Categories: ಮಂಗಳೂರು

ಮಂಗಳೂರು ಮಿಲಾಗ್ರಿಸ್ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷದ ಆರಂಭೋತ್ಸವ

ಮಂಗಳೂರು ನ. 9  : ಮಂಗಳೂರು ಮಿಲಾಗ್ರಿಸ್ ಕಾಲೇಜಿನ ಆಂತರಿಕ ಗುಣಮಟ್ಟ, ಖಾತರಿ ಕೋಶದ ವತಿಯಿಂದ ೨೦೨೧-೨೨ ಶೈಕ್ಷಣಿಕ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಹಾಗೂ ಅವರ ಪೋಷಕರಿಗಾಗಿ ಹೊಸ ಶಿಕ್ಷಣ ನೀತಿಯ ಕುರಿತು ಓರಿಯೆಂಟೇಶನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಮಿಲಾಗ್ರಿಸ್ ಕಾಲೇಜಿನ ಸಂಚಾಲಕರಾಗಿರುವ ವಂ. ಗುರು ಬೋನವೆಂಚೆರ್ ನಝರೆತ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ‘ಪ್ರತಿಯೊಬ್ಬ ವಿದ್ಯಾರ್ಥಿಯು
ಶ್ರಮ ವಹಿಸಿ ತನ್ನನ್ನು ತಾನು ರೂಪಿಸಿಕೊಳ್ಳುವಂತಹ ಅವಕಾಶವನ್ನು ಕಾಲೇಜು ಒದಗಿಸಿದೆ. ಹಾಗಾಗಿ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವ ವಿಕಸನಕ್ಕೆ ತಾವೇ ಮುತುವರ್ಜಿವಹಿಸಬೇಕು’ ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿಯಾಗಿ ಸರಕಾರಿ ಪ್ರಥಮ ದರ್ಜೆ ಕಾಲೇಜು, ಕಾವೂರು, ಇದರ ಸಹಾಯಕ ಪ್ರಾಧ್ಯಾಪಕರಾದ ಶ್ರೀಯುತ ಮನೋಜ್ ಲೂಯಿಸ್ ಮಾತನಾಡಿ ಹೊಸ ಶಿಕ್ಷಣ ನೀತಿಯು ಪ್ರಾದೇಶಿಕ, ರಾಷ್ಟ್ರೀಯ ಹಾಗೂ ಜಾಗತಿಕ ವಿದ್ಯಾಮಾನಗಳಿಗೆ ಅನುಗುಣವಾದ ಶಿಕ್ಷಣ ಮಾದರಿಯನ್ನು ರೂಪಿಸುವುದು ಹಾಗೂ ವಿದ್ಯಾರ್ಥಿಗಳನ್ನು ಸಮಕಾಲೀನ ಸವಾಲುಗಳನ್ನು ಎದುರಿಸಲು ಬೇಕಾದ ಸದೃಢ ವ್ಯಕ್ತಿಗಳಾಗಿ ರೂಪಿಸುವ ಆಶಯ ಹಾಗೂ ಕಲಿಕೆ ಮತ್ತು ಫಲಿತಗಳ ನಡುವೆ ಸಮತೋಲನವನ್ನು ಸಾಧಿಸುವುದಕ್ಕೆ ಶಿಕ್ಷಣದಲ್ಲಿ ಹೆಚ್ಚು ಮಹತ್ವದ್ದು ಎಂದು ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.

ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲರಾದ ವಂ. ಗುರು. ಮೈಕಲ್ ಸಾಂತುಮಾಯೋರ್ ಕಾಲೇಜಿನ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿ ಪ್ರತಿನಿಧಿ ಜಾಕಿ ಅಬ್ಭಾಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಪಪ್ರಾಂಶುಪಾಲರಾದ ಶ್ರೀಯುತ ಕ್ಯಾಸಿನ್ ರೊಡ್ರಿಗೆಸ್ ಸ್ವಾಗತಿಸಿದರು, ವಿದ್ಯಾರ್ಥಿ ಜೋಸ್ಟನ್ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು. ಭಾಷಾ ವಿಭಾಗದ ಮುಖ್ಯಸ್ಥ ರಾದ ಕು. ನಯನ ಕೆ ವಂದಿಸಿದರು.

Gayathri SG

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

7 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

7 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

8 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

8 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

8 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

9 hours ago