Categories: ಮಂಗಳೂರು

ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಇದರ ವತಿಯಿಂದ ಪುಸ್ತಕ ವಿತರಣೆ

ಬೆಳ್ತಂಗಡಿ: ಬೆಳೆಯುವ ಸಿರಿ ಮೊಳಕೆಯಲ್ಲಿ ನೋಡು ಎಂಬಾಂತೆ ಮಕ್ಕಳನ್ನು ಸಣ್ಣ ವಯಸ್ಸಿನಲ್ಲಿಯೇ ಅವರ ಇಷ್ಟದಂತೆ ಬೆಳೆಸಿದರೆ ಉತ್ತಮ ಪ್ರಜೆಯಾಗಲು ಸಾಧ್ಯ. ಈ ನಿಟ್ಟಿನಲ್ಲಿ ಪೋಷಕರು ಪ್ರಯತ್ನ ಮಾಡಬೇಕು ಎಂದು ಬೆಸ್ಟ್ ಫೌಂಡೇಶನ್ ಅಧ್ಯಕ್ಷ, ಹೈಕೋರ್ಟ್ ನ್ಯಾಯವಾದಿ ರಕ್ಷಿತ್ ಶಿವರಾಂ ಹೇಳಿದರು ‌.

ಅವರು ಕಿ.ಪ್ರಾ ಶಾಲೆ ಕುಂಟಿನಿ ಲಾಯಿಲ ಇಲ್ಲಿ ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಇದರ ವತಿಯಿಂದ ಪುಸ್ತಕ ವಿತರಣೆ ಮಾಡಿ ಮಾತನಾಡುತ್ತಿದ್ದರು.

ಮಕ್ಕಳಿಗೆ ಸಣ್ಣ ಪ್ರಾಯದಲ್ಲೇ ನಾವು ಶಿಕ್ಷಣಕ್ಕೆ ಹೆಚ್ಚು ಪ್ರೋತ್ಸಾಹ ನೀಡಿದರೆ ಉತ್ತಮ ಶಿಕ್ಷಣದೊಂದಿಗೆ ಹೆತ್ತವರು , ಶಾಲೆ ಸೇರಿದಂತೆ ಇಡೀ ದೇಶಕ್ಕೆ ಉತ್ತಮ ಹೆಸರು ತರಲು ಸಾಧ್ಯವಿದೆ. ಶಿಕ್ಷಕರ ತರಬೇತಿಗೆ ಮನೆಯಲ್ಲಿಯೂ ಉತ್ತಮ ವಾತಾವರಣ ಸೃಷ್ಟಿ ಮಾಡಬೇಕಾದ ಜವಾಬ್ದಾರಿ ಪೋಷಕರದು ಎಂದರು.

ಸಾಮಾಜಿಕ ಹೋರಾಟಗಾರ ಶೇಖರ್ ಲಾಯಿಲ ಮಾತನಾಡುತ್ತಾ ಪುಸ್ತಕ ವಿತರಣೆ ಕಾರ್ಯಕ್ರಮ ಶ್ಲಾಘನೀಯವಾದುದು. ಮಕ್ಕಳು ಉತ್ತಮ ವಿದ್ಯಾಭ್ಯಾಸ ಮಾಡಿ , ಉನ್ನತ ಮಟ್ಟಕ್ಕೆ ಏರುವ ಮೂಲಕ ಕೃತಜ್ಞತೆ ಸಲ್ಲಿಸಿದರೆ ಬೆಸ್ಟ್ ಫೌಂಡೇಶನ್ ಕಾರ್ಯ ಸಾರ್ಥಕವಾಗುತ್ತದೆ. ಬಾಲ್ಯವನ್ನು ಅನುಭವಿಸುವ ಮೂಲಕ ಇತರರಿಗೆ ಮಾದರಿಯಾಗಬೇಕು ಎಂದರು.

ವೇದಿಕೆಯಲ್ಲಿ ಬೆಸ್ಟ್ ಫೌಂಡೇಶನ್ ಗೌರವ ಸಲಹೆಗಾರ, ಮಾಜಿ ತಾ.ಪಂ ಸದಸ್ಯ ಬಿ.ಎಲ್ ಸುಧಾಕರ , ಗ್ರಾಮ ಪಂಚಾಯತ್ ಸದಸ್ಯೆ ರೇವತಿ ವಿವೇಕಾನಂದ ನಗರ , ಬೆಸ್ಟ್ ಫೌಂಡೇಶನ್ ಸದಸ್ಯ ಸಲೀಂ ಆದರ್ಶನಗರ , ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಇರ್ಫಾನ್, ಉಪಾಧ್ಯಕ್ಷೆ ಲಕ್ಷ್ಮೀ ಉಪಸ್ಥಿತರಿದ್ದರು.

ಮೊದಲಿಗೆ ಮುಖ್ಯೋಪಾಧ್ಯಾಯ ಲೋಕೇಶ್ ಸ್ವಾಗತಿಸಿ , ವಂದಿಸಿದರು. ಶಿಕ್ಷಕಿ ಲೀನಾ ಕಾರ್ಯಕ್ರಮ ನಿರ್ವಹಿಸಿ , ಶಿಕ್ಷಕಿ ಅಶ್ವಿನಿ ಸಹಕರಿಸಿದರು.

Sneha Gowda

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

4 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

4 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

5 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

5 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

6 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

6 hours ago