News Karnataka Kannada
Sunday, April 28 2024
ಮಂಗಳೂರು

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವಿಶೇಷ ಕಾರ್ಯಕಾರಿಣಿ ಸಭೆ

Bjp
Photo Credit :
ಬಂಟ್ವಾಳ: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವಿಶೇಷ ಕಾರ್ಯಕಾರಿಣಿ ಸಭೆ ಬಿ.ಸಿರೋಡು ಸ್ಪರ್ಶಾ ಕಲಾಮಂದಿರದಲ್ಲಿ ಶುಕ್ರವಾರ ನಡೆಯಿತು.
ಕಾರ್ಯಕ್ರಮ ವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್  ಮಾತನಾಡಿ, ಬಂಟ್ವಾಳ ಕ್ಷೇತ್ರದಲ್ಲಿ ಸಾವಿರ ಕೋಟಿ ರೂಪಾಯಿಗೂ ಮಿಕ್ಕಿದ   ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ಇನ್ನಷ್ಟು ಅಭಿವೃದ್ಧಿ ಕಾಮಗಾರಿಗಳು ನಡೆಯಲಿದೆ,  ಕಾರ್ಯಕರ್ತರು ಸಾಮಾಜಿಕ ಜಾಲತಾಣವನ್ನು  ಎಚ್ಚರಿಕೆಯಿಂದ ಬಳಸುವಂತೆ ಸಲಹೆ ನೀಡಿದ ಅವರು, ಜಿಲ್ಲೆಯ ಶಾಂತಿಯುತ ಅಭಿವೃದ್ಧಿಗೆ ಎಲ್ಲಾ ಶಾಸಕರು ಕಟಿಬದ್ಧರಾಗಿದ್ದೇವೆ ಎಂದರು.
ಶಾಸಕ ರಾಜೇಶ್ ನಾಯ್ಕ್, ಸಂದೇಶ್ ನೀರುಮಾರ್ಗ, ಭಾಗ್ಯಶ್ರೀ ಸಹಿತ ಅನೇಕ ಸಾಧಕರನ್ನು ಈ ವೇದಿಕೆಯಲ್ಲಿಗೌರವಿಸಲಾಯಿತು. ವೇದಿಕೆಯಲ್ಲಿ ಹಿಂದುಳಿದ ಮೋರ್ಚಾದ ರಾಜ್ಯ ಕಾರ್ಯದರ್ಶಿ ವಿಠಲ ಪೂಜಾರಿ, ಹಿಂದುಳಿದ ಮೋರ್ಚಾದ ಜಿಲ್ಲಾಧ್ಯಕ್ಷ ಆರ್.ಸಿ.ನಾರಾಯಣ , ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಮೀನುಗಾರಿಕೆ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮ್ ದಾಸ ಬಂಟ್ವಾಳ,  ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಬೂಡ ಅಧ್ಯಕ್ಷ ದೇವದಾಸ್ ಬಂಟ್ವಾಳ ಉಪಸ್ಥಿತರಿದ್ದರು. ದಿನೇಶ್ ರಾಯಿ ಕಾರ್ಯಕ್ರಮ ನಿರೂಪಿಸಿದರು.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು