News Karnataka Kannada
Friday, May 03 2024
ಮಂಗಳೂರು

ಮಂಗಳೂರು: ಮಹಿಳಾ ಪೊಲೀಸ್ ಠಾಣೆಯ ಪಿಎಸ್‌ಐ ಸೇರಿ ಆರು ಮಂದಿ ಸಿಬ್ಬಂದಿ ಅಮಾನತು

Suspended
Photo Credit :

ಮಂಗಳೂರು : ನಗರ ಮಹಿಳಾ ಪೊಲೀಸ್ ಠಾಣೆಯ ಪಿಎಸ್‌ಐ ಸೇರಿ ಆರು ಮಂದಿ ಪೊಲೀಸರನ್ನು ಅಮಾನತು ಮಾಡಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್‌. ಮಾಹಿತಿ ನೀಡಿದ್ದಾರೆ.

ಪೋಕ್ಸೋ ಪ್ರಕರಣವೊಂದರಲ್ಲಿ ಸರಿಯಾಗಿ ತನಿಖೆ ಮಾಡದೆ ನಿರ್ಲಕ್ಷ್ಯ ತೋರಿದ ಆರೋಪದಡಿ ಪಿಎಸ್‌ಐ ಓರ್ವರನ್ನು ಅಮಾನತು ಮಾಡಲಾಗಿದೆ.
ಅದೇ ರೀತಿ ಮಹಿಳಾ ಠಾಣಾ ಸಿಬ್ಬಂದಿ ಪೊಲೀಸ್ ಠಾಣೆಯೊಳಗೇ ಮದ್ಯದ ಪಾರ್ಟಿ ಮಾಡಿದ್ದಾರೆ ಎಂದು ಐವರನ್ನು ಅಮಾನತು ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ತಿಳಿಸಿದ್ದಾರೆ.

ಪಾರ್ಟಿ ಮಾಡಿರುವುದಕ್ಕೆ ಸಿಸಿಟಿವಿ ದಾಖಲೆಯಿದ್ದು, ಈ ಬಗ್ಗೆ ಸಿಸಿಪಿ, ಡಿಸಿಪಿ ತನಿಖೆ ನಡೆಸಿದ್ದಾರೆ. ಈ ಮೂಲಕ ಅವರ ಮೇಲಿನ ಆರೋಪ ಸಾಬೀತಾಗಿರುವ ಹಿನ್ನೆಲೆ ಮಹಿಳಾ ಪೊಲೀಸ್ ಠಾಣೆಯ ಇಬ್ಬರು ಎಎಸ್‌ಐ, ಇಬ್ಬರು ಹೆಡ್ ಕಾನ್​​ಸ್ಟೇಬಲ್ ಹಾಗೂ ಓರ್ವ ಕಾನ್​​​ಸ್ಟೇಬಲ್ ಅಮಾನತುಗೊಂಡಿದ್ದಾರೆ.

ದಕ್ಷಿಣ ಉಪವಿಭಾಗದ ಎಸಿಪಿ ರಂಜಿತ್ ಬಂಡಾರು ಮತ್ತುಕೇಂದ್ರ ಉಪವಿಭಾಗದ ಎಸಿಪಿ ಪಿಎ ಹೆಗ್ಡೆ ಅವರು ಸಮಗ್ರ ತನಿಖೆ ನಡೆಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಡಿಸಿಪಿ ಹರಿಂ ಶಂಕರ್ ಅವರ ಅಭಿಪ್ರಾಯ ಪಡೆದು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಶಶಿಕುಮಾರ್ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು