Categories: ಮಂಗಳೂರು

ಮಂಗಳೂರಿನ ರಾಮಕೃಷ್ಣ ಮಠಕ್ಕೆ 75 ಸಂವತ್ಸರಗಳ ಸಂಭ್ರಮಾಚರಣೆ

ಮಂಗಳೂರು: ರಾಮಕೃಷ್ಣ ಮಠಕ್ಕೆ ಇದೇ ಜೂನ್ 3 ರಂದು 75 ಸಂವತ್ಸರಗಳು ಪರಿಪೂರ್ಣವಾಗುತ್ತಿವೆ. ಈ ಸಂದರ್ಭದಲ್ಲಿ ಜೂನ್ 3 ಮತ್ತು 4 ರಂದು ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಅಮೃತ ಮಹೋತ್ಸವದ ಪ್ರಯುಕ್ತ ಅನೇಕ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. 3 ರಂದು ಬೆಳಿಗ್ಗೆ 6.30ಕ್ಕೆ ವಿಶೇಷ ಪೂಜೆ, ಹೋಮಹವನ, ಬೆಳಿಗ್ಗೆ 8.15 ಕ್ಕೆ ಮಂಗಳಾದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಪರಮಪೂಜ್ಯ ಶ್ರೀಮತ್ ಸ್ವಾಮಿ ಗೌತಮಾನಂದಜಿ ಮಹರಾಜ್ ದಿವ್ಯ ಸಾನಿಧ್ಯದಲ್ಲಿ ಸಾಧು ಭಕ್ತರ ಶೋಭಾಯಾತ್ರೆ ಶ್ರೀ ಮಠದ ವರೆಗೆ ನಡೆಯಲಿದೆ. ಬಳಿಕ 9.15 ಕ್ಕೆ ,ಶ್ರೀ ಶ್ರೀಮಠದ ನೂತನ ಮಹಾದ್ವಾರದ ಲೋಕಾರ್ಪಣ ಕಾರ್ಯಕ್ರಮ ಜರುಗಲಿದೆ. ಬೆಳಿಗ್ಗೆ 9.30ಕ್ಕೆ ಅಮೃತ ಸದನ – ಸ್ವಾಮಿ ವೀರೇಶ್ವರಾನಂದ ಸಾಧು ನಿವಾಸದ ಉದ್ಘಾಟನೆಯಾಗಲಿದೆ.

ಅಮೃತ ಭವನ ವಿವೇಕಾನಂದ ತರಬೇತಿ ಕೇಂದ್ರದ ಕಟ್ಟಡಕ್ಕೆ 9.45ಕ್ಕೆ ಭೂಮಿಪೂಜೆ ಹಾಗೂ ಅಡಿಗಲ್ಲು ಸಮಾರಂಭ ನಡೆಯಲಿದೆ. ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯ ಭೂಮಿಭೂಜೆಯಲ್ಲಿ ಭಾಗಿಯಾಗಿ ಅಡಿಗಲ್ಲು ಹಾಕಲಿದ್ದಾರೆ. ಮುಖ್ಯ ಅಭ್ಯಾಗತರಾಗಿ ಶ್ರೀ ದಯಾನಂದ ಪೈ ಭಾಗಿಯಾಗುವರು.

ದಿನಾಂಕ ಜೂ.3 ರಂದು ಪೂರ್ವಾಹ್ನ 10 ಗಂಟೆಗೆ ಅಮೃತ ಮಹೋತ್ಸವದ ಹಾಗೂ ‘ಅಮೃತ ಸಂಗಮ’ ಎಂಬ ಎರಡು ದಿನಗಳ ರಾಜ್ಯಮಟ್ಟದ ಸಾಧು ಭಕ್ತ ಸಮ್ಮೇಳನ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪರಮಪೂಜ್ಯ ಶ್ರೀಮತ್ ಸ್ವಾಮಿ ಗೌತಮಾನಂದಜಿ ಮಹರಾಜ್ ದಿವ್ಯ ಸಾನಿಧ್ಯದಲ್ಲಿ ಕರ್ನಾಟಕದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿಯವರು ಅಮೃತ ಮಹೋತ್ಸವವನ್ನು ಉದ್ಘಾಟಿಸಲಿದ್ದಾರೆ. ಸ್ವಾಮಿ ಮುಕ್ತಿದಾನಂದಜಿ ವಿಶ್ವಸ್ಥರು ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್ ಬೇಲೂರು ಮಠ, ಪಶ್ಚಿಮ ಬಂಗಾಳ ಹಾಗೂ ಸ್ವಾಮಿ ಜೀತಕಾಮನಂದಜಿ ಅಧ್ಯಕ್ಷರು ರಾಮಕೃಷ್ಣ ಮಠ ಮಂಗಳೂರು ಇವರ ದಿವ್ಯ ಉಪಸ್ಥಿತಿಯಿರಲಿದೆ.

ಘನ ಉಪಸ್ಥಿತಿಯಲ್ಲಿ ಡಾ. ಎಸ್. ವಿನಯ್ ಹೆಗ್ಡೆ, ಮನಸಾ ಮಹಾಪರರಾದ  ಪ್ರೇಮಾನಂದ ಶೆಟ್ಟಿ ಭಾಗಿಯಾಗಲಿದ್ದಾರೆ. ಮುಖ್ಯ ಅಭ್ಯಾಗತರಾಗಿ ಸಂಸದರಾದ  ನಳೀನ್ ಕುಮಾರ್ ಕಟೀಲು, ಶಾಸಕರಾದ  ವೇದವ್ಯಾಸ್ ಕಾಮತ್,  ಮಂಜುನಾಥ್ ಭಂಡಾರಿ ಪೂರ್ವ ಶಾಸಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್,  ಡಿ ಆರ್ ಪಾಟೀಲ್, ಕರ್ನಾಟಕದ ಮುಖ್ಯ ಪೋಸ್ಟ ಮಾಸ್ಟರ್ ಜನರಲ್  ಎನ್. ರಾಜೇಂದ್ರ ಕುಮಾರ್, ಉದ್ಯಮಿಯಾದ  ದಯಾನಂದ ಪೈ ಭಾಗಿಯಾಗಲಿದ್ದಾರೆ.

ಮಂಗಳೂರಿನ ರಾಮಕೃಷ್ಣ ಮಠದ ಅಮೃತ ಮಹೋತ್ಸವದ ಪ್ರಯುಕ್ತ ಅಂಚೆ ಇಲಾಖೆ ವಿಶೇಷ ಅಂಚೆ ಲಕೋಟೆಯನ್ನು ಹೊರತಂದಿದೆ, ಅದನ್ನು 3-6-2022 ರಂದು, ಕರ್ನಾಟಕದ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಶ್ರೀ ಎನ್. ರಾಜೇಂದ್ರ ಕುಮಾರ್ ಶ್ರೀಮಠಕ್ಕೆ ಹಸ್ತಾಂತರಿಸಲಿದ್ದಾರೆ. ಶ್ರೀ ಮಠದ ನೂತನ ಸಾಕ್ಷಚಿತ್ರವನ್ನು ಡಾ. ಎನ್ ವಿನಯ ಹೆಗ್ಡೆ ಬಿಡುಗಡೆ ಮಾಡಲಿದ್ದಾರೆ.

ಸ್ವಾಮಿ ಮುಕ್ತಿದಾನಂದಜಿ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಲಿದ್ದಾರೆ. ಮಠದ ನೂತನ ವೆಬ್‌ಸೈಟ್ ನ್ನು ಶ್ರೀ ನಳಿನ ಕುಮಾರ್ ಕಟೀಲು ಲೋಕಾರ್ಪಣೆ ಮಾಡಲಿದ್ದಾರೆ.

ಈ ಎರಡು ದಿನಗಳ ಕಾರ್ಯಕ್ರಮದಲ್ಲಿ ದೇಶದ ವಿವಿಧ ಭಾಗಗಳ ರಾಮಕೃಷ್ಣ ಮಠದ ಸುಮಾರು 75 ಸನ್ಯಾಸಿಗಳು ಹಾಗೂ ಸುಮಾರು ರಾಜ್ಯದ ಬೇರೆ ಬೇರೆ ಭಾಗದಿಂದ ಭಕ್ತರು ಈ ಸಮ್ಮೇಳನದಲ್ಲಿ ಭಾಗಿಯಾಗಲಿದ್ದಾರೆ. ಅಮೃತ ಸಂಗಮ ಚಿಂತನ ಮಂಥನ ಕಾರ್ಯಕ್ರಮದಲ್ಲಿ 6 ಗೋಷ್ಠಿಗಳಿದ್ದು, ಸುಮಾರು 18 ಸ್ವಾಮಿಜಿಗಳಾದಿಯಾಗಿ ವಿದ್ವಾಂಸರು ಸರಳತೆಯ ಪರಿಕಲ್ಪನೆಯಲ್ಲಿ ತಮ್ಮ ವಿಚಾರಗಳನ್ನು ಮಂಡಿಸಲಿದ್ದಾರೆ.

Gayathri SG

Recent Posts

ಅಂಜಲಿ ಹತ್ಯೆ ಪ್ರಕರಣ: ನನ್ನ ಮಗನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ ಎಂದ ಆರೋಪಿ ಗಿರೀಶ್ ತಾಯಿ

ನನ್ನ ಮಗ ಗಿರೀಶ್ ತಪ್ಪು ಮಾಡಿದ್ದಾನೆ. ಅವನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ. ಅಂಜಲಿ ಮತ್ತು ಗಿರೀಶ್ ಪರಸ್ಪರ…

12 mins ago

ಸ್ವಾತಿ ಹಲ್ಲೆ ಪ್ರಕರಣ : ಹೊಸ CCTV ಫೂಟೇಜ್ ಬಿಡುಗಡೆ ಮಾಡಿದ ಎಎಪಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ…

13 mins ago

ಮರಕ್ಕೆ ಕಾರು ಡಿಕ್ಕಿ: ನಾಲ್ವರು ಕಾನೂನು ವಿದ್ಯಾರ್ಥಿಗಳು ಮೃತ್ಯು

ಅತಿ ವೇಗವಾಗಿ ಬಂದ ಕಾರೊಂದು ಭಯಾನಕವಾಗಿ ಇನ್ನೊಂದು ಕಾರಿಗೆ ಡಿಕ್ಕಿಯಾಗಿ ಮತ್ತೆ ಮರಕ್ಕೆ ರಭಸದಿಂದ ಗುದ್ದಿದ್ದರಿಂದ ನಾಲ್ವರು ಕಾನೂನು ವಿದ್ಯಾರ್ಥಿಗಳು…

34 mins ago

ಸಮಸ್ಯೆಗಳ ಆಗರ: ಮೂಲಸೌಕರ್ಯಗಳ ಕೊರತೆಗೆ ಬೇಸತ್ತ ಸಾರ್ವಜನಿಕರು

ಪಟ್ಟಣದಲ್ಲಿ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಸ್ಥಳೀಯ ಆಡಳಿತದ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಬೇಸರಗೊಂಡಿದ್ದಾರೆ. ಪಟ್ಟಣದಲ್ಲಿ ಒಟ್ಟು 27 ವಾರ್ಡ್‌ಗಳು…

45 mins ago

ನಾಳೆ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನೆ

ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಮೇ.19 ರಂದು ಭಾನುವಾರ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ ಸಾಯಿಬಾಬಾ…

47 mins ago

ಚಾಮರಾಜನಗರದಲ್ಲಿ ಮುಂದುವರೆದ ಮಳೆ ಆರ್ಭಟ: ವಾಹನ ಸವಾರರ ಪರದಾಟ

ಗಡಿಜಿಲ್ಲೆ ವರುಣಾರ್ಭಟ ಮುಂದುವರೆದಿದ್ದು ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಯಿತು.

57 mins ago