Categories: ಮಂಗಳೂರು

ಬೆಳ್ತಂಗಡಿ : ನಿಡಿಗಲ್ ನಲ್ಲಿ ಬೆಂಕಿ ಅವಘಡ

ಬೆಳ್ತಂಗಡಿ : ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಕಲ್ಮಂಜ ಗ್ರಾಮದ ನಿಡಿಗಲ್ ಶಾಲೆಯ ಮುಂಭಾಗದ ರಸ್ತೆಯ ಬದಿಯಲ್ಲಿ ಸಂಭವಿಸಿದ ಬೆಂಕಿ ಅವಘಡದಿಂದ ಅರಣ್ಯ ಇಲಾಖೆಯ ಸುಮಾರು ನೂರಾರು ಗಿಡಮರಗಳು ಸುಟ್ಟು ಕರಕಲಾಗಿವೆ.

ಹೆದ್ದಾರಿಗಿಂತ ಅನತಿದೂರದಲ್ಲಿ ಪಟ್ಟಾ ಜಾಗವನ್ನು ಹೊಂದಿರುವ ವ್ಯಕ್ತಿಯೊಬ್ಬರು ಆ ಜಾಗದಲ್ಲಿ ಬೆಳೆದಿದ್ದ ಗಿಡಗಂಟಿಗಳನ್ನು ತೆರವುಗೊಳಿಸುವ ಸಲುವಾಗಿ ಕಳೆದ ಮೂರು ದಿನಗಳಿಂದ ಬೆಂಕಿ ಹಚ್ಚುತ್ತಿದ್ದಾರೆ. ಶುಕ್ರವಾರ ಹಾಗೂ ಶನಿವಾರ ಇವರ ಜಾಗದ ಹೊರಭಾಗಕ್ಕೆ ಬೆಂಕಿ ವ್ಯಾಪಿಸಿದ್ದು ಸ್ಥಳೀಯರು ಅದನ್ನು ನಂದಿಸಿದ್ದರು.

ಭಾನುವಾರ ಇವರ ಜಾಗದ ಹೊರಭಾಗದಲ್ಲಿರುವ ರಸ್ತೆಬದಿಯವರೆಗೂ ಬೆಂಕಿ ವ್ಯಾಪಿಸಿದೆ. ಬೆಂಕಿ ಆವರಿಸಿರುವ ಸಮೀಪ ಅಂಗಡಿ,ಮನೆ,ಪಂಚಾಯಿತಿ, ವಿದ್ಯುತ್ ಫೋನ್, ಟಿವಿ ಕೇಬಲ್ ಗಳು ಇವೆ. ಅಗ್ನಿಶಾಮಕ ದಳ ಹಾಗೂ ಸ್ಥಳೀಯರ ಸಹಕಾರದಿಂದ ಬೆಂಕಿಯನ್ನು ಆರಿಸಿದ್ದು ಹೆಚ್ಚಿನ ಅಪಾಯ ತಪ್ಪಿದೆ. ಯಾವುದೇ ಮುಂಜಾಗೃತೆ ಕೈಗೊಳ್ಳದೆ ತನ್ನ ಜಾಗದಲ್ಲಿ ಬೆಂಕಿಯನ್ನು ಹಾಕಿರುವ ವ್ಯಕ್ತಿಯ ಕುಳಿತು ಸ್ಥಳೀಯರಿಂದ ಆಕ್ರೋಶ ವ್ಯಕ್ತವಾಗಿದೆ.

ಪರಿಸರದಲ್ಲಿ ಸಾಕಷ್ಟು ಹೊಗೆ ವ್ಯಾಪಿಸಿದ್ದು ಇನ್ನಷ್ಟು ಬೆಂಕಿ ಹರಡದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ವಿಪರೀತ ಹೊಗೆ ಹಾಗೂ ಬೆಂಕಿಯ ಶಾಖದಿಂದ ವಾಹನ ಸವಾರರು,ಸ್ಥಳೀಯರು ತೊಂದರೆ ಅನುಭವಿಸಿದರು.

Sneha Gowda

Recent Posts

ಬಾರ್ ಗೆ ನುಗ್ಗಿದ ಕಳ್ಳರು: 60 ಲೀಟರ್ ಮದ್ಯ ಕಳ್ಳತನ

ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…

10 mins ago

ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಕೋರಿ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…

25 mins ago

ಗಾಳಿ ಸಮೇತ ಭಾರಿ ಮಳೆ : ನೆಲಕಚ್ಚಿದ ಮರಗಳು

ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು

49 mins ago

ಮನುಷ್ಯನ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಂತ ಸಹಕಾರಿ : ತಮ್ಮಯ್ಯ

ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…

1 hour ago

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು- ತಮ್ಮಯ್ಯ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಬಸವನಹಳ್ಳಿಯ…

1 hour ago

ಮಕ್ಕಳು ಬೇಸಿಗೆ ರಜೆಯಲ್ಲಿ ಶಿಕ್ಷಣದಿಂದ ವಂಚಿತರಾಗಬಾರದು : ಶಿಕ್ಷಕ ಬಾಲಾಜಿ

ಬೇಸಿಗೆ ರಜೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಸಂಸ್ಥೆಗಳ ಬೇಸಿಗೆ ತರಬೇತಿ ಶಿಬಿರಗಳಿಗೆ ಮುಂದಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಕಳಿಸುವುದು ಸಾಮಾನ್ಯ.…

1 hour ago