ಬಂಟ್ವಾಳ, ಫೆ.14 : ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸೊಂದು ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತುಂಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.
ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಬಸ್ ತುಂಬೆ ಬಿ.ಎ.ಕಾಲೇಜು ಬಳಿಕ ರಾಷ್ಟ್ರೀಯ ಹೆದ್ದಾರಿಯ ಅಪಾಯಕಾರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ.
ಸೀ ಬರ್ಡ್ ಹೆಸರಿನ ಖಾಸಗಿ ಬಸ್ ತುಂಬೆ ಬಿ.ಎ. ಕಾಲೇಜು ಬಳಿಯ ತಿರುವಿನಲ್ಲಿ ಬಸ್ ಪಲ್ಟಿಯಾಗಿದೆ. ಬಸ್ ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಾಯಗಳಾಗಿದ್ದು ಹೆಚ್ಚಿನವರಿಗೆ ತುಂಬೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಕೆಲವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಎಂದು ತಿಳಿದುಬಂದಿದೆ.
ಬಸ್ ನ ಟ್ಯಾಂಕ್ ನಿಂದ ಡೀಸೆಲ್ ಸೋರಿಕೆಯಾಗಿದ್ದು, ಸ್ಥಳಕ್ಕೆ ಅಗ್ಮಿ ಶಾಮಕ ದಳದ ಸಿಬ್ಬಂದಿ ಆಗಮಿಸಿ ನೀರು ಹಾಯಿಸಿ ಮುಂಜಾಗ್ರತಾ ಕ್ರಮ ವಹಿಸಿದ್ದಾರೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…