ಮಂಗಳೂರು: ಬೈಕಂಪಾಡಿ ಕೈಗಾರಿಕಾ ಪ್ರಾಂಗಣದಲ್ಲಿರುವ ಸೀಫುಡ್ ತಯಾರಿಕಾ ಘಟಕದಲ್ಲಿ ಅಮೋನಿಯಂ ಸೋರಿಕೆಯಾಗಿದ್ದು ಘಟನೆಯಲ್ಲಿ ಇಪ್ಪತ್ತು ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ.
ಎವರೆಸ್ಟ್ ಸೀ ಫುಡ್ ಪ್ರೈವೇಟ್ ಲಿಮಿಟೆಡ್ ಎಂಬ ಘಟಕದಲ್ಲಿ ಘಟನೆ ನಡೆದಿದೆ ಅಸ್ವಸ್ಥಗೊಂಡ ಕಾರ್ಮಿಕರನ್ನು ಮುಕ್ಕ ಶ್ರೀನಿವಾಸ್ ಆಸ್ಪತ್ರೆಗೆ ದಾಖಲಿಸಿ ದಾಖಲಿಸಲಾಗಿದೆ ಸ್ಥಳಕ್ಕೆ ಅಗ್ನಿಶಾಮಕ ಪಣಂಬೂರು ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ನಗರ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಕೂಡ ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಕಮಿಷನರ್ ಘಟನೆಯಲ್ಲಿ ಇಪ್ಪತ್ತಾರು ಜನ ಸಿಬ್ಬಂದಿಗಳು ಅಸ್ವಸ್ಥರಾಗಿದ್ದರು ತಕ್ಷಣ ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ .ಹತ್ತು ಜನ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ ಹದಿನಾರು ಜನ ಆಸ್ಪತ್ರೆ ಚಿಕಿತ್ಸೆ ಪಡೆದಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ಎಂದು ತಿಳಿಸಿದ್ದಾರೆ ಸದ್ಯಕ್ಕೆ ಫ್ಯಾಕ್ಟರಿಯಲ್ಲಿದ್ದ ಎಲ್ಲಾ ನೌಕರರನ್ನು ಹೊರಗೆ ಕಳಿಸಲಾಗಿದೆ ಹೇಗೆ ಸೋರಿಕೆಯಾಗಿದೆ ಎನ್ನುವ ಬಗ್ಗೆ ತಪಾಸಣೆ ನಡೆಸಲಾಗುತ್ತದೆ . ಸೂಕ್ತ ತನಿಖೆ ನಡೆಸಿದ ಬಳಿಕ ಕ್ರಮ ಕೈಗೊಳ್ಳುತ್ತೇವೆ ಎಂದು ಪೊಲೀಸ್ ಕಮಿಷನರ್ ಎಂ ಶಶಿಕುಮಾರ್ ಹೇಳಿದ್ದಾರೆ . ಎವರೆಸ್ಟ್ ಸೀ ಫುಡ್ ಪ್ರೈವೇಟ್ ಲಿಮಿಟೆಡ್ ಫ್ಯಾಕ್ಟ್ರಿಯಲ್ಲಿ ಒಟ್ಟು ಎಂಬತ್ತು ಜನ ಕಾರ್ಮಿಕರಿದ್ದು ಹನ್ನೊಂದು ಗಂಟೆ ಸುಮಾರಿಗೆ ಅಮೋನಿಯಂ ಸೋರಿಕೆ ಆಗಿತ್ತು