News Karnataka Kannada
Monday, April 29 2024
ಮಂಗಳೂರು

ಮಂಗಳೂರಿನ ಕಾಲೇಜಿನಲ್ಲಿ ಮತ್ತೆ ಭುಗಿಲೆದ್ದ ಹಿಜಾಬ್ ವಿವಾದ

College
Photo Credit : News Kannada

ಮಂಗಳೂರು : ಹಿಜಾಬ್ ವಿವಾದ ಮತ್ತೆ ಭುಗಿಲೆದ್ದಿದೆ. ಇದೀಗ ಕರಾವಳಿಯ ಹೃದಯ ಭಾಗದಲ್ಲಿರುವ ಕಾರ್‌ಸ್ಟ್ರೀಟ್‌ನಲ್ಲಿರುವ ಡಾ.ಪಿ.ದಯಾನಂದ ಪೈ – ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜಿನಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ಇದೀಗ ಮತ್ತೆ ಭುಗಿಲೆದ್ದಿದೆ. ಎರಡು ವಿದ್ಯಾರ್ಥಿ ಗುಂಪುಗಳ ಮಧ್ಯೆ ಮಾತಿನ ಚಕಮಕಿ ಉಂಟಾಗಿತ್ತು.

ಇಂದು ಪ್ರಾಂಶುಪಾಲರ ಅನುಮತಿ ಮೇರೆಗೆ ವಿದ್ಯಾರ್ಥಿನಿಯರು ಪಿನ್ ಹಾಕದೇ ಕೇವಲ ಶಾಲು ಧರಿಸಿ ಪರೀಕ್ಷೆಗೆ ಹಾಜರಾಗಿದ್ದರು. ಆದರೆ, ಕೆಲ ವಿದ್ಯಾರ್ಥಿಗಳು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಅವರನ್ನು ಪರೀಕ್ಷಾ ತರಗತಿಯಿಂದ ಹೊರಹೋಗಲು ತಿಳಿಸಿದ್ದಾರೆ. ಪರಿಣಾಮ ಎರಡು ವಿದ್ಯಾರ್ಥಿ ಗುಂಪುಗಳ ಮಧ್ಯೆ ವಾಗ್ವಾದ ಉಂಟಾಗಿದೆ.

ಕಾಲೇಜು ಗೇಟು ಮುಂಭಾಗದಲ್ಲೇ ಪರಸ್ಪರ ಜಗಳಕ್ಕಿಳಿದಿದ್ದಾರೆ. ಪೊಲೀಸರು ಮಧ್ಯ ಪ್ರವೇಶಿಸಿದ ಬಳಿಕ ಪರಿಸ್ಥಿತಿ ಹತೋಟಿಗೆ ಬಂದಿದೆ. ಪ್ರಾಂಶುಪಾಲರ ನೇತೃತ್ವದಲ್ಲಿ ಕಾಲೇಜಿನಲ್ಲಿ ಸಭೆ ನಡೆದಿದ್ದು, ಪರಿಸ್ಥಿತಿ ತಿಳಿಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು