Categories: ಮಂಗಳೂರು

ಬಿ. ಸಿ ರೋಡ್: ಶರವು ರಿಕ್ರೀಯೆಷನ್ ಕ್ಲಬ್ ಮೇಲೆ ಪೊಲೀಸರಿಂದ ದಾಳಿ

ಬಂಟ್ವಾಳ: ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಬಿ. ಮೂಡಾ ಗ್ರಾಮದ ಬಿ. ಸಿ ರೋಡ್ ನ ಶರವು ರಿಕ್ರೀಯೆಷನ್ ಕ್ಲಬ್ ಗೆ ದಾಳಿ ನಡೆಸಿದ ಬಂಟ್ವಾಳ ಪೊಲೀಸರು 28 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪೊಲೀಸ್ ನಿರೀಕ್ಷಕರಾದ ವಿವೇಕಾನಂದರವರು ಸಿಬ್ಬಂದಿಗಳು ಈ ಕಾರ್ಯಾಚರಣೆ ನಡೆಸಿದ್ದು, ಆರೋಪಿಗಳಿಂದ ವಶಕ್ಕೆ ಅಕ್ರಮ ಜೂಜಾಟಕ್ಕೆ ಬಳಸಿದ 26900/- ರೂ ಹಣವನ್ನು ಹಾಗೂ ಒಂದು ಟೇಬಲ್, ಆರು ಚೇರ್, 52 ಇಸ್ಪಿಟ್ ಹಾಳೆಗಳನ್ನು ಪಂಚರ ಸಮಕ್ಷಮ ಸ್ವಾಧೀನ ಪಡಿಸಿಕೊಂಡು ಕರ್ನಾಟಕ ಪೊಲೀಸ್ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಯಾಚರಣೆ ವೇಳೆ ಪೊಲೀಸರಿಗೆ ಹೆದರಿದ ಆರೋಪಿಗಳು ಕಟ್ಟಡದ ಮೇಲ್ಭಾಗದಿಂದಲೇ ಆಟಕ್ಕೆ ಬಳಸಿದ ಹಣವನ್ನು ನೋಟುಗಳನ್ನು ಕೆಳಗೆ ಬಿಸಾಕಿದ್ದಾರೆ. ಒಮ್ಮಿಂದೊಮ್ಮೆಲೆ ಬಿದ್ದ ನೋಟುಗಳನ್ನು ಹೆಕ್ಕಲು ಕೆಲವರು ಮುಂದಾದ ಹಿನ್ನೆಲೆಯಿಂದ ಸರ್ವೀಸ್ ರಸ್ತೆಯಲ್ಲಿ ಕೆಲ ಕಾಲ ವಾಹನ ದಟ್ಟಣೆ ಉಂಟಾಯಿತು.

Gayathri SG

Recent Posts

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

25 mins ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

48 mins ago

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

1 hour ago

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

2 hours ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

2 hours ago

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…

2 hours ago