಚ್ಚು ಕೇಂದ್ರಗಳನ್ನು ನಿಗದಿಪಡಿಸಿ ಲಸಿಕೆ ಅಭಿಯಾನ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

ಲಸಿಕೆ ಅಭಿಯಾನಕ್ಕೆ ಚುನಾವಣೆ ಮಾದರಿಯ ಸಿದ್ಧತೆ ಮಾಡಿಕೊಂಡಿದ್ದೇವೆ. ಬಹುತೇಕ ಎಲ್ಲ ಇಲಾಖೆಯ ಸಿಬ್ಬಂದಿಗಳನ್ನು ಈ ಅಭಿಯಾನಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದೇವೆ. ಈ ಅಭಿಯಾನವನ್ನು ಯಶಸ್ವಿಗೊಳಿಸಿ ಎಲ್ಲರಿಗೂ ಲಸಿಕೆ ಹಾಕಿಸುವಂತೆ ಮಾಡುವುದೇ ನಮ್ಮ ಉದ್ದೇಶ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ.1.3ರ ಆಸುಪಾಸಿನಲ್ಲಿದೆ. ಇದನ್ನು ಇನ್ನಷ್ಟು ಇಳಿಸುವ ಬಗ್ಗೆ ನಾವು ಗಮನ ಕೇಂದ್ರೀಕರಿಸುತ್ತಿದ್ದೇವೆ. ಸಾವಿನ ಪ್ರಮಾಣದಲ್ಲೂ ಇಳಿಕೆಯಾಗಿದೆ. ಅದರಲ್ಲೂ ಎರಡು ಡೋಸ್ ಲಸಿಕೆ ಹಾಕಿದವರಲ್ಲಿ ಸಾವಿನ ಪ್ರಮಾಣ ತೀರಾ ಕಡಿಮೆ ಎಂದು ಅವರು ತಿಳಿಸಿದರು.

ಕೆಐಒಸಿಎಲ್ ಸಿಎಂಡಿ ಟಿ .ಸಾಮಿನಾಥನ್,ಮಹಾ ಪ್ರಭಂದಕ ರಾಮಕೃಷ್ಣ ರಾವ್, ಹಿರಿಯ ಅಧಿಕಾರಿಗಳಾದ ಮುರಳೀಧರ ,ಮುರುಗೇಶ್ ,ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ,ಪದಾಧಿಕಾರಿಗಳಾದ  ಪುಷ್ಪರಾಜ್ ಬಿ ಎನ್,ಭಾಸ್ಕರ್ ರೈ ಕಟ್ಟ,ಸುರೇಶ್ ಪಳ್ಳಿ ಉಪಸ್ಥಿತರಿದ್ದರು .

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು