ಮಂಗಳೂರು: ಕಸ್ಟಮ್ಸ್ ಅಧಿಕಾರಿಗಳ ಕಣ್ಣುತಪ್ಪಿಸಿ ಅಕ್ರಮವಾಗಿ ಚಿನ್ನ ಸಾಗಾಟ ನಡೆಸುವ ಪ್ರಕರಣ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರವೂ ಪತ್ತೆಯಾಗಿದೆ.
ಶಾರ್ಜಾದಿಂದ ಮಂಗಳೂರಿಗೆ ಆಗಮಿಸಿದ ಇಂಡಿಗೋ ವಿಮಾನದಲ್ಲಿ ಬಂದ ಕೇರಳದ ಕಾಸರಗೋಡು ಪ್ರಯಾಣಿಕನಿಂದ 14.69 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 24 ಕ್ಯಾರೆಟ್ನ 310 ಗ್ರಾಂ ಚಿನ್ನವನ್ನು ಕಸ್ಟಮ್ಸ್ಅ ಧಿಕಾರಿಗಳು ಪತ್ತೆ ಮಾಡಿದ್ದಾರೆ.
ಆರೋಪಿಯು ಚಿನ್ನವನ್ನು ಪೌಡರ್ ಮಾದರಿಯಲ್ಲಿ ಚಾಕಲೇಟ್ ಬಣ್ಣದ ಪ್ಯಾಕೆಟ್ನಲ್ಲಿ ಬಚ್ಚಿಟ್ಟು ಅಕ್ರಮ ಸಾಗಾಟ ಮಾಡಿರುವುದು ಪತ್ತೆಯಾಗಿದೆ. ಈ ಬಗ್ಗೆ ಆರೋಪಿಯನ್ನು ವಶಕ್ಕೆ ತೆಗೆದುಕೊಂಡು ಕಸ್ಟಮ್ಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.