Categories: ಮಂಗಳೂರು

ಭರತನಾಟ್ಯದಲ್ಲಿ ಶ್ರೇಣೀಕೃತ ಪ್ರಮಾಣಪತ್ರ – ಅಮೃತ ವಿದ್ಯಾಲಯ ಸಂಸ್ಥೆ

ಮಂಗಳೂರು: ಹಿಂದು ಸಂಸ್ಕೃತಿಯನ್ನು ಎತ್ತಿ ಬಿಂಬಿಸುವ ಏಕೈಕ ವಿದ್ಯಾ ಸಂಸ್ಥೆ ಅಮೃತ ವಿದ್ಯಾಲಯಂ, ಈ ವಿದ್ಯಾಸಂಸ್ಥೆ ವಿದ್ಯಾರ್ಥಿಗಳಲ್ಲಿ ಅಧ್ಯಾತ್ಮಿಕ ಧಾರ್ಮಿಕ ಮನೋಭಾವನೆಯನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಭಗವದ್ಗೀತೆ, ಶ್ಲೋಕ, ಯೋಗ, ಧ್ಯಾನಗಳ ಜೊತೆಗೆ ಮೌಲ್ಯಧಾರಿತ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡುತ್ತಿದೆ.

2022-23 ನೇ ಶೈಕ್ಷಣಿಕ ಸಾಲಿನಲ್ಲಿ ಅನೇಕ ಹೊಸ ಸುಧಾರಣೆಗಳನ್ನು ಪರಿಚಯಿಸಲಾಗಿದೆ.

ಮೊದಲನೆಯದಾಗಿ: 1 ನೇ ತರಗತಿಯಿಂದ 5 ನೇ ತರಗತಿವರೆಗೆ ಹೊಸ ದಾಖಲಾತಿ ಪಡೆದ ವಿದ್ಯಾರ್ಥಿಗಳಿಗೆ ವಿಶೇಷ ರೀತಿಯಾಗಿ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.

95ಕ್ಕಿಂತ ಅಧಿಕ ಅಂಕ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ 100%,

85-94 ಅಂಕ ಪಡೆದ ವಿದ್ಯಾರ್ಥಿಗಳಿಗೆ 75%

75-84 ಅಂಕ ಪಡೆದ ವಿದ್ಯಾರ್ಥಿಗಳಿಗೆ 50%

60-74 ಅಂಕ ಪಡೆದ ವಿದ್ಯಾರ್ಥಿಗಳಿಗೆ 25

ಹೀಗೆ ಅಂಕಗಳ ಆಧಾರದ ಮೇಲೆ ಶಾಲಾ ಶುಲ್ಕದಲ್ಲಿ ರಿಯಾಯಿತಿ ನೀಡಲಾಗುವುದು, ಈ ಸಂಸ್ಥೆಯ ಇನ್ನೊಂದು ವಿಶೇಷವೆಂದರೆ ಪಠ್ಯಗಳ ಜೊತೆಗೆ ಪಠೇತರ ಚಟುವಟಿಕೆಗಳಿಗೂ ಹೆಚ್ಚಿನ ಆದ್ಯತೆಯನ್ನು ನೀಡಲಾಗುತ್ತದೆ.

ಒಂದನೇ ತರಗತಿಯಿಂದ 9ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೂ ಭರತನಾಟ್ಯದಲ್ಲಿ ಶ್ರೇಣೀಕೃತ ಪ್ರಮಾಣ ಪತ್ರವನ್ನು ಅಮೃತ ವಿಶ್ವವಿದ್ಯಾನಿಲಯದಿಂದ ನೀಡಲಾಗುತ್ತದೆ. ಈ ರೀತಿಯ ಪ್ರಮಾಣಪತ್ರವನ್ನು ಇದುವರೆಗೆ ಯಾವುದೇ ವಿದ್ಯಾಸಂಸ್ಥೆಯು ನೀಡಿರುವುದಿಲ್ಲ. ಅದನ್ನು ಜಾರಿಗೊಳಿಸಿ ದಂತಹ ಹೆಗ್ಗಳಿಕೆ ಅಮೃತ ವಿದ್ಯಾಸಂಸ್ಥಗಿದೆ. ಇವುಗಳ ಜೊತೆಗೆ ಅಥ್ಲೆಟಿಕ್, ಕ್ರಿಕೆಟ್, ಫುಟ್ಬಾಲ್, ಬಾಸ್ಕೆಟ್ ಬಾಲ್, ಆರ್ಚರಿ, ಸರ್ಫಿಂಗ್ ಮುಂತಾದ ಕ್ರೀಡೆಗಳಲ್ಲೂ ಸೂಕ್ತ ತರಬೇತುದಾರರಿಂದ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಲಾಗುತ್ತದೆ.

ಹೊಸ ಹೊಸ ತಂತ್ರಜ್ಞಾನಗಳ ಪ್ರಯೋಗಕ್ಕೆ ಅನುಕೂಲವಾಗುವಂತಹ ನವೀನ ಮಾದರಿಯ ‘ಅಟಲ್ ಟಿಂಕರಿಂಗ್ ಲ್ಯಾಬ್’ ವ್ಯವಸ್ಥೆಯು ನಮ್ಮಲ್ಲಿದೆ. ಪ್ರಯೋಗಾಲಯದ ಮೂಲಕವಿದ್ಯಾರ್ಥಿಗಳಲ್ಲಿ ನಾವಿನ್ಯತೆ ಮತ್ತು ಉದ್ಯಮಶೀಲತೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ.

ಇವುಗಳ ಜೊತೆಗೆ ‘ ಸ್ಕಿಲ್ ಹಬ್ ‘ ಮುಖಾಂತರ ವಿದ್ಯಾರ್ಥಿಗಳಿಗೆ ಕೌಶಲ್ಯಾಧಾರಿತ ತರಬೇತಿಯನ್ನು ನೀಡಲಾಗುತ್ತದೆ, ಕಸೂತಿ, ಹೊಲಿಗೆ ಮುಂತಾದವುಗಳ ಮೂಲಕ ವಿದ್ಯಾರ್ಥಿಗಳು ಸ್ವಾವಲಂಬನೆಯ ಬದುಕನ್ನು ರೂಪಿಸಲು ಅವಕಾಶವನ್ನು ಕಲ್ಪಿಸಲಾಗುತ್ತದೆ. ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯೇಈ ಶಾಲೆಯ ಮುಖ್ಯ ಗುರಿಯಾಗಿದೆ.

Sneha Gowda

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

7 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

7 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

8 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

8 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

9 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

10 hours ago