Categories: ಮಂಗಳೂರು

ಮಂಗಳೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ !

ಮಂಗಳೂರು :  ಕಾಂಗ್ರೆಸ್ ನಿಂದ ಪಂಚ ರಾಜ್ಯ ಚುನಾವಣೆ ಬಳಿಕ ಸಾಫ್ಟ್ ಹಿಂದುತ್ವ ಸುದ್ದಿ ವಿಚಾರ ಮಂಗಳೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ. ಕಾಂಗ್ರೆಸ್ ನದ್ದು ಸಾಫ್ಟ್ ಮತ್ತು ಹಾರ್ಡ್ ಹಿಂದುತ್ವ ಅಂತ ಇಲ್ಲ.

ನಾವು ಹಿಂದೂ ಧರ್ಮದ ಮೇಲೆ ‌ನಂಬಿಕೆ ಇಟ್ಟವರು ಎಲ್ಲಾ ಧರ್ಮಗಳಿಗೂ ಸಮಾನ ಗೌರವ ಕೊಡ್ತೇವೆ. ಹಿಜಾಬ್ ವಿರೋಧಿಸಿ ಮುಸ್ಲಿಂ ಸಂಘಟನೆಗಳ ಬಂದ್ ವಿಚಾರ ಅಸಮಾಧಾನ ಇರೋರು ಬಂದ್ ಮಾಡಿದ್ದಾರೆ, ಕೋರ್ಟ್ ನಿರ್ಧಾರ ವಿರೋಧಿಸಬಾರದು.

ಹೈಕೋರ್ಟ್, ಸುಪ್ರೀಂ ಕೋರ್ಟ್ ಯಾವುದರ ನಿರ್ಧಾರವನ್ನೂ ವಿರೋಧ ಮಾಡಬಾರದು. ಯಾವ ಧರ್ಮದವರೂ ಕೋಮುವಾದ ಮಾಡಬಾರದು. ಹಿಂದೂ, ಮುಸ್ಲಿಂ ಯಾರೇ ಆದರೂ ಕೋಮುವಾದ ಮಾಡಬಾರದು. ಎಲ್ಲಾ ಧರ್ಮಗಳನ್ನ ಸಮಾನವಾಗಿ ಕಾಣುವ ಕೆಲಸ ಆಗಲಿ.

ಶಾಲೆಗಳಲ್ಲಿ ಭಗವದ್ಗೀತೆ ಕಲಿಸೋ ಬಗ್ಗೆ ಚಿಂತನೆ ವಿಚಾರ ನೈತಿಕ ಶಿಕ್ಷಣ ಕಲಿಸೋಕೆ ನಮ್ಮ ಯಾವುದೇ ತಕರಾರು ಇಲ್ಲ. ನಾವು ಸಂವಿಧಾನದ ಜಾತ್ಯಾತೀತ ತತ್ವಗಳನ್ನು ನಂಬುತ್ತೇವೆ. ಭಗವದ್ಗೀತೆ, ಕುರಾನ್, ಬೈಬಲ್ ಯಾವುದನ್ನ ಹೇಳಿಕೊಟ್ಟರೂ ನಮ್ಮ ವಿರೋಧ ಇಲ್ಲ.

ಆದ್ರೆ ಮಕ್ಕಳಿಗೆ ಅಗತ್ಯವಾಗಿ ಗುಣಮಟ್ಟದ ಶಿಕ್ಷಣ ನೀಡಬೇಕು. ಭಗವದ್ಗೀತೆ ಬಗ್ಗೆ ಸರ್ಕಾರ ತೀರ್ಮಾನ ಮಾಡಿಲ್ಲ, ಗುಜರಾತ್ ನಲ್ಲಿ ‌ಮಾಡಿದ್ದಾರೆ ಅಷ್ಟೇ. ಭಗವದ್ಗೀತೆ ಮನೆಯಲ್ಲಿ ಹೇಳಿಕೊಡ್ತಾರೆ, ದೇವರ ಬಗ್ಗೆ ಹೇಳ್ತಾರೆ. ರಾಮಾಯಣ, ಮಹಾಭಾರತ ಎಲ್ಲಾನೂ ಮನೆಯಲ್ಲಿ ಹೇಳಿ ಕೊಡ್ತಾರೆ. ನೈತಿಕ ಶಿಕ್ಷಣ ಬೇಕು, ಆದ್ರೆ ಸಂವಿಧಾನಕ್ಕೆ ವಿರುದ್ದವಾಗಿ ಯಾವುದೂ ನಡೀಬಾರದು.

ನಾನು ಭಗವದ್ಗೀತೆ, ಬೈಬಲ್, ಕುರಾನ್ ಯಾವುದಾದರೂ ವಿರೋಧಿಯೂ ಅಲ್ಲ. ನಮ್ಮದು ಬಹುಸಂಸ್ಕೃತಿ ಇರೋ ರಾಷ್ಟ್ರ, ನಮ್ಮಲ್ಲಿ ಸಹಬಾಳ್ವೆ ಇರಬೇಕು. ಸಹಿಷ್ಣುತೆ ಮತ್ತು ಸಹಬಾಳ್ವೆಯಲ್ಲಿ ನಂಬಿಕೆ ಇರೋನು ನಾನು.

ಕಾಶ್ಮೀರ್ ಫೈಲ್ ಚಿತ್ರ ಕನ್ನಡಕ್ಕೆ ಡಬ್ ಮಾಡುವ ವಿಚಾರ ಸಿನಿಮಾ ಮಾಡಿ ತೋರಿಸೋದನ್ನ ಬೇಡ ಅನ್ನಲ್ಲ, ಆದರೆ ಸತ್ಯ ತೋರಿಸಲಿ. ಕಾಶ್ಮೀರದ ಉಗ್ರರ ಕೃತ್ಯ, ಪಂಡಿತರ ಜೊತೆಗೆ ಬೇರೆ ಯಾರಿಗೆ ಸಮಸ್ಯೆ ಆಗಿತ್ತು ಹೇಳಬೇಕು. ಆಗ ಯಾರ ಸರ್ಕಾರ ಇತ್ತು, ಏನ್ ಮಾಡಿತ್ತು ಸರ್ಕಾರ ಅಂತ ತೋರಿಸಬೇಕು. ಗುಜರಾತ್ ಘಟನೆ, ಲಖಿನ್ ಪುರ್ ಘಟನೆ ಎಲ್ಲಾನೂ ತೋರಿಸಬೇಕು. ನಾನು ಸಿನಿಮಾಗೆ ಹೋಗಲ್ಲ, ಥಿಯೇಟರ್ ಹೋಗಿ ಸಿನಿಮಾ ನೋಡಲ್ಲ. ಬಹಳ ಸಿನಿಮಾ ನೋಡಲ್ಲ, ಹಾಗೇನೇ ಕಾಶ್ಮೀರ್ ಫೈಲ್ ಕೂಡ. ನೋಡಲ್ಲ

Sneha Gowda

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

7 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

7 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

7 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

7 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

9 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

9 hours ago