ಮಂಗಳೂರು

ಬೆಳ್ತಂಗಡಿ: ಜೂ.೨೫ ರಂದು ರಾಷ್ಟ್ರೀಯ ಲೋಕ್ ಅದಾಲತ್

ಬೆಳ್ತಂಗಡಿ: ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳು ಶೀಘ್ರ ಇತ್ಯರ್ಥಗೊಳಿಸುವ ದೃಷ್ಟಿಯಿಂದ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ನ್ಯಾಯಾಲಯದ ಆವರಣಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್‌ಗಳನ್ನು ಆಯೋಜಿಸಲಾಗಿದೆ ಎಂದು ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಪ್ರ‘ನ ಹಿರಿಯ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶರಾದ ದೇವರಾಜು ಎಚ್.ಎಂ. ಹೇಳಿದರು.

ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಜೂ.೨ರಂದು ಕರೆದ ಜಾಗೃತ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಈ ಹಿನ್ನೆಲೆಯಲ್ಲಿ ಜೂ.೨೫ರಂದು ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ರಾಷ್ಟ್ರೀಯ ಇ-ಮೆಗಾ ಲೋಕ್ ಅದಾಲತ್‌ನ್ನು ಆಯೋಜಿಸಲಾಗಿದೆ. ಅಂದು ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಚೆಕ್ಕು ಅಮಾನ್ಯ ಪ್ರಕರಣ, ಆರ್ಥಿಕ ವಸೂಲಾತಿ ಪ್ರಕರಣ, ವಿದ್ಯುತ್ ಹಾಗೂ ನೀರಿನ ಶುಲ್ಕ ಸಂಬಂಧಿತ ಸಹಿತ ಇತರ ಪ್ರಕರಣ, ನ್ಯಾಯಾಲಯಗಳಲ್ಲಿ ಬಾಕಿ ಇರುವ ರಾಜೀಯಾಗಬಲ್ಲ ಅಪರಾಧ ಪ್ರಕರಣ, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣ ಪ್ರಕರಣಗಳು, ‘ಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣ ಇತ್ಯಾದಿ ಪ್ರಕರಣಗಳನ್ನು ಲೋಕ್ ಅದಾಲತ್‌ನಲ್ಲಿ ಪರಿಹಾರ ಪಡೆದುಕೊಳ್ಳಬಹುದು ಎಂದು ತಿಳಿಸಿದರು.

ಕಳೆದ ಬಾರಿ ಮಾರ್ಚ್‌ನಲ್ಲಿ ಹಮ್ಮಿಕೊಂಡ ಲೋಕ್ ಅದಾಲತ್ ನಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಸಂಬಂಧಿಸಿದಂತೆ ಒಟ್ಟು ೫೦೦ ಪ್ರಕರಣಗಳಲ್ಲಿ ೨೦೧ ಪ್ರಕರಣ ಇತ್ಯರ್ಥಗೊಂಡಿದೆ ಎಂದು ತಿಳಿಸಿದರು.

ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶರಾದ ಸಂದೇಶ್ ಕೆ. ಮಾತನಾಡಿ, ಕಕ್ಷಿದಾರರು ಮತ್ತು ಸಾರ್ವಜನಿಕರು ಲೋಕ್ ಅದಾಲತ್ ಸಂಪೂರ್ಣ ಪ್ರಯೋಜನ ಪಡೆಯುವಂತೆ ಕರೆ ನೀಡಿದರು.

ವಕೀಲರ ಸಂಘದ ಅಧ್ಯಕ್ಷ ಪ್ರಸಾದ್ ಕೆ.ಎಸ್., ಸರಕಾರಿ ಅಭಿಯೋಜಕರಾದ ದಿವ್ಯರಾಜ್, ಆಶಿತಾ, ಕೆನರಾ ಬ್ಯಾಂಕ್ ಕಾನೂನು ಸಲಹೆಗಾರ ರಾಮಚಂದ್ರ ಶೆಣೈ ಸಹಿತ ವಕೀಲರ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಶೈಲೇಶ್ ಆರ್.ಟೋಸರ್ ಸ್ವಾಗತಿಸಿ, ಕಾರ್ಯಕಾರಿ ಸಮಿತಿ ಸದಸ್ಯ ಮನೋಹರ್ ಕುಮಾರ್ ವಂದಿಸಿದರು.

Ashika S

Recent Posts

ತ್ರಿವಳಿ ತಲಾಖ್‌ನಿಂದ ನೊಂದು ಹಿಂದೂ ಯುವಕನ್ನು ಮದುವೆಯಾದ ಮುಸ್ಲಿಂ ಮಹಿಳೆ

ತ್ರಿವಳಿ ತಲಾಖ್‌ ನಿಂದ ನೊಂದಿದ್ದ ಮುಸ್ಲಿಂ ಮಹಿಳೆಯೊಬ್ಬಳು ಹಿಂದೂ ಧರ್ಮಕ್ಕೆ ಮತಾಂತರಗೊಂಡು ಹಿಂದೂ ಯುವಕನನ್ನು ಮದುವೆ ಆಗಿರುವ ಘಟನೆ ಉತ್ತರಪ್ರದೇಶದಲ್ಲಿ…

13 mins ago

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್​​ ಫೈರ್; ಯುವಕ ಸಾವು

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ ಆದ ಘಟನೆ ಚಿಕ್ಕಮಗಳೂರಿನ ತಾಲೂಕಿನ ಉಲುವಾಗಿಲು ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ…

24 mins ago

ಖಾರವಾದ ಚಿಪ್ಸ್ ತಿಂದ 14ರ ಬಾಲಕನಿಗೆ ಹೃದಯ ಸ್ತಂಭನ

ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್‌ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…

39 mins ago

ನಂಜನಗೂಡು ಶ್ರೀ ನಂಜುಂಡೇಶ್ವರನ ದರ್ಶನ ಪಡೆದ ಹೆಚ್. ಡಿ ರೇವಣ್ಣ

ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…

56 mins ago

ʼನನ್ನನ್ನು ನೋಡಬೇಡಿ, ಅಟಲ್‌ ಸೇತುವೆ ನೋಡಿʼ ಎಂದ ರಶ್ಮಿಕಾಗೆ ಪಿಎಂ ಮೋದಿ ಮೆಚ್ಚುಗೆ

ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…

1 hour ago

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

2 hours ago