News Karnataka Kannada
Thursday, May 02 2024
ಮಂಗಳೂರು

ಮಂಗಳೂರು :ಇಂದು ಉಲ್ಲಾಳದ ಶ್ರೀ ಬಬ್ಬು ಸ್ವಾಮಿ ದೇವಾಲಯಕ್ಕೆ ಸಿದ್ದರಾಮಯ್ಯ ಭೇಟಿ

Siddaramaiah to contest from another constituency, to shift to Kolar, Badami
Photo Credit :

ಮಂಗಳೂರು : ಉಲ್ಲಾಳದ ಶ್ರೀ ಬಬ್ಬು ಸ್ವಾಮಿ ದೇವಾಲಯಕ್ಕೆ ಸಿದ್ದರಾಮಯ್ಯ ಅವರು ಇಂದು ಭೇಟಿ ನೀಡಿ ಪೂಜೆ ಸಲ್ಲಿಸಿ, ಉಲ್ಲಾಳದಲ್ಲಿರುವ ಸಂತ ಸೆಬಾಸ್ಟಿಯನ್ನರ ಚರ್ಚ್ ಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಯು.ಟಿ. ಖಾದರ್, ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್ ಮತ್ತಿತರರು ಹಾಜರಿದ್ದರು.

ಮಾಧ್ಯಮದವರೊಂದಿಗೆ ಮಾತನಾಡುವ ವೇಳೆ ಉಕ್ರೇನ್ ನಲ್ಲಿ ಭಾರತೀಯ ವಿದ್ಯಾರ್ಥಿಗಳು ಸಿಲುಕಿರುವ ವಿಚಾರದ ಕುರಿತು ಮಂಗಳೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ರಷ್ಯಾ ಉಕ್ರೇನ್ ಮೇಲೆ ಯುದ್ಧ ಸಾರಿರೋದು ಬಹಳ ದಿನದ ಹಿಂದೆಯೇ ಗೊತ್ತಿತ್ತು, 10-15 ದಿನಗಳ ಹಿಂದೆಯೇ ತಿಳಿದಿತ್ತು. ಭಾರತದ, ಕರ್ನಾಟಕದ ವಿದ್ಯಾರ್ಥಿಗಳು ಅಲ್ಲಿದ್ದಾರೆ ಎಂಬುದು ಗೊತ್ತಿತ್ತು. ಆ ವಿದ್ಯಾರ್ಥಿಗಳನ್ನು ಕರೆ ತರಲು ಕೇಂದ್ರ, ರಾಜ್ಯ ಸರ್ಕಾರ ಯಾವುದೇ ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ. ಈಗ ವಿದ್ಯಾರ್ಥಿಗಳು ಬಂಕರ್ಸ್ ಗಳಲ್ಲಿ, ಬೇರೆ ಬೇರೆ ಕಡೆಗಳಲ್ಲಿ ಬಾಕಿಯಾಗಿದ್ದಾರೆ.

ವಿದ್ಯಾರ್ಥಿಗಳಿರುವ ಪಕ್ಕದಲ್ಲಿಯೇ ಬಾಂಬ್ ಗಳು ಸ್ಪೋಟ ಆಗುತ್ತಿದೆ. ಈಗ ಫ್ಲೈಟ್ ಗಳನ್ನು ಸ್ಥಗಿತಗೊಳಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಮರಳಿ ತಾಯ್ನಾಡಿಗೆ ಬರಲು ಸಮಸ್ಯೆಯಾಗಿದೆ. ಬಹಳ ಮಂದಿ ವಿದ್ಯಾರ್ಥಿಗಳಿಗೆ ಊಟಕ್ಕೂ ತೊಂದರೆಯಾಗಿದ್ದು,  ದುಡ್ಡೂ ಇಲ್ಲ ಸರಕಾರ ಇಂತಹ ವಿಚಾರಗಳಲ್ಲಿ ಈ ರೀತಿ ಮೈ ಮರೆಯಬಾರದು ಇಂತಹ ವಿಷಯಗಳಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು. ಸಿಎಂ ಬೊಮ್ಮಾಯಿ ಕೇಂದ್ರ ಸರಕಾರದ ರಕ್ಷಣಾ ಇಲಾಖೆಯ ಮೂಲಕ ಮಾತನಾಡಬೇಕು. ಫ್ಲೈಟ್ ಚಾರ್ಜ್ ಕೊಟ್ಟು ತಕ್ಷಣ ರಾಜ್ಯದ ಎಲ್ಲಾ ವಿದ್ಯಾರ್ಥಿಗಳನ್ನು ಕರೆ ತರುವ ವ್ಯವಸ್ಥೆ ಮಾಡಬೇಕು.

ಇದು ಭಾರತ ಸರ್ಕಾರ ಹಾಗೂ ರಾಜ್ಯ ಸರಕಾರದ ಕರ್ತವ್ಯ. ಇದು ಅವರ ಜವಾಬ್ದಾರಿ, ಇಲ್ಲಿಯವರೆಗೆ ಅವರು ಮಾಡಿಲ್ಲ. ಈ ಸರಕಾರಕ್ಕೆ ಜವಾಬ್ದಾರಿಯೇ ಇಲ್ಲ. ನಮ್ಮ ಮಕ್ಕಳು ಅಲ್ಲಿದ್ದಾರೆ, ಅವರನ್ನು ವಾಪಸ್ ಕರೆದುಕೊಂಡು ಬರಬೇಕಲ್ಲ..? ಪುಟಿನ್ ಅವರು ಉಕ್ರೇನ್ ಮೇಲೆ ಯುದ್ಧ ಮಾಡುತ್ತೇವೆ ಎಂದು ಓಪನ್ ಆಗಿ ಹೇಳಿದ್ದಾರೆ. ಆದ್ದರಿಂದ ಇದು ಸರಕಾರದ ಬೇಜವಾಬ್ದಾರಿತನ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

SDPI, PFI ಸಂಘಟನೆ ಬ್ಯಾನ್ ವಿಚಾರ : ಬ್ಯಾನ್ ಮಾಡೋದಾದ್ರೆ ಮಾಡಿ ಯಾರು ಬೇಡ ಅಂತಾರೆ. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ನಿಮ್ಮ ಕೈಯಲ್ಲಿ ಇದೆ. ನಾವು ಬ್ಯಾನ್ ಮಾಡೋದು ಬೇಡ ಎಂದು ಹೇಳಿದ್ದೇವಾ  ಎಂದು  ಮಂಗಳೂರು ಅಂತರಾಷ್ಟ್ರೀಯ ವಿಮಾನ‌ ನಿಲ್ದಾಣದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು