News Karnataka Kannada
Monday, May 06 2024
ಮಂಗಳೂರು

ಮಂಗಳೂರು: ರಾತ್ರಿ ಸುರಿದ ಭಾರೀ ಮಳೆಗೆ ರಸ್ತೆಗೆ ಉರುಳಿದ ಮರ

Road
Photo Credit : News Kannada

ಮಂಗಳೂರು : ನಗರದಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಸ್ಟೇಟ್ ಬ್ಯಾಂಕ್ ಬಳಿಯಿರುವ ರೋಜಾರಿಯೋ ರಸ್ತೆಯಲ್ಲಿ ಬೃಹತ್​ ಗಾತ್ರದ ಮರವೊಂದು ರಸ್ತೆಬದಿ ನಿಂತಿದ್ದ ಲಾರಿ ಮೇಲೆ ಉರುಳಿದೆ.

ಅದೃಷ್ಟವಶಾತ್ ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮರ ಬೀಳುತ್ತಿದ್ದಂತೆ ಚಾಲಕ ಪುರುಷೋತ್ತಮ ಲಾರಿಯಿಂದ ಕೆಳಗೆ ಜಿಗಿದಿದ್ದಾರೆ. ಶಾಲೆ-ಕಾಲೇಜು ಸಂಪರ್ಕಿಸುವ ಪ್ರಮುಖ ರಸ್ತೆ ಇದಾಗಿದ್ದು, ಬಿಎಸ್​ಎನ್​ಎಲ್ ಆವರಣದಿಂದ ಕಂಪೌಂಡ್ ಸಮೇತ ಮರ ಉರುಳಿದೆ.

ಪಾಂಡೇಶ್ವರ ಅಗ್ನಿಶಾಮಕ ದಳದಿಂದ ಮರ ತೆರವು ಕಾರ್ಯಾಚರಣೆ ಮಾಡಲಾಗುತ್ತಿದೆ. ಮರ ಉರುಳಿದ್ದರಿಂದ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು