News Karnataka Kannada
Thursday, May 02 2024
ಮಂಗಳೂರು

ಮಂಗಳೂರಿನಿಂದ ಎರ್ನಾಕುಲಂಗೆ 28ರಿಂದ ಮಲ್ಟಿ ಆಕ್ಸೆಲ್ ಬಸ್ ಸಂಚಾರ ಆರಂಭ

Ksrtc Bus 07082021
Photo Credit :

ಮಂಗಳೂರು : ಕೋವಿಡ್-19 ಸಂದರ್ಭದಲ್ಲಿ ಮಂಗಳೂರಿನಿಂದ ಕೇರಳದ ಎರ್ನಾಕುಲಂಗೆ ವೋಲ್ವೋ ಮಲ್ಟಿಆಕ್ಸೆಲ್ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.

ಪ್ರಸ್ತುತ ಲಾಕ್ಡೌನ್ ಸಡಿಲಗೊಂಡ ಹಿನ್ನಲೆಯಲ್ಲಿ ಮತ್ತು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಬೇಡಿಕೆಗನುಗುಣವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಮಂಗಳೂರು-ಎರ್ನಾಕುಲಂ (ಮಂಗಳೂರಿನಿಂದ ಕಾಸರಗೋಡು, ಕ್ಯಾಲಿಕಟ್, ತ್ರಿಶ್ಯೂರ್, ಅಳಪೆ ಮಾರ್ಗವಾಗಿ ಎರ್ನಾಕುಲಂ) ಮಾರ್ಗದಲ್ಲಿ ವೋಲ್ವೋ ಮಲ್ಟಿಆಕ್ಸಲ್ ಸಾರಿಗೆ ಸೌಲಭ್ಯವನ್ನು ಇದೇ ನ.28 ರಿಂದ ಪುನಃ ಪ್ರಾರಂಭಿಸಿ ಕಾರ್ಯಾಚರಣೆ ಮಾಡಲಾಗುತ್ತಿದೆ.

ಮಂಗಳೂರಿನಿಂದ ಎರ್ನಾಕುಲಂ ರಾತ್ರಿ 9 ಗಂಟೆಗೆ ಮತ್ತು ಎರ್ನಾಕುಲಂ ನಿಂದ ಮಂಗಳೂರು ರಾತ್ರಿ 8.35 ಕ್ಕೆ ಹೊರಡಲಿದೆ.
ಮಂಗಳೂರಿನಿಂದ ಎರ್ನಾಕುಲಂಗೆ ಪ್ರತಿ ಪ್ರಯಾಣಿಕರಿಗೆ ಒಟ್ಟು ಪ್ರಯಾಣ ದರ 760 ರೂ.ಗಳು. ಪ್ರಯಾಣಿಕರಿಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. ಸಾರ್ವಜನಿಕರು ತಿತಿತಿ.ಞsಡಿಣಛಿ.iಟಿ ಗೆ ಅಥವಾ ಹತ್ತಿರದ ರಿಸರ್ವೇಶನ್ ಕೌಂಟರ್ ಅನ್ನು ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗೆ ಮಂಗಳೂರು ಬಸ್ಸು ನಿಲ್ದಾಣ ದೂ.ಸಂ: 7760990720, ಮಂಗಳೂರು ಮುಂಗಡ ಬುಕ್ಕಿಂಗ್ ಕೌಂಟರ್ ದೂ.ಸಂ: 9663211553 ಸಂಪರ್ಕಿಸಬಹುದು ಎಂದು ಮಂಗಳೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು