News Karnataka Kannada
Friday, May 03 2024
ಮಂಗಳೂರು

ಬೈಕ್ ಗಳರಡು ಢಿಕ್ಕಿ,ಪುಂಜಾಲಕಟ್ಟೆ ಠಾಣೆಯ ಎಚ್.ಸಿ.,ಮೃತ್ಯು,ಇನ್ನೋರ್ವ ಸವಾರ ಗಂಭೀರ

Accident
Photo Credit :

ಬಂಟ್ವಾಳ: ದ್ವಿಚಕ್ರ ವಾಹನಗಳೆರಡು ಮುಖಾಮುಖಿ ಢಿಕ್ಕಿ ಹೊಡೆದು ಪುಂಜಾಲಕಟ್ಟೆ ಪೋಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ವೋರ್ವರು ಮೃತಪಟ್ಟ ಘಟನೆ ಪಿಲಾತಬೆಟ್ಟು ಗ್ರಾಮದ ಮೂರ್ಜೆ ಸಮೀಪದ ನೇರಳಕಟ್ಟೆ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಪುಂಜಾಲಕಟ್ಟೆ ಪೋಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ,ಮೂಲತ:  ವೇಣೂರಿನ ಮರೋಡಿ ನಿವಾಸಿ  ಅಬೂಬಕ್ಕರ್ (48) ಮೃತಪಟ್ಟವರಾಗಿದ್ದಾರೆ.
ವಾಮದಪದವಿನಲ್ಲಿ  ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ವಾಪಾಸಾಗುತ್ತಿದ್ದ ವೇಳೆ ನೇರಳಕಟ್ಟೆ ಬಳಿ ಎದುರಿನಿಂದ ಬಂದ ಇನ್ನೊಂದು ದ್ವಿಚಕ್ರ ವಾಹನ ಢಿಕ್ಕಿ ಹೊಡೆದಿದೆ.  ಘಟನೆಯಿಂದ ಇನ್ನೊಂದು ಬೈಕಿನ ಸವಾರ ಇರ್ವತ್ತೂರು ನಿವಾಸಿ ದುರ್ಗಾಪ್ರಸಾದ್ ಕೂಡ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪುಂಜಾಲಕಟ್ಟೆಯ ಸಹದ್ಯೋಗಿ ಸಿಬ್ಬಂದಿ ಗಳೊಂದಿಗೆ ವಾಮದಪದವಿನಲ್ಲಿ ಕಾರ್ಯಕ್ರಮವೊಂದಕ್ಕೆ ತೆರಳಿದ್ದು, ಅಬೂಬಕ್ಕರ್ ಅವರು ತನ್ನ ಬೈಕಿನಲ್ಲಿ ವಾಪಾಸಾಗುತ್ತಿದ್ದರೆ ಉಳಿದವರು ಇಲಾಖಾ ಜೀಪಿನಲ್ಲಿ  ಆಗಮಿಸುತ್ತಿದ್ದರು.     ನೇರಳಕಟ್ಟೆ ಸಮೀಪ ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದಿದ್ದು,
ಈ ಸಂದರ್ಭದಲ್ಲಿ ಹಿಂಬದಿಯಿಂದ ಜೀಪಿನಲ್ಲಿ ಬರುತ್ತಿದ್ದ ಪೋಲೀಸ್ ಸಿಬ್ಬಂದಿ ಗಳು ಗಾಯಳುಗಳನ್ನು ತಕ್ಷಣ ಜೀಪಿನಲ್ಲಿ ಆಸ್ಪತ್ರೆಗೆ ಸಾಗಿಸಿದ್ದು, ಆಬೂಬಕ್ಕರ್ ಅವರು ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಆಸ್ಪತ್ರೆಗೆ ಬೀಗ..!
ಚಿಂತಾಜನಕ ಸ್ಥಿತಿಯಲ್ಲಿದ್ದ  ಆಬೂಬಕ್ಕರ್ ಅವರನ್ನು  ಪ್ರಥಮ ಚಿಕಿತ್ಸೆಗಾಗಿ ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತರಲಾಯಿತಾದರೂ, ಈ ವೇಳೆ ಆಸ್ಪತ್ರೆಗೆ ಬೀಗ ಹಾಕಲಾಗಿತ್ತು. ಇಲ್ಲಿನ ವೈದ್ಯರು ರಜೆಯ ಮೇಲೆ ತೆರಳಿದ್ದರೆ ಇತರ ಸಿಬ್ಬಂದಿ ಗಳು ಕೂಡ ಆಸ್ಪತ್ರೆಯಲ್ಲಿ ಇರಲಿಲ್ಲ.
ತಕ್ಷಣ ಅಬೂಬಕ್ಕರ್ ಅವರನ್ನು  ಅದೇ ಜೀಪಿನಲ್ಲಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯದಲ್ಲಿ ಮೃತಪಟ್ಟಿದ್ದಾರೆ.
ಇಂತಹ ತುರ್ತು ಸಂದರ್ಭದಲ್ಲು    ಹೆದ್ದಾರಿಯಲ್ಲಿರುವ ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಮತ್ತು  ಒಬ್ಬನೇ ಒಬ್ಬ ಸಿಬ್ಬಂದಿಗಳಿಲ್ಲದೆ ಬೀಗ ಹಾಕಿರುವುದು ಸ್ಥಳೀಯರ ಆಕ್ರೋಶ ಕ್ಕೆ ಕಾರಣವಾಗಿದೆ.
ಪುಂಜಾಲಕಟ್ಟೆ ಸರಕಾರಿ ಆಸ್ಪತ್ರೆಯ  ಬೇಜಾವಬ್ದಾರಿತನಕ್ಕೆ ಇದೊಂದು ಉದಾಹರಣೆಯಾಗಿದೆ.ಈ ಹಿಂದೆಯೂ ಕೂಡ ಇದೇ ರೀತಿಯ ಘಟನೆಗಳಾದಗಲೂ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ, ಗಾಯಳುಗಳು , ರೋಗಿಗಳು ಸೂಕ್ತ ಚಿಕಿತ್ಸೆ ಸಿಗದೆ ಪರದಾಡಿದ ಪ್ರಸಂಗಗಳು ನಡೆದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಶುಕ್ರವಾರ ನಡೆದ ಅಪಘಾತದಿಂದ  ಗಂಭೀರ ಗಾಯಗೊಂಡಿದ್ದ ಎಚ್.ಸಿ.ಆಬೂಬಕ್ಕರ್ ಅವರು ಜೀವನ್ಮರಣ ಹೋರಾಟ ನಡೆಸುತ್ತಿದ್ದರು, ಈ ಸಂದರ್ಭದಲ್ಲಿ ಅವರಿಗೆ ಪುಂಜಾಲಕಟ್ಟೆ ಪ್ರಾ.ಆ.ಕೇಂದ್ರದಲ್ಲಿ ತುರ್ತು ಚಿಕಿತ್ಸೆ ದೊರಕದಿದ್ದು ಅಲ್ಲಿಂದ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಬರುವಷ್ಟರಲ್ಲಿ ಪ್ರಾಣ ಪಕ್ಷಿ ಹಾರಿಹೋಗಿದೆ.
ಪುಂಜಾಲಕಟ್ಟೆ ಪೋಲೀಸ್ ಠಾಣೆಯ ಸಿಬ್ಬಂದಿಗಳ ಕಣ್ಣೆದುರಲ್ಲೆ ಪ್ರಾಣ ಬಿಟ್ಟ ಸಹದ್ಯೋಗಿಯ ಜೀವ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಕಂಬನಿ ಮಿಡಿದಿದ್ದಾರೆ. ಸಹೋದ್ಯೋಗಿಯ ಅಕಾಲಿಕ ಸಾವಿನಿಂದ ಪುಂಜಾಲಕಟ್ಟೆ ಠಾಣೆ ಶೋಕ ತಪ್ತವಾಗಿದೆ.
ಮೃತರು ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು