ಮಂಗಳೂರು

ಮಂಗಳೂರಿಗೆ ರಾಷ್ಟ್ರಪತಿಗಳ ಆಗಮನ

ಮಂಗಳೂರು: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಗುರುವಾರ ಸಂಜೆ ಮಂಗಳೂರಿಗೆ ಆಗಮಿಸಿದ್ದು, ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಮೈಸೂರಿನಿಂದ ವಿಮಾನದ ಮೂಲಕ ರಾತ್ರಿ ಆಗಮಿಸಿದ ರಾಷ್ಟ್ರಪತಿಯವರನ್ನು ವಿಮಾನ ನಿಲ್ದಾಣದಲ್ಲಿ ಸರಕಾರಿ ಗೌರವದೊಂದಿಗೆ ಬರಮಾಡಿಕೊಳ್ಳಲಾಯಿತು.

ರಾಷ್ಟ್ರಪತಿ ಆಗಮನದ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ವಿಮಾನ ನಿಲ್ದಾಣದಿಂದಲೇ ರಸ್ತೆಯ ಇಕ್ಕೆಲಗಳಲ್ಲಿ ಪೊಲೀಸರು ವಿಶೇಷ ಭದ್ರತೆ ಒದಗಿಸಿದ್ದರು. ರಾಷ್ಟ್ರಪತಿ ಅವರೊಂದಿಗೆ ಪತ್ನಿ ಹಾಗೂ ಪುತ್ರಿ ಕೂಡ ಆಗಮಿಸಿದ್ದಾರೆ. ಪೊಲೀಸ್ ಬಿಗಿ ಭದ್ರತೆಯಲ್ಲಿ ಆಗಮಿಸಿದ ರಾಷ್ಟ್ರಪತಿಗಳು ಹಾಗೂ ಅವರ ಕುಟುಂಬ ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ರಾತ್ರಿ ವಾಸ್ತವ್ಯ ಹೂಡಿದ್ದಾರೆ. ರಾಜ್ಯಪಾಲರಾದ ಥಾವರ್ ಚಾಂದ್ ಗೆಹ್ಲೋಟ್ ಕೂಡ ಜೊತೆಗಿದ್ದಾರೆ.

ವಾಹನ ಸಂಚಾರ ನಿಷೇಧ : ಈ ಹಿನ್ನೆಲೆಯಲ್ಲಿ ಸುರಕ್ಷತೆಯ ದೃಷ್ಟಿಯಿಂದ ಸರ್ಕ್ಯೂಟ್ ಹೌಸ್‌ನ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಮಾರ್ಪಾಡು ಮಾಡಿ ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಆದೇಶ ಗುರುವಾರ ಸಂಜೆ ಆದೇಶ ಹೊರಡಿಸಿದ್ದಾರೆ.

ಅ.7ರಂದು ಸಂಜೆ 6 ಗಂಟೆಯಿಂದ ಅ.8ರಂದು ಬೆಳಗ್ಗೆ 11 ಗಂಟೆವರೆಗೆ ವಾಹನ ಸಂಚಾರವನ್ನು ನಿಷೇಧಿಸಿ, ರಸ್ತೆ ಮಾರ್ಗ ಬದಲಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 66 ರ ಕೆಪಿಟಿ ಜಂಕ್ಷನ್‌ನಿಂದ ಸರ್ಕ್ಯೂಟ್ ಹೌಸ್ ಜಂಕ್ಷನ್ ಮುಖಾಂತರ ಬಿಜೈನ ಬಟ್ಟಗುಡ್ಡದ ರಸ್ತೆಯಲ್ಲಿ ಸಂಚರಿಸುವ ಎಲ್ಲ ತರಹದ ವಾಹನಗಳ ಸಂಚಾರವನ್ನು ನಿಷೇಧಿಸಿ, ಕೆಲವು ಮಾರ್ಗದಲ್ಲಿ ಸಂಚರಿಸುವಂತೆ ಮಾರ್ಪಾಡುಗೊಳಿಸಿ, ತಾತ್ಕಾಲಿಕ ಅಧಿಸೂಚನೆ ಹೊರಡಿಸಲಾಗಿದೆ.

ಕೆಪಿಟಿಯಿಂದ ಸರ್ಕ್ಯೂಟ್ ಹೌಸ್ ಜಂಕ್ಷನ್-ಬಟ್ಟಗುಡ್ಡೆ ಮೂಲಕ ನಗರಕ್ಕೆ ಪ್ರವೇಶಿಸುವ ವಾಹನಗಳು ನಂತೂರು ಜಂಕ್ಷನ್ ಮೂಲಕ ನಗರ ಪ್ರವೇಶಿಸಬೇಕು. ಕೆಎಸ್ಸಾರ್ಟಿಸಿ, ಬಿಜೈ ಬಟ್ಟಗುಡ್ಡೆ ಕಡೆಯಿಂದ ಕೆಪಿಟಿ ರಾಷ್ಟ್ರೀಯ ಹೆದ್ದಾರಿ ಕಡೆಗೆ ಸಂಚರಿಸುವ ವಾಹನಗಳು, ಕುಂಟಿಕಾನ ಮೂಲಕ ರಾಷ್ಟ್ರೀಯ ಹೆದ್ದಾರಿ ಕಡೆಗೆ ಚಲಿಸುವುದು.

ಬಂಟ್ಸ್ ಹಾಸ್ಟೆಲ್ ಸರ್ಕಲ್, ಕದ್ರಿ ಕಂಬಳ ರಸ್ತೆ, ಬಿಜೈ ಬಟ್ಟಗುಡ್ಡೆ ಮುಖಾಂತರ ರಾ.ಹೆ.ಯಲ್ಲಿನ ಕೆಪಿಟಿ ಜಂಕ್ಷನ್ ಕಡೆಗೆ ಸಂಚರಿಸುವ ವಾಹನಗಳು ಬಂಟ್ಸ್ ಹಾಸ್ಟೆಲ್ ಸರ್ಕಲ್- ಮಲ್ಲಿಕಟ್ಟೆ ಮೂಲಕ ರಾ.ಹೆ.ಯಲ್ಲಿನ ನಂತೂರು ಜಂಕ್ಷನ್ ಮುಖಾಂತರ ಮುಂದುವರಿಯಬೇಕು.

ಈ ತಾತ್ಕಾಲಿಕ ಅಧಿಸೂಚನೆಯು ಗೌರವಾನ್ವಿತ ರಾಷ್ಟ್ರಪತಿ ಹಾಗೂ ರಾಜ್ಯಪಾಲರ ಬೆಂಗಾವಲು ವಾಹನಗಳು ಹಾಗೂ ತುರ್ತು ಸೇವಾ ವಾಹನಗಳ ಸಂಚಾರಕ್ಕೆ ಅನ್ವಯಿಸುವುದಿಲ್ಲ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.

Sneha Gowda

Recent Posts

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

29 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

54 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

2 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

3 hours ago