ಮಂಗಳೂರು

ಬೆಳ್ತಂಗಡಿ: ಯಕ್ಷಗಾನ ಕರಾವಳಿಯ ಐತಿಹಾಸಿಕ ಕಲೆ- ಡಾ| ಸತೀಶ್ಚಂದ್ರ ಎಸ್

ಬೆಳ್ತಂಗಡಿ: ಯಕ್ಷಗಾನ ಅತ್ಯಂತ ಮಹತ್ವಪೂರ್ಣ ಸಾಂಸ್ಕೃತಿಕ ಕಲೆ. ಉಜಿರೆಯ ಶೈಕ್ಷಣಿಕ ನಗರದಲ್ಲಿ ಶ್ರೀ ಜನಾರ್ದನ ದೇವಸ್ಥಾನದ ಆಶ್ರಯದಲ್ಲಿ ಯಕ್ಷಜನ ಸಭಾ ಆರೋಗ್ಯಕರ ಸಾಂಸ್ಕೃತಿಕ ಕಾರ್ಯಕ್ರಮವನ್ನು ಇಂದಿನ ಪೀಳಿಗೆಯ ಕಲಾಪ್ರೇಮಿಗಳಿಗೆ ಮನಸ್ಸಿಗೆ ನೆಮ್ಮದಿ ನೀಡುವ ಕಲೆಯನ್ನು ಉಣಬಡಿಸುತ್ತಿದೆ.

ಕರಾವಳಿಯ ಐತಿಹಾಸಿಕ ಯಕ್ಷಗಾನ ಕಲೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾ ತಿ ಗಳಿಸುತ್ತಿರುವುದು ಶ್ಲಾಘನೀಯ. ಯಕ್ಷಜನಸಭಾದ ಯಕ್ಷಸೇವೆ ನಿರಂತರವಾಗಿ ನಡೆದು ಕಲಾಭಿಮಾನಿಗಳ ಮನ ತಣಿಸಲಿ ಎಂದು ಉಜಿರೆ ಶ್ರೀ ಧ.ಮಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ|ಸತೀಶ್ಚಂದ್ರ ಎಸ್ ನುಡಿದರು.

ಅವರು ಅ ೧೪ ರಂದು ಉಜಿರೆ ಶ್ರೀ ರಾಮಕೃಷ್ಣ ಸಭಾಮಂಟಪದಲ್ಲ್ಲಿ ಶ್ರೀ ಜನಾರ್ದನ ದೇವಸ್ಥಾನದ ಆಶ್ರಯದಲ್ಲಿ ಯಕ್ಷಜನಸಭಾ ನೇತೃತ್ವದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಸಹಯೋಗದೊಂದಿಗೆ ನಡೆದ ತ್ರಿದಿನ “ಯಕ್ಷೋತ್ಸವ -2022″ನ್ನು ದೀಪಪ್ರಜ್ವಲನಗೊಳಿಸಿ ಮಾತನಾಡುತ್ತಿದ್ದರು.

ಇದೆ ಸಂದರ್ಭದಲ್ಲಿ ಹಿರಿಯ ಯಕ್ಷಗಾನ ಅರ್ಥಧಾರಿ ಶಂಭು ಶರ್ಮ ವಿಟ್ಲ ಅವರಿಗೆ ಯಕ್ಷಕಲಾಗೌರವ ಸಮರ್ಪಿಸಲಾಯಿತು.

ಸಮಾರಂಭದಲ್ಲಿ ಉಜಿರೆ ಗ್ರಾ.ಪಂ.ಅಧ್ಯಕ್ಷೆ ಪುಷ್ಪಾವತಿ ಆರ್ ಶೆಟ್ಟಿ,ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷೆ ಮನೋರಮಾ ಭಟ್, ಯಕ್ಷಗಾನ ಸಂಘಟಕ ಧರ್ಮಸ್ಥಳದ ಬಿ.ಭುಜಬಲಿ, ಬೆಳ್ತಂಗಡಿ ತಾಲೂಕು ತುಳು ಶಿವಳ್ಳಿ ಸಭಾಧ್ಯಕ್ಷ ರಾಘವೇಂದ್ರ ಬೈಪಾಡಿತ್ತಾಯ, ದೊಂಡೇಲೆಯ ಕೆ.ಪುರಂದರ ರಾವ್, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಅಧ್ಯಕ್ಷ ರಾಧಾಕೃಷ್ಣ ರಾವ್, ಉಜಿರೆ ವರ್ತಕರ ಸಂಘದ ಅಧ್ಯಕ್ಷ ಅರವಿಂದ ಕಾರಂತ, ಸೀತಾರಾಮ ತೋಳ್ಪಡಿತ್ತಾಯ, ಯಕ್ಷಜನ ಸಭಾ ಗೌರವಾಧ್ಯಕ್ಷ ಶರತ್ ಕೃಷ್ಣ ಪಡುವೆಟ್ನಾಯ, ಅಧ್ಯಕ್ಷ ಡಾ|ಎಂ.ಎಂ.ದಯಾಕರ್ ಮೊ ದಲಾದವರು ಉಪಸ್ಥಿತರಿದ್ದರು.

ಉಪನ್ಯಾಸಕ ಡಾ| ಶ್ರೀಧರ ಭಟ್ ಸ್ವಾಗತಿಸಿ,ಪ್ರಸ್ತಾವಿಸಿ, ನಿರೂಪಿಸಿದ ಕಾರ್ಯಕ್ರಮದಲ್ಲಿ ದಿನೇಶ್ ಬಳಂಜ ವಂದಿಸಿದರು. ಕಾರ್ಯದರ್ಶಿ ವೆಂಕಟ್ರಮಣ ರಾವ್ ಬನ್ನೆಂಗಳ ಸಹಕರಿಸಿದ್ದರು. ಮೂರನೇ ವರ್ಷದ ಯಕ್ಷೋತ್ಸವದ ಮೊದಲ ಕಾರ್ಯಕ್ರಮವಾಗಿ ದಿನೇಶ್ ಅಮ್ಮಣ್ಣಾಯ ಅವರ ಹಾಡುಗಾರಿಕೆಯಲ್ಲಿ “ಶ್ರೀ ರಾಮ ವನಗಮನ “ಪ್ರಸಂಗದ ಯಕ್ಷಗಾನ ತಾಳಮದ್ದಳೆ ನಡೆಯಿತು.

ಹಿಮ್ಮೇಳದಲ್ಲಿ ಸೀತಾರಾಮ ತೋಳ್ಪಡಿತ್ತಾಯ,ಜನಾರ್ದನ ತೋಳ್ಪಡಿತ್ತಾಯ,ಮುರಾರಿ ಭಟ್,ಅರ್ಥಧಾರಿಗಳಾಗಿ ಸುನ್ನಂಬಳ ವಿಶ್ವೇಶ್ವರ ಭಟ್, ಶಂಭು ಶರ್ಮ ವಿಟ್ಲ, ಗಣರಾಜ ಕುಂಬ್ಳೆ, ಶಶಿಕಾಂತ ಶೆಟ್ಟಿ ಕಾರ್ಕಳ ಮತ್ತು ದಿನೇಶ್ ರಾವ್ ಬಳಂಜ ಭಾಗವಹಿಸಿದ್ದರು. ಕಾರ್ಯಕ್ರಮ ಕೊಳ್ತಿಗೆ ಲೈವ್ ಮೂಲಕ ನೇರಪ್ರಸಾರದಲ್ಲಿ ಬಿತ್ತರಗೊಳ್ಳುತ್ತಿದೆ.

Sneha Gowda

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

2 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

3 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

3 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

3 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

4 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

4 hours ago