ಮಂಗಳೂರು:- ನಗರದ ಸರ್ವಿಸ್ ಬಸ್ ನಿಲ್ದಾಣದ ಸಾರ್ವಜನಿಕ ತಂಗುದಾಣದಲ್ಲಿ ಫೆ.7 ರಂದು ಬಿದ್ದಿದ್ದ 53 ವರ್ಷದ ಅಪರಿಚಿತ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು, ಆ ವ್ಯಕ್ತಿಯನ್ನು ಪರಿಶೀಲಿಸಿದ ವೈದ್ಯರು ಆತ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ದಕ್ಷಿಣ ಪೆÇೀಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ವ್ಯಕ್ತಿಯ ಚಹರೆ:- ಎತ್ತರ 5 ಅಡಿ 6 ಇಂಚು, ಗೋಧಿ ಮೈಬಣ್ಣ, ಕಪ್ಪು ಬಿಳಿ ಮಿಶ್ರಿತ ಕೂದಲು ಮತ್ತು ಸಪೂರ ಶರೀರ ಹೊಂದಿರುತ್ತಾರೆ. ಖಾಕಿ ಬಣ್ಣದ ಉದ್ದ ತೋಳಿನ ಶರ್ಟ್, ಕೆಂಪು ಬಣ್ಣದ ಬನಿಯನ್ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ.
ಮೃತರ ಸಂಬಧಿಕರು ಇದ್ದಲ್ಲಿ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ: 0824-2220800, ಪೊಲೀಸ್ ಇನ್ಸ್ಪೆಕ್ಟರ್ ಮೊ.ಸಂಖ್ಯೆ: 9480805339, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮೊ.ಸಂಖ್ಯೆ:9480805346, ಪೊಲೀಸ್ ಸ್ಟೇಷನ್ ದೂ.ಸಂಖ್ಯೆ:0824-2220518 ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.