News Karnataka Kannada
Monday, May 06 2024
ಮಂಗಳೂರು

ಬಾಲಕಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಸಾಹುಲ್ ಹಮೀದ್ ಬಂಧನ

Sahul
Photo Credit :
ಬಂಟ್ವಾಳ : ಕನ್ಯಾನ ಕಣಿಯೂರಿನಲ್ಲಿ ಬುಧವಾರ ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಗೆ ದುಷ್ಪ್ರೇರಣೆ ನೀಡಿರುವ ಕುರಿತು ಆಕೆಯ ತಂದೆ ನೀಡಿದ ದೂರಿನ ಆಧಾರದಲ್ಲಿ ಆರೋಪಿ ಸಾಹುಲ್ ಹಮೀದ್ ಯಾನೆ ಕುಟ್ಟ ಎಂಬಾತನನ್ನು ವಿಟ್ಲ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ಸಂಜೀವ ಎಂಬವರು ತನ್ನ ಅಪ್ರಾಪ್ತ ವಯಸ್ಸಿನ ಮಗಳು ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಘಟನೆಗೆ ಸಾಹುಲ್ ಹಮೀದ್ ಎಂಬಾತನು ಆತ್ಮಹತ್ಯೆಗೆ ದುಪ್ರೇರಣೆ ನೀಡುವುದಾಗಿ ಆರೋಪಿಸಿ ದೂರು ನೀಡಿದ್ದು ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.
ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಉಪಾಧೀಕ್ಷಕ ಶಿವಾಂಶು ರಜಪೂತ್,ನೇತೃತ್ವದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಕಣಿಯೂರು ತಲೆಕ್ಕಿ ನಿವಾಸಿ ಸಾಹುಲ್ ಹಮೀದ್ ಎಂಬಾತನ ಪತ್ತೆಗೆ ಎರಡು ತಂಡಗಳನ್ನು ರಚಿಸಲಾಗಿತ್ತು.
ಬೆಳ್ತಂಗಡಿ ತಾಲೂಕು ಮಡಂತ್ಯಾರು ಕುಕ್ಕಳ ಗ್ರಾಮದ ಅಳೆಕ್ಕಿ ಎಂಬಲ್ಲಿಂದ ಗುರುವಾರ ರಾತ್ರಿ ಆರೋಪಿಯನ್ನುವಶಕ್ಕೆ ಪಡೆದು ದಸ್ತಗಿರಿ ಮಾಡಡಲಾಗಿದೆ. ಎಸ್ಪಿ ಋಷಿಕೇಶ್ ಭಗವಾನ್ ಸೋನಾವಣೆ ಮತ್ತು ಅಡಿಷನಲ್ ಎಸ್ಎಪಿ ಕುಮಾರ ಚಂದ್ರ ಮಾರ್ಗದರ್ಶನದಲ್ಲಿ, ಬಂಟ್ವಾಳ ಉಪವಿಭಾಗದ ಎಎಸ್‌ಪಿ ಶಿವಾಂಶು ರಜಪೂತ ನೇತೃತ್ವ , ವಿಟ್ಲ ಠಾಣೆ ಪೊಲೀಸ್ ನಿರೀಕ್ಷಕ ನಾಗರಾಜ್ ಎಚ್ ಈ ಸಾರಥ್ಯದಲ್ಲಿ ಪಿಎಸ್ಸೆ ಸಂದೀಪ ಕುಮಾರ್ ಶೆಟ್ಟಿ, ಪಿಎಸ್ಸೆ ಮಂಜುನಾಥ ಟಿ ಸಿಬ್ಬಂದಿಗಳಾದ ಡ್ಯಾನಿ ಪ್ರಾನ್ಸಿಸ್ ತಾಮ್ರ , ಪ್ರಸನ್ನ, ಸೀತಾರಾಮ ಹೇಮರಾಜ, ಅಶೋಕ್, ಶ್ರೀಧರ , ಕುಮಾರ , ಹಾಗೂ ಜಿಲ್ಲಾ ಗಣಕಯಂತ್ರ ವಿಭಾಗದ ಸಂಪತ್‌ಕುಮಾರ್,ದಿವಾಕರ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಪ್ರಮುಖ ಪಾತ್ರವಹಿಸಿರುತ್ತಾರೆ ಎಂದು ಎಸ್ಪಿ ಋಷಿಕೇಶ್ ಭಗವಾನ್ ಸೋನಾವಣೆ ತಿಳಿಸಿದ್ದಾರೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು