News Karnataka Kannada
Sunday, May 12 2024
ಮಂಗಳೂರು

ಮಂಗಳೂರು: ದೈವಸ್ಥಾನ ಮತ್ತು ಪೂಜಾ ಸ್ಥಳ ಅಪವಿತ್ರಗೊಳಿಸಿದ ಆರೋಪದ ಮೇಲೆ ವ್ಯಕ್ತಿ ಬಂಧನ

Arrest 22082021
Photo Credit :

ಮಂಗಳೂರು : ದೈವಸ್ಥಾನಗಳು ಮತ್ತು ವಿವಿಧ ಧರ್ಮಗಳ 18 ಪೂಜಾ ಸ್ಥಳಗಳನ್ನು ಅಪವಿತ್ರಗೊಳಿಸಿದ ಆರೋಪದ ಮೇಲೆ 62 ವರ್ಷದ ವ್ಯಕ್ತಿಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

ಕೋಟೆಕಾರು ಕೊಂಡಾಣ ನಿವಾಸಿ ದೇವದಾಸ್ ದೇಸಾಯಿಯನ್ನು ಬುಧವಾರ ಬಂಧಿಸಲಾಗಿದೆ. ಆರೋಪಿ ಮೂಲತಃ ಹುಬ್ಬಳ್ಳಿ ಮೂಲದ ಸಿಸಿಟಿವಿ ದೃಶ್ಯಾವಳಿ ಆಧರಿಸಿ ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಆರೋಪಿ ತಂದೆ ಜಾನ್ ದೇಸಾಯಿ, ಸರ್ಕಾರಿ ಉದ್ಯೋಗಿಯಾಗಿದ್ದು, ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದಾರೆ ಮತ್ತು ದೇವದಾಸ್ ಕೂಡ ಅದೇ ಧರ್ಮವನ್ನು ಅನುಸರಿಸುತ್ತಿದ್ದರು ಮತ್ತು ಅವರು ಮನೆಯಲ್ಲಿ ಪ್ರಾರ್ಥನೆ ಮಾಡುತ್ತಿದ್ದರು. ದೈವಸ್ಥಾನಗಳು, ಸಿಖ್ ಗುರುದ್ವಾರ ಮತ್ತು ಉಳ್ಳಾಲದ ಮಸೀದಿಯಲ್ಲಿ ಆಕ್ಷೇಪಾರ್ಹ ವಸ್ತುಗಳನ್ನು ಎಸೆದ ಅಪರಾಧವನ್ನು ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಕಮಿಷನರ್ ತಿಳಿಸಿದ್ದಾರೆ.

ಆರೋಪಿ ದೇವದಾಸ್ 1997ರಲ್ಲಿ ಉದ್ಯೋಗ ಅರಸಿ ಮಂಗಳೂರಿಗೆ ಬಂದಿದ್ದು, ಬಂದರ್‌ ಸಾರಿಗೆ ಕಚೇರಿಯಲ್ಲಿ ಚಾಲಕನಾಗಿ ಕೆಲಸಕ್ಕೆ ಸೇರಿದ್ದ. ಕೌಟುಂಬಿಕ ಸಮಸ್ಯೆಯಿಂದ ಪತ್ನಿ ಹಾಗೂ ಮಗಳು ಅವರನ್ನು ತೊರೆದಿದ್ದು, 2006 ರಲ್ಲಿ ತಲಪಾಡಿ ಕೆಸಿ ರೋಡ್‌ನಲ್ಲಿ ಮನೆ ಖರೀದಿಸಿ ಅಲ್ಲಿಯೇ ವಾಸಿಸುತ್ತಿದ್ದಾಗಿ ಕಮಿಷನರ್ ಶಶಿಕುಮಾರ್ ಹೇಳಿದರು.

ಈ ಕೆಳಕಂಡ ಸ್ಥಳಗಳಲ್ಲಿನ ದೈವಸ್ಥಾನ, ಕೊರಗಜ್ಜ ಕಟ್ಟೆ, ಮಸೀದಿ, ಸಿಖ್ ಗುರುದ್ವಾರ( ಕೂಳೂರು) ಮುಂತಾದ ಕಡೆಗಳಲ್ಲಿನ ಕಾಣಿಕೆ ಡಬ್ಬಿಗಳಲ್ಲಿ ಕಾಂಡೋಮ್, ಭಿತ್ತಿಪತ್ರ,ಏಸುವಿನ ಕುರಿತ ಲೇಖನ ಹಾಕಿದ್ದಾಗಿದೆ.

1. ಮಾರ್ನಮಿಕಟ್ಟೆ ಕೊರಗಜ್ಜ ಕಟ್ಟೆ
2. ಬಾಬುಗುಡ್ಡೆ ಕೊರಗಜ್ಜನ ಕಾಣಿಕೆ ಡಬ್ಬಿ
3. ಕೊಂಡಾಣ ದೈವಸ್ಥಾನ
4. ಮಂಗಳಾದೇವಿ ದೇವಸ್ಥಾನ
5. ಕದ್ರಿ ದೇವಸ್ಥಾನದ ಬಳಿಯಲ್ಲಿರುವ ರಿಕ್ಷಾ ಪಾರ್ಕ್ ನ ಬಳಿ ಕಾಣಿಕೆ ಡಬ್ಬಿ
6. ಕಲ್ಲುರ್ಟಿ ದೈವಸ್ಥಾನ, ಒಮೆಗಾ ಆಸ್ಪತ್ರೆ ಬಳಿ, ಪಂಪ್ ವೆಲ್ ಬಳಿ
7. ಉಳ್ಳಾಲದ ದರ್ಗಾ ಬಳಿಯ ಮಸೀದಿಯ ಕಾಣಿಕೆ ಡಬ್ಬಿ
8. ಕಲ್ಲಾಫು ನಾಗನ ಕಟ್ಟೆ
9. ಕೊಟ್ಟಾರ ಚೌಕಿಯ ಕಲ್ಲುರ್ಟಿ ದೈವಸ್ಥಾನ
10. ಉರ್ವಾ ಮಾರಿಗುಡಿ ದೇವಸ್ಥಾನದ ಕಾಣಿಕೆ ಡಬ್ಬಿ
11. ಕುತ್ತಾರು ಕೊರಗಜ್ಜನ ಕಟ್ಟೆ
12. ಕುಡುಪು ದೈವಸ್ಥಾನ
13. ಉಳ್ಳಾಲದ ಕೊರಗಜ್ಜನ ಕಾಣಿಕೆ ಡಬ್ಬಿ
14. ನಂದಿಗುಡ್ಡೆಯ ಕೊರಗಜ್ಜನ ಗುಡಿ
15. ಎ ಬಿ ಶೆಟ್ಟಿ ವೃತ್ತದ ಬಳಿಯ ದರ್ಗಾ
16. ಸಿಖ್ ಗುರುದ್ವಾರ ಗುಡಿ- ಬಂಗ್ರ ಕೂಳೂರು
17. ಕೋಟ ಶ್ರೀ ಬಬ್ಬು ಸ್ವಾಮಿ ದೈವಸ್ಥಾನ- ಮಂಕಿಸ್ವಾಂಡ್
18. ಆದಿ ಮಾಹೇಶ್ವರಿ ದೈವಸ್ಥಾನ ಭಜನಾ ಮಂಡಳಿ ಕಾಣಿಕೆ ಡಬ್ಬಿ- ಜೆಪ್ಪು ಮಹಾಕಾಳಿ ಪಡ್ಪು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು