ಮಂಗಳೂರು

ಬೆಳ್ತಂಗಡಿ: ೨೨.೧೦ಕೋಟಿ ವೆಚ್ಚದ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಕಾಮಗಾರಿಗೆ ಶಿಲಾನ್ಯಾಸ

ಬೆಳ್ತಂಗಡಿ: ತಾಲೂಕಿನಲ್ಲಿ ೫ ವರ್ಷದ ಅವಧಿಯಲ್ಲಿ ೪೦೦ ಕೀ.ಮೀ ನೀರು ನಿಲ್ಲುವ ಗುರಿಯನ್ನು ಹೊಂದಿ ಅಣೆಕಟ್ಟುಗಳನ್ನು ನಿರ್ಮಿಸಲಾಗುತ್ತಿದ್ದು ಇದರಿಂದ ಅಂತರ್ಜಲ ಹೆಚ್ಚಾಗಿ ಕೃಷಿಕರಿಗೆ ವರದಾನವಾಗಲಿದೆ. ಜೊತೆಗೆ ಗ್ರಾಮೀಣ ಭಾಗದ ಜನರ ಸಂಪರ್ಕ ಕೊಂಡಿಯಾಗಿ ಸೇತುವೆಗಳು ಉಪಯೋಗವಾಗಲಿದ್ದು ಪಶ್ಚಿಮ ವಾಹಿನಿ ಯೋಜನೆಯಲ್ಲಿ ತಾಲೂಕಿಗೆ ೩೭ಕೋಟಿ. ರೂ. ಅನುದಾನ ಕಿಂಡಿ ಅಣೆಕಟ್ಟಿಗೆ ಮಂಜೂರಾಗಿದೆ ಎಂದು ಶಾಸಕ ಹರೀಶ್ ಪೂಂಜಾ ಹೇಳಿದರು.

ಅವರು ಶುಕ್ರವಾರ ತಾಲೂಕಿನ ವಿವಿದೆಡೆ ೨೨.೧೦ಕೋಟಿ ವೆಚ್ಚದ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಮತನಾಡಿದರು. ಅಂತರ್ಜಲ ಹೆಚ್ಚಾದಂತೆ ಯುವಕರಲ್ಲಿಯೂ ಕೃಷಿ ಮಾಡುವ ಆಸಕ್ತಿ ಹೆಚ್ಚಾಗಬಹುದು.

ಜಿಲ್ಲೆಯಲ್ಲೇ ಅತೀ ಹೆಚ್ಚು ಕಿಂಡಿ ಅಣೆಕಟ್ಟುಗಳು ತಾಲೂಕಿಗೆ ಮಂಜೂರಾಗಿದ್ದು ಬಹುತೇಕ ಕಾಮಗಾರಿಗಳು ಎಪ್ರೀಲ್ ತಿಂಗಳೊಳಗೆ ಪೂರ್ಣಗೊಳ್ಳಲಿದೆ. ಕಾಮಗಾರಿಗಳು ಗುಣಮಟ್ಟದ ರೀತಿಯಲ್ಲಿ ನಡೆಯುವಂತೆ ನೋಡಿಕೊಳ್ಳುವ ಜವಾಬ್ದಾರಿ ಸ್ಥಳೀಯರಲ್ಲಿದ್ದು ಮೊಸರಲ್ಲಿ ಕಲ್ಲು ಹುಡುಕುವ ಟೀಕಾಕಾರರಿಗೆ ಕಳಪೆ ಕಾಮಗಾರಿ ನಡೆದಿದೆ ಎಂಬ ಮಾತನ್ನು ನೀಡಲು ಸ್ಥಳಿಯರು ಅವಕಾಶ ನೀಡಬೇಡಿ, ಕಾಮಗಾರಿ ನಡೆಯುವ ವೇಳೆ ಸಾರ್ವಜನಿಕರು ಸಹಕರಿಸಿ ಗ್ರಾಮದ ಅಭಿವೃದ್ಧಿಗೆ ಸಹಕರಿಸಬೇಕು ಎಂದರು.

ನಡ ಗ್ರಾಮದ ಕುತ್ರೊಟ್ಟು –ಚಂದ್ಕೂರು ಸಂಪರ್ಕ ಸೇತುವೆ ೪ಕೋಟಿ ರೂ., ನಡ ಗ್ರಾಮದ ಮುಡಾಯಿಬೆಟ್ಟು- ಭೊಜರಕೈಕಂಬ ೧.೯೫ಕೋಟಿ ರೂ., ಇಂದಬೆಟ್ಟು ಗ್ರಾಮದ ಅಲೆಂಜಕಟ್ಟ –ಮೋಟೆತಡ್ಕ ೨.೪೫ಕೋಟಿ ರೂ., ಮಲವಂತಿಗೆ ಗ್ರಾಮದ ನೇತ್ರಕೊಂಡಂಗೆ ೨.೫ಕೋಟಿ ರೂ., ನಿಡ್ಲೆ ಗ್ರಾಮದ ಕುದ್ರಾಯ-ವಾಲ್ಯ ೪.೦೫ಕೋಟಿ ರೂ., ಕೊಕ್ಕಡ ಗ್ರಾಮದ ಕೊಡಂಗೇರಿ –ಉಪ್ಪರಹಳ್ಳ ೩.೩೫ ಕೋಟಿ ರೂ., ಶಿಬಾಜೆ ಗ್ರಾಮದ ಬರ್ಕುಳಕಟ್ಟ ಎಂಬಲ್ಲಿ ೩.೮೦ಕೋಟಿ ರೂ., ವೆಚ್ಚದ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ನಡ ಗ್ರಾ.ಪಂ ಅಧ್ಯಕ್ಷೆ ವಿಜಯ ಗೌಡ, ಉಪಾಧ್ಯಕ್ಷೆ ವಿನುತಾ, ಬಂಗಾಡಿ ಸಿ.ಎ ಬ್ಯಾಂಕ್ ಅಧ್ಯಕ್ಷ ಹರೀಶ್ ಸಾಲಿಯಾನ್, ಲಾಯಿಲ ಗ್ರಾ.ಪಂ ಅಧ್ಯಕ್ಷೆ ಆಶಾ ಸಲ್ಡಾನ, ಉಪಾಧ್ಯಕ್ಷ ಗಣೇಶ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಅಜಿತ್ ಕುಮಾರ್ ಅರಿಗ, ಲಾಯಿಲ ಗ್ರಾ.ಪಂ ಮಾಜಿ ಉಪಾಧ್ಯಕ್ಷ ಗಿರೀಶ್ ಡೋಂಗ್ರೆ, ತಾ.ಪಂ ಮಾಜಿ ಸದಸ್ಯರುಗಳಾದ ಸುಧಾಕರ ಎಲ್., ಮಹಾಬಲ ಗೌಡ, ಲಾಯಿಲ ಗ್ರಾ.ಪಂ ಸದಸ್ಯರಾದ ಮೋಹನ್ ದಾಸ್, ಪ್ರಸಾದ್ ಶೆಟ್ಟಿ, ಬೆಳ್ತಂಗಡಿ ಸಿ.ಎ ಬ್ಯಾಂಕ್ ನಿರ್ದೇಶಕ ಶ್ರೀನಾಥ್, ನಡ ಗ್ರಾ.ಪಂ ಅಧ್ಯಕ್ಷ ವಿಜಯ್, ಸಣ್ಣ ನೀರಾವರಿ ಇಲಾಖಾ ಸಹಾಯಕ ಕಾರ್ಯಪಾಕ ಅಭಿಯಂತರ ವಿಷ್ಣು ರಾವ್, ಇಂಜಿನಿಯರ್ ರಾಕೇಶ್, ಮತ್ತು ಗ್ರಾ.ಪಂ ಸದಸ್ಯರುಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸ್ಥಳೀಯರು ಉಪಸ್ಥಿತರಿದ್ದರು.

Sneha Gowda

Recent Posts

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

11 mins ago

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

26 mins ago

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

54 mins ago

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

1 hour ago

ಕಿಯಾ ಕಾರಿಗೆ ಅಡ್ಡ ಬಂದ ಕುದುರೆ: ಸರಣಿ ಅಪಘಾತ

ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…

1 hour ago

ಹಿರಿಯಡ್ಕ: ಕಾಲೇಜಿಗೆ ಹೋದ ಯುವತಿ ನಾಪತ್ತೆ

ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

1 hour ago