Categories: ಮಂಗಳೂರು

ಬೆಳ್ತಂಗಡಿ ತಾಲೂಕಿನ ಅರ್ಹ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಣೆ

ಬೆಳ್ತಂಗಡಿ: ರಾಜ್ಯ ಸರಕಾರ ಕಾರ್ಮಿಕರ ಪರವಾಗಿ ಕೆಲಸ ಮಾಡುತ್ತಿದ್ದು, ಕೋವಿಡ್ ಸಂದರ್ಭ ಸೇರಿದಂತೆ ಬೆಳ್ತಂಗಡಿ ತಾಲೂಕಿಗೆ ವಿವಿಧ ಯೋಜನೆಗಳಿಗೆ ಕಾರ್ಮಿಕ ಇಲಾಖೆಯಿಂದ 12 ಕೋ. ರೂ. ಅನುದಾನ ನೀಡಲಾಗಿದೆ ಎಂದು ಶಾಸಕ ಹರೀಶ್ ಪೂಂಜ‌ ತಿಳಿಸಿದರು.

ಅವರು ಸೋಮವಾರ ಗುರುವಾಯನಕೆರೆ ಕಿನ್ಯಮ್ಮ ಸಭಾ ಭವನದಲ್ಲಿ ಕಾರ್ಮಿಕ ಇಲಾಖೆ ಮತ್ತು ತಾಲೂಕು ಆಡಳಿತ ಬೆಳ್ತಂಗಡಿ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಅರ್ಹ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಹಿರಿತನ ಆಧಾರದಲ್ಲಿ ಮೇಸ್ತ್ರೀ, ಪೈಂಟರ್ ಹಾಗೂ ಸೆಂಟ್ರಿಂಗ್ ಕಾರ್ಮಿಕರಿಗೆ ಕಿಟ್ ವಿತರಣೆ ಹಾಗೂ ವೈದ್ಯಕೀಯ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಯಡಿಯೂರಪ್ಪ ಹಾಗೂ ಬೊಮ್ಮಾಯಿ ಸರಕಾರದಲ್ಲಿ ಕಾರ್ಮಿಕರಿಗೆ ಕೋವಿಡ್ ಸಂದರ್ಭ ಚಿಕಿತ್ಸೆ, ಪಿಂಚಣಿ, ಸ್ಕಾಲರ್ ಶಿಫ್ ಸೇರಿದಂತೆ ಮೊದಲಾದ ಯೋಜನೆಗಳಿಗೆ ಅನುದಾನ ನೀಡಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಬಿಎಂಎಸ್ ಸಂಘಟನೆ ಕಾರ್ಮಿಕರ ಕಷ್ಟಗಳಿಗೆ ಸ್ಪಂದನೆ ನೀಡುತ್ತಿದೆ. ಈ ಹಿಂದೆ ಸಾವಿರಾರು ಕಾರ್ಮಿಕರಿಗೆ ಆಹಾರ ಕಿಟ್ ನೀಡಲಾಗಿತ್ತು. ಪ್ರಸ್ತುತ 1125 ಮಂದಿ ಕಾರ್ಮಿಕರಿಗೆ ಕಾರ್ಮಿಕ‌ ಕಿಟ್ ನೀಡಲಾಗಿದೆ. ಮೇಸ್ತ್ರೀ ಗಳಿಗೆ, ಪೈಂಟರ್ ಗಳಿಗೆ ಹಾಗೂ ಸೆಂಟ್ರಿಂಗ್ ಅರ್ಹ ಕಾರ್ಮಿಕರನ್ನು ಗುರುತಿಸಿ ಕಿಟ್ ವಿತರಿಸಲಾಗುತ್ತಿದೆ ಎಂದರು.

ಭಾರತೀಯ ಮಜ್ದೂರು ಸಂಘದ ಪದಾಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಕಾರ್ಮಿಕರ ಹಿತವನ್ನು ಬಯಸುವವರೇ ಹೊರತು ಹಣ ಮಾಡುವ ಸಂಘಟನೆಯಲ್ಲ. ಬಿಎಂಎಸ್ ಸಂಘಟನೆ ಗ್ರಾಮ ಮಟ್ಟದಲ್ಲಿ ಕಾರ್ಮಿಕರಿಗಾಗಿ ಹಲವಾರು ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಶಾಸಕನ ನೆಲೆಯಲ್ಲಿ ಕಾರ್ಮಿಕರ ಪರವಾಗಿ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಪಟ್ಟಣ ಪಂಚಾಯತಿ ಅಧ್ಯಕ್ಷೆ ರಜನಿ ಕುಡ್ವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಜಯಾನಂದ ಗೌಡ, ನಾವೂರು ಗ್ರಾ.ಪಂ. ಅಧ್ಯಕ್ಷ ಗಣೇಶ್ ನಾವೂರು, ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷೆ ಹರಿಣಾಕ್ಷಿ, ಇಂದಬೆಟ್ಟು ಗ್ರಾ.ಪಂ.‌ಅಧ್ಯಕ್ಷ ಆನಂದ ಅಡೀಲು, ಲಾಯಿಲ ಗ್ರಾ.ಪಂ. ಉಪಾಧ್ಯಕ್ಷ ಗಣೇಶ್ ಲಾಯಿಲ, ಬೆಳ್ತಂಗಡಿ ತಹಸೀಲ್ದಾರ್ ಮಹೇಶ್ ಜೆ., ತಾ.ಪಂ.‌ಇಒ ಕುಸುಮಾಧರ್ ಉಪಸ್ಥಿತರಿದ್ದರು.

ಭಾರತೀಯ ಮಜ್ದೂರು ಸಂಘದ ರಾಜ್ಯ ಉಪಾಧ್ಯಕ್ಷ ಜಯರಾಜ್ ಸಾಲಿಯಾನ್ ಪ್ರಸ್ತಾವಿಸಿ ಮಾತನಾಡಿದರು. ಕಾರ್ಮಿಕ‌ ಇಲಾಖಾಧಿಕಾರಿ ಹರೀಶ್ ಸ್ವಾಗತಿಸಿದರು. ಭಾರತೀಯ ಮಜ್ದೂರು ಸಂಘದ ತಾಲೂಕು ಅಧ್ಯಕ್ಷ ಉದಯ ಬಿ.ಕೆ. ವಂದಿಸಿದರು. ಶಿಕ್ಷಕ ಅಜಿತ್ ಕೊಕ್ರಾಡಿ ಕಾರ್ಯಕ್ರಮ ನಿರ್ವಹಿಸಿದರು.

“ಮೇಸ್ತ್ರೀ, ಪೈಂಟರ್ ಹಾಗೂ ಸೆಂಟ್ರಿಂಗ್ ಕೆಲಸ ಮಾಡುವ 1120 ಮಂದಿ ಫಲಾನುಭವಿಗಳಿಗೆ ಕಿಟ್ ವಿತರಣೆ ನಡೆಯಿತು. ಇದೇ ಸಂದರ್ಭ ಕಾರ್ಮಿಕರಿಗೆ ವೈದ್ಯಕೀಯ ಆರೋಗ್ಯ ಉಚಿತ ಶಿಬಿರ ನಡೆಸಲಾಯಿತು.”

Sneha Gowda

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

8 mins ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

22 mins ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

35 mins ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

51 mins ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

59 mins ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

1 hour ago