News Karnataka Kannada
Monday, April 29 2024
ಮಂಗಳೂರು

ಬಾಲಕಿ ಗ್ಯಾಂಗ್ ರೇಪ್ ಮತ್ತು ಕೊಲೆ ಪ್ರಕರಣ ಹಿನ್ನೆಲೆ, ಹೊರರಾಜ್ಯದ ನಾಲ್ವರು ಆರೋಪಿಗಳು ಬಂಧನ

Rape And Murder Cases
Photo Credit :

ಮಂಗಳೂರು : ನಗರದ ಹೊರವಲಯದ ಪರಾರಿ ಹೆಂಚಿನ ಫ್ಯಾಕ್ಟರಿಯಲ್ಲಿ ಬಾಲಕಿ ಗ್ಯಾಂಗ್ ರೇಪ್ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ. ಹೊರರಾಜ್ಯದ ನಾಲ್ವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ‌.

ಮಧ್ಯಪ್ರದೇಶದ ಮೂವರು ಮತ್ತು ಝಾರ್ಖಂಡ್ ಮೂಲದ ಓರ್ವನನ್ನು ಬಂಧಿಸಲಾಗಿದೆ‌. ಮೂವರು ಆರೋಪಿಗಳು 21 ವರ್ಷದವರಾಗಿದ್ದು, ಓರ್ವ 33 ವರ್ಷದ ವ್ಯಕ್ತಿಯಾಗಿದ್ದಾನೆ. ಜಾರ್ಖಂಡ್ ರಾಜ್ಯದ ಸಿಂಡೇಗಾ ಜಿಲ್ಲೆಯ 8 ವರ್ಷ ಪ್ರಾಯದ ಬಾಲಕಿಯನ್ನು ನವೆಂಬರ್ 21ರಂದು ಟೈಲ್ಸ್ ಫ್ಯಾಕ್ಟರಿಯಲ್ಲಿ ಅತ್ಯಾಚಾರ ಎಸಗಿ ಕತ್ತು ಹಿಸುಕಿ ಕೊಲೆ ಮಾಡಲಾಗಿತ್ತು. ಬಳಿಕ ಫ್ಯಾಕ್ಟರಿ ಒಳಗಡೆ ಇದ್ದ ಚರಂಡಿಗೆ ದುರುಳರು ಬಾಲಕಿಯ ಮೃತದೇಹವನ್ನು ಎಸೆದಿದ್ದರು. ಮೂವರು ಆರೋಪಿಗಳು ಟೈಲ್ಸ್ ಫ್ಯಾಕ್ಟರಿ ಸಿಬ್ಬಂದಿಯಾಗಿದ್ದು, ಓರ್ವ ಪುತ್ತೂರಿನಲ್ಲಿ ಕೂಲಿ ಕಾರ್ಮಿಕನಾಗಿದ್ದಾನೆ.

ಈ ಆರೋಪಿಗಳ ವಿರುದ್ದ ಗ್ರಾಮಾಂತರ ಠಾಣೆಯಲ್ಲಿ ಫೋಕ್ಸೋ ಕಾಯ್ದೆ ಮತ್ತು ಐಪಿಸಿ 302 ಅಡಿ ಪ್ರಕರಣ ದಾಖಲಾಗಿದೆ. ನಾಲ್ಕು ಜನ ಆರೋಪಿಗಳ ಪೈಕಿ ಮೂವರು ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವುದು ದೃಢವಾಗಿದೆ‌. ಇಬ್ಬರು ಆರೋಪಿಗಳು ಈ ಹಿಂದೆಯೂ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಬಾಲಕಿ ತಂದೆ ಮತ್ತು ತಾಯಿ ಕುಡಿತದ ಚಟಕ್ಕೆ ಬಿದ್ದಿದ್ದು, ಇದನ್ನೇ ಬಳಸಿ ದೌರ್ಜನ್ಯ ಎಸಗಿದ್ದಾರೆ.

1960ನೇ ಇಸವಿಯಲ್ಲಿ ಮಂಗಳೂರು ಹೊರವಲಯದ ಪರಾರಿ ಬಳಿ ಆರಂಭವಾಗಿದ್ದ ರಾಜ್ ಟೈಲ್ಸ್ ಫ್ಯಾಕ್ಟರಿಯನ್ನು ಸದ್ಯ ಕೇರಳ ಮತ್ತು ಮಂಗಳೂರು ಮೂಲದವರಿಂದ ಲೀಸ್ ಪಡೆದು ಫ್ಯಾಕ್ಟರಿ ಕಾರ್ಯನಿರ್ವಹಣೆ ಮಾಡಲಾಗುತ್ತಿದ್ದು, ಈ ಫ್ಯಾಕ್ಟರಿಯಲ್ಲಿ ಒಟ್ಟು 35 ಕಾರ್ಮಿಕರಿದ್ದು, ಆರು ಜನ ಮಕ್ಕಳಿದ್ದಾರೆ. ಮಧ್ಯಪ್ರದೇಶ, ಬಿಹಾರ್, ಉತ್ತರಪ್ರದೇಶ, ಜಾರ್ಖಂಡ್ ರಾಜ್ಯದ ಕಾರ್ಮಿಕರು ಇಲ್ಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು