ಮಂಗಳೂರು, ಮಾ.31(ಕ.ವಾ) : ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿ ನವದೆಹಲಿಯಿಂದ ಹಿಂತಿರುಗಿದ ಅಮ್ಮೈ ಮಹಾಲಿಂಗ ನಾಯಕರನ್ನು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಮಾ.31ರ ಗುರುವಾರ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆತ್ಮೀಯವಾಗಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಮಹಾಲಿಂಗ ನಾಯಕರ ಮೊಮ್ಮಗ, ಸ್ನೇಹಿತರು, ಅಭಿಮಾನಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.