News Karnataka Kannada
Monday, May 06 2024
ಮಂಗಳೂರು

ಮಂಗಳೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ!

Death 20072021
Photo Credit :

ಮಂಗಳೂರು : ರಾಜ್ಯದಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದ್ದು, ಮಂಗಳೂರಿನಲ್ಲಿ  ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಮಂಗಳೂರಿನ ಮಾರ್ಗನ್ಸ್ ಸ್ಟ್ರೀನ್ ಮನೆಯಲ್ಲಿ ದುರಂತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗಂಡ, ಹೆಂಡತಿ, ಇಬ್ಬರು ಮಕ್ಕಳು ಅತ್ಮಹತ್ಯಗೆ ಶರಣಾಗಿದ್ದಾರೆ. ಮನೆಯಲ್ಲಿ ನಾಲ್ವರ ಮೃತದೇಹಗಳು ಪತ್ತೆಯಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮೃತರು ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಸುನಗ್ ಗ್ರಾಮದವರು ಎಂದು ಗುರುತಿಸಲಾಗಿದ್ದು, ನಾಗೇಶ್ (30), ವಿಜಯಲಕ್ಷ್ಮೀ (26) ಮಕ್ಕಳಾದ ಸ್ವಪ್ನಾ(8) ಸಮಂತ್ (4) ಮೃತಪಟ್ಟಿದ್ದಾರೆ.  ವಿಜಯಲಕ್ಷ್ಮಿ ಸೆಕ್ಯೂರಿಟಿ ಕೆಲಸ ಮಾಡುತ್ತಿದ್ದರು ಚಾಲಕನಾಗಿದ್ದ ನಾಗೇಶ್ ಹೆಂಡತಿ ಮಕ್ಕಳಿಗೆ ವಿಷ ಕುಡಿಸಿ ಬಳಿಕ ತಾನು ನೇಣಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.,

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು