News Karnataka Kannada
Sunday, April 28 2024
ಮಂಗಳೂರು

ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ

Bus
Photo Credit : R Bhat

ಬಂಟ್ವಾಳ, ಫೆ‌.14 : ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸೊಂದು ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತುಂಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.

ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಬಸ್ ತುಂಬೆ ಬಿ.ಎ‌.ಕಾಲೇಜು ಬಳಿಕ ರಾಷ್ಟ್ರೀಯ ಹೆದ್ದಾರಿಯ ಅಪಾಯಕಾರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ.

ಸೀ ಬರ್ಡ್ ಹೆಸರಿನ ಖಾಸಗಿ ಬಸ್ ತುಂಬೆ ಬಿ.ಎ. ಕಾಲೇಜು ಬಳಿಯ ತಿರುವಿನಲ್ಲಿ ಬಸ್ ಪಲ್ಟಿಯಾಗಿದೆ. ಬಸ್ ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಾಯಗಳಾಗಿದ್ದು ಹೆಚ್ಚಿನವರಿಗೆ ತುಂಬೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಕೆಲವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಎಂದು ತಿಳಿದುಬಂದಿದೆ.

ಬಸ್ ನ ಟ್ಯಾಂಕ್ ನಿಂದ ಡೀಸೆಲ್‌ ಸೋರಿಕೆಯಾಗಿದ್ದು, ಸ್ಥಳಕ್ಕೆ ಅಗ್ಮಿ ಶಾಮಕ ದಳದ ಸಿಬ್ಬಂದಿ ಆಗಮಿಸಿ ನೀರು ಹಾಯಿಸಿ ಮುಂಜಾಗ್ರತಾ ಕ್ರಮ ವಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು