Categories: ಮಂಗಳೂರು

ಬೆಳ್ತಂಗಡಿ: ವಿದ್ಯುತ್ ತಂತಿ ಕುತ್ತಿಗೆಗೆ ಸಿಲುಕಿ; ವ್ಯಕ್ತಿ ಸ್ಥಳದಲ್ಲೇ ಸಾವು

ಬೆಳ್ತಂಗಡಿ: ರಸ್ತೆ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮುಂಡಾಜೆ ಸನಿಹ ಗುರುವಾರ ತಡರಾತ್ರಿ ನಡೆದಿದೆ. ಮುಂಡಾಜೆಯಿಂದ ಕಾಜೂರು ದಿಡುಪೆ ಸಂಸೆ ರಸ್ತೆಯ ಹೇಡ್ಯ ಸೊಸೈಟಿ ಬಳಿ ರಾತ್ರಿ 11 ಗಂಟೆ ಸುಮಾರಿಗೆ ನಡೆದ ರಸ್ತೆ ಅವಘಡದಲ್ಲಿ ಕೊಯ್ಯುರು ನಿವಾಸಿ ರಘು ಎಂಬವರು ದಾರುಣವಾಗಿ ಮೃತಪಟ್ಟಿದ್ದಾರೆ.

ವಿದ್ಯುತ್ ಕಂಬಕ್ಕೆ ಹುಲ್ಲು ಸಾಗಾಟದ ಪಿಕಪ್ ವಾಹನ ಢಿಕ್ಕಿಯಾದ ಪರಿಣಾಮ ನಾಲ್ಕೈದು ವಿದ್ಯುತ್ ಕಂಬಗಳು ತುಂಡಾಗಿ ತಂತಿಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿತ್ತು. ಇದರ ಅರಿವಿಲ್ಲದೆ ಸ್ಕೂಟರ್ ನಲ್ಲಿ ದಿಡುಪೆ ಕಡೆಯಿಂದ ಬರುತ್ತಿದ್ದ ಉಜಿರೆ ಕಾಲೇಜು ರಸ್ತೆಯ ಹೋಟೆಲ್ ಮಂಜುನಾಥ್ ನ ರಘು ಅವರ ಕುತ್ತಿಗೆಗೆ ತಂತಿಗಳು ಸಿಕ್ಕಿಕೊಂಡು ರಸ್ತೆಗೆಸೆಯಲ್ಪಟ್ಟು ಅವರು ಅಲ್ಲೇ ಕೊನೆಯುಸಿರೆಳೆದಿದ್ದಾರೆ .ಅಪಘಾತದ ವೇಳೆ ತಂತಿಯಲ್ಲಿ ವಿದ್ಯುತ್ ಪ್ರವಹಿಸುತ್ತಿತ್ತೇ ಎಂಬ ನಿಖರ ಮಾಹಿತಿ ಲಭ್ಯವಾಗಿಲ್ಲ.

Swathi MG

Recent Posts

ಭೂದೇವಿ ಸಮೇತ ಶ್ರೀಲಕ್ಷ್ಮಿವರಾಹಸ್ವಾಮಿಗೆ ಅಭಿಷೇಕ

ವರಹಾ ಜಯಂತಿಯ ಅಂಗವಾಗಿ ಕೃ?ರಾಜಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮಿ ಭೂವರಾಹಸ್ವಾಮಿಯ ಶಿಲಾಮೂರ್ತಿಗೆ ವಿಶೇ? ಅಭಿ?ಕ ನಡೆಯಿತಲ್ಲದೆ, ಸ್ವಾಮಿಯ…

4 hours ago

ನನ್ನ ವಿರುದ್ಧ ದೇವರಾಜೇಗೌಡ ಮಾಡಿರುವ ಆಪಾದನೆಗಳು ಆಧಾರ ರಹಿತ: ಡಿಕೆ ಶಿವಕುಮಾರ್

ಹಾಸನ ವಿಡಿಯೋ ಪೆನ್​ಡ್ರೈವ್​ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು…

4 hours ago

ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ‌ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ‌ ಗುಡುಗು…

4 hours ago

ಬೀದರ್ ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರು ಮಾವಿನ ಹಣ್ಣಿನ ದರ್ಬಾರ್‌

ಯುಗಾದಿ ಮುಗಿಯುತ್ತಿದ್ದಂತೆ ಎಲ್ಲೆಡೆ ಮಾವಿನ ಹಣ್ಣುಗಳ ದರ್ಬಾರ ಕಂಡುಬರುತ್ತಿದೆದೆ. ಮಾರುಕಟ್ಟೆಗೆ ಮಾವಿನಕಾಯಿ ಹೆಚ್ಚಾಗಿ ಬರುತ್ತಿದೆ. ಸಾಲಾಗಿ ಜೋಡಿಸಿಟ್ಟ ಮಾವಿನ ಹಣ್ಣು…

4 hours ago

ಬಾಲಕಿ ಮೇಲೆ 2 ರಾಟ್‌ವೀಲರ್ ನಾಯಿಗಳಿಂದ ದಾಳಿ: ಮಾಲೀಕ ಅರೆಸ್ಟ್

ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಘಟನೆ ಚೆನ್ನೈನ ಥೌಸಂಡ್ ಲೈಟ್ಸ್ ಪ್ರದೇಶದ ಸಾರ್ವಜನಿಕ…

5 hours ago

ಬೀದರ್: ಬಿಸಿಲಿನ ಝಳಕ್ಕೆ ಚುನಾವಣೆ ಸಿಬ್ಬಂದಿ ತತ್ತರ

ಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆಗೆ ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ ಮಧ್ಯಾಹ್ನದಿಂದಲೇ ಕರ್ತವ್ಯ ನಿರತ ಸಿಬ್ಬಂದಿ ಮತಗಟ್ಟೆಗೆ…

5 hours ago