Categories: ಮಂಗಳೂರು

ಮಂಗಳೂರು: ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ವೃತ್ತ ಲೋಕಾರ್ಪಣೆ

ಮಂಗಳೂರು : ನವ ರೂಪದೊಂದಿಗೆ ಆಕರ್ಷಕ ವಿನ್ಯಾಸದಿಂದ ಪುನರ್ ನಿರ್ಮಾಣಗೊಂಡ ಮಂಗಳೂರಿನ ಕೊಡಿಯಾಲ್ ಬೈಲ್‌ನ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ವೃತ್ತ ಬುಧವಾರ ಮುಸ್ಸಂಜೆ ಲೋಕಾರ್ಪಣೆಗೊಂಡಿತು.

ಪ್ರಥಮ ಬಾರಿಗೆ ಕನ್ನಡಕ್ಕೆ ರಾಷ್ಟ್ರಕವಿ ಗೌರವ ತಂದುಕೊಟ್ಟ ಮಂಜೇಶ್ವರ ವೇದವ್ಯಾಸ ಕಾಮತ್ ಉದ್ಘಾಟಿಸಿದರು. ಮೇಯರ್ ಪ್ರೇಮಾನಂದ ಶೆಟ್ಟಿ, ಉಪಮೇಯರ್ ಸುಮಂಗಲಾ ರಾವ್, ಮಾಜಿ ಮೇಯರ್‌ಗಳಾದ ದಿವಾಕರ ಪಾಂಡೇಶ್ವರ, ಶಶಿಧರ ಹೆಗ್ಡೆ, ಭಾಸ್ಕರ್ ಕೆ. ಸೇರಿದಂತೆ ಹಲವು ಕಾರ್ಪೊರೇಟರ್‌ಗಳು ಉಪಸ್ಥಿತರಿದ್ದರು.

ಸಾಂಪ್ರದಾಯಿಕ ವಿನ್ಯಾಸದೊಂದಿಗೆ ಆಧುನಿಕತೆಯ ಸ್ಪರ್ಶ ಪಡೆದು ಸಿದ್ಧಗೊಂಡಿರುವ ಈ ವೃತ್ತ ಭವಿಷ್ಯದ ಪೀಳಿಗೆಗೆ ಸಾಹಿತ್ಯ ಲೋಕದ ಧ್ರುವತಾರೆ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈಗಳ ನೆನಪನ್ನು ಮನಸ್ಸಿನಲ್ಲಿ ಅಚ್ಚೊತ್ತುವಂತೆ ಮಾಡಲಿದೆ . ರಾಷ್ಟ್ರಕವಿ ಗೋವಿಂದ ಪೈಗಳು ಕೈಯಲ್ಲಿ ನವಭಾರತ ಪತ್ರಿಕೆ ಹಿಡಿದು ಓದುತ್ತಾ ಕುಳಿತಿರುವ ಭಂಗಿಯಲ್ಲಿರುವ ಕಂಚಿನ ಪುತ್ಥಳಿ ಇಲ್ಲಿ ಸ್ಥಾಪಿಸಲಾಗಿದ್ದು ಅದರ ನಿರ್ಮಾಣವನ್ನು ಕಾರ್ಕಳದ ಶಿಲ್ಪಿ ಕೃಷ್ಣ ಆಚಾರ್ಯರವರು ತಂಡದವರು ಮಾಡಿದ್ದಾರೆ .

ದೇಶ ವಿದೇಶಗಳಿಂದ ಮಂಗಳೂರಿಗೆ ಬರುವ ಅತಿಥಿಗಳು ಉಳಿದುಕೊಳ್ಳುವ ಓಷಿಯನ್ ಪರ್ಲ್ ಹೋಟೆಲ್ ಎದುರು ನಲ್ಲಿರುವ ಈ ವೃತ್ತ ಮಂಗಳೂರಿನ ಸೌಂದರ್ಯವನ್ನು ಹೆಚ್ಚಿಸುವಲ್ಲಿ ಸಹಜವಾಗಿ ಆಕರ್ಷಣೆಯ ಕೇಂದ್ರ ಬಿಂದುವಾಗಲಿದೆ ವೃತ್ತದ ಒಳಗಿರುವ ಪುರಾತನ ಕಾಲದ ಬಾವಿಯನ್ನು ಹಾಗೇ ಉಳಿಸಲಾಗಿದ್ದು ಅದರ ನೀರನ್ನೇ ಕಾರಂಜಿಯಂತೆ ವೃತ್ತದಲ್ಲಿ ಚಿಮ್ಮಿಸಿ ಇನ್ನಷ್ಟು ಆಕರ್ಷಕ ಆಯೋಜನೆ ಮಾಡಲಾಗಿದೆ.

ವೃತ್ತದ ಒಳಗೆ ಹೂಗಳನ್ನು ಮತ್ತು ಹಚ್ಚ ಹಸುರಿನ ಹುಲ್ಲುಗಳನ್ನು ಬೆಳೆಸಲಾಗಿದೆ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಈ ವೃತ್ತದ ಪುನರ್ ನಿರ್ಮಾಣದಲ್ಲಿ ಮಹತ್ತರ ಪಾತ್ರ ವಹಿಸಿದ್ದು ಟ್ರಸ್ಟಿನ ಅಧ್ಯಕ್ಷರಾದ ಶಾಸಕ ವೇದವ್ಯಾಸ್ ಕಾಮತ್ ಅವರ ಅಪೇಕ್ಷೆಯಂತೆ ಈ ವೃತ್ತ ಇತಿಹಾಸ ಮತ್ತು ಪ್ರಸ್ತುತ ಮಾದರಿಯ ಶೈಲಿಯ ಸಮರ್ಪಕ ಮಿತಿ ಮೀರಿ ಮಿನ್ ಮಿಳಿತದೊಂದಿಗೆ ರಚನೆಯಾಗಿದೆ . .ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಈ ವೃತ್ತದ ನಿರ್ಮಾಣ ಮತ್ತು ನಿರ್ವಹಣೆಯ ಜವಾಬ್ದಾರಿ ವಹಿಸಿಕೊಂಡಿದೆ.

Gayathri SG

Recent Posts

ಮಹಿಳೆಯ ಎಳೆದೊಯ್ದು ಕಾರು ಪಾರ್ಕಿಂಗ್‌ನಲ್ಲಿ ಅತ್ಯಾಚಾರ; ಭೀಕರ ದೃಶ್ಯ ಸೆರೆ

ಮಹಿಳೆ ಮೇಲೆ ಹಿಂಬದಿಯಿಂದ ಬೆಲ್ಟ್ ಮೂಲಕ ದಾಳಿ ನಡೆಸಿ, ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಭೀಕರ ಘಟನೆ ನ್ಯೂಯಾರ್ಕ್ ನಗರದಲ್ಲಿ…

3 mins ago

ಮಲತಂದೆಯಿಂದಲೇ ಬಾಲಿವುಡ್ ನಟಿ ಕೊಲೆ; ಕೋರ್ಟ್

ಬಾಲಿವುಡ್ ನಟಿ ಲೈಲಾ ಖಾನ್ ಹತ್ಯೆ ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಮುಂಬೈ ಸೆಷನ್ ಕೋರ್ಟ್ ಘಟನೆ…

15 mins ago

ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಮೈಕ್ರೊಚಿಪ್‌ ಅಳವಡಿಕೆ ಕಡ್ಡಾಯ

ಅನ್ಯ ದೇಶಗಳಿಂದ ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಕನಿಷ್ಠ 6 ತಿಂಗಳಾಗಿರಬೇಕು ಮತ್ತು ರೇಬಿಸ್‌ ತಡೆಗಟ್ಟುವ ಲಸಿಕೆ ಹಾಕಿಸಿರುವ ಮಾಹಿತಿ ಇರುವ…

17 mins ago

ಶಾರ್ಟ್ ಸರ್ಕ್ಯೂಟ್​ನಿಂದ ಸಿನಿಮಾ ಶೂಟಿಂಗ್ ಸೆಟ್​ ನಲ್ಲಿ ಬೆಂಕಿ: ನಾಲ್ಕು ಕೋಟಿ ನಷ್ಟ

ಲುಗು  ಜನಪ್ರಿಯ ನಟ ನಂದಮೂರಿ ಕಲ್ಯಾಣ್ ರಾಮ್  ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್​ಗೆ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಬೆಂಕಿ…

18 mins ago

ಅರವಿಂದ್ ಕೇಜ್ರಿವಾಲ್ ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಏಳು ಹಂತದ ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ…

40 mins ago

ಚಾಮರಾಜನಗರದಲ್ಲಿ ಉಡ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳನ್ನು ಜೀವಂತವಾಗಿ ಸೆರೆ ಹಿಡಿದು ಸಾಗಾಟ ಮಾಡುವ ಜಾಲ ಕಾರ್ಯಾಚರಿಸುತ್ತಿರುವ ಶಂಕೆ ವ್ಯಕ್ತವಾಗಿದೆ. ಪ್ರಾಣಿಗಳನ್ನು ಬೇಟೆಯಾಡಿ ಮಾಂಸ…

52 mins ago