News Karnataka Kannada
Monday, April 29 2024
ಮಂಗಳೂರು

ಮಂಗಳೂರು ವಿವಿ ಪರೀಕ್ಷಾ ಫಲಿತಾಂಶ- ಸ್ಪಷ್ಟೀಕರಣ

Mangalore University
Photo Credit :

ಮಂಗಳೂರು ವಿಶ್ವವಿದ್ಯಾನಿಲಯ ಆಗಸ್ಟ್-ಸೆಪ್ಟೆಂಬರ್ ಹಾಗೂ ಸಪ್ಪೆಂಬರ್-ಅಕ್ಟೋಬರ್ 2021ರಲ್ಲಿ ನಡೆಸಿದ ಪದವಿ ಪರೀಕ್ಷೆಗಳ ಫಲಿತಾಂಶಗಳ ಹಿನ್ನಲೆಯಲ್ಲಿ ಕೆಲವು ಪತ್ರಿಕೆಗಳಲ್ಲಿ ಫಲಿತಾಂಶದ ಕುರಿತಾಗಿ ಏಕಪಕ್ಷೀಯ ಅಭಿಪ್ರಾಯಗಳನ್ನೊಳಗೊಂಡ ವರದಿಗಳು ಪ್ರಕಟವಾಗಿದ್ದು, ಗೊಂದಲಕ್ಕೆ ಕಾರಣವಾಗುತ್ತಿದೆ.

ಮಂಗಳೂರು ವಿಶ್ವವಿದ್ಯಾನಿಲಯವು ಸ್ವಂತಿಕೆಯೆಡೆಗೆ ಸಾಗುವ ಉದ್ದೇಶದಿಂದ MuLinx ಎನ್ನುವ Open Source Software ನ್ನು ಬಳಸಿಕೊಂಡು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿ ಸವಾಲುಗಳನ್ನು ಎದುರಿಸಿ ಪರೀಕ್ಷೆಗಳನ್ನು ನಡೆಸಿ ಫಲಿತಾಂಶ ಪ್ರಕಟಿಸಿ ಮಾಡಿ ವಿದ್ಯಾರ್ಥಿಗಳು ಭವಿಷ್ಯ ರೂಪಿಸಿಕೊಳ್ಳುವಂತಾಗಲು ಪ್ರಯತ್ನಮಾಡಲಾಗಿದೆ. ಕೋವಿಡ್ ಹಿನ್ನಲೆಯಲ್ಲಿ ಒಂದರ ನಂತರ ಒಂದಾಗಿ ನಿರಂತರವಾಗಿ ಪರೀಕ್ಷೆಗಳನ್ನು ನಡೆಸಿರುವುದರಿಂದ ಹಾಗೂ ಹೊಸ ಸಾಫ್ಟ್ವೇರ್ನ ಬಳಕೆಯಲ್ಲಿ ಮತ್ತು ಈ ಹಿಂದಿನ ಪರೀಕ್ಷಾ ದತ್ತಾಂಶಗಳು ಹೊಸ ಸಾಫ್ಟ್ವೇರ್‌ಗೆ ಹೊಂದಾಣಿಕೆಯಾಗುವ ಹಂತದ ಪ್ರಕ್ರಿಯೆಯಿಂದಾಗಿ ಅಧಿಕ ಸಮಯಾವಕಾಶದ ಅಗತ್ಯವಿದ್ದ ಕಾರಣ ಫಲಿತಾಂಶ ಪ್ರಕಟನೆಯು ವಿಳಂಬವಾಗಿರುತ್ತದೆ.

ವಿದ್ಯಾರ್ಥಿಗಳಿಗೆ ಅವರ ಹಕ್ಕಿನ ಭಾಗವಾಗಿರುವ ಫಲಿತಾಂಶವನ್ನು ಮಂಗಳೂರು ವಿಶ್ವವಿದ್ಯಾನಿಲಯವು ಸರಿಯಾಗಿ ಪರಿಶೀಲಿಸಿ ನೀಡುವುದನ್ನು ಅತ್ಯಂತ ಜವಾಬ್ದಾರಿಯಿಂದ ನಿರ್ವಹಿಸುತ್ತಿದ್ದು, ಗೌಪ್ಯತೆ ಕಾಪಾಡುವ ಎಲ್ಲಾ ಕ್ರಮ ವಹಿಸಲಾಗಿದೆ. ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇರುವುದಿಲ್ಲ. ವಿದ್ಯಾರ್ಥಿಗಳಿಗೆ ಪ್ರಕಟವಾದ ಫಲಿತಾಂಶದಲ್ಲಿ ಗೊಂದಲವಿದ್ದಲ್ಲಿ ತಮ್ಮ ಉತ್ತರ ಪತ್ರಿಕೆಗಳ ವೈಯಕ್ತಿಕ ವೀಕ್ಷಣೆಗೆ ನಿಯಮಾನುಸಾರ ಅವಕಾಶ ಕಲ್ಪಿಸಲಾಗಿದೆ.

ವಿದ್ಯಾರ್ಥಿಗಳು ತಮ್ಮ ಸಮಸ್ಯೆಗಳನ್ನು ಕಾಲೇಜು ಪ್ರಾಂಶುಪಾಲರ ಮುಖಾಂತರ ಕುಲಸಚಿವರು ಪರೀಕ್ಷಾಂಗ ಕಛೇರಿಗೆ ಪತ್ರ ಬರೆದು ಪರಿಹರಿಸಿಕೊಳ್ಳಬಹುದು. ಕೊರೊನಾದ ಸಂದಿಗ್ದ ಪರಿಸ್ಥಿತಿಯಲ್ಲಿ ಕೈಗೊಂಡ ನಮ್ಮ ಸತತ ಪ್ರಯತ್ನಗಳು ವಿದ್ಯಾರ್ಥಿ ಸ್ನೇಹಿಯಾಗಿರಬೇಕು ಎನ್ನುವುದೇ ನಮ್ಮ ಆಶಯ ಮತ್ತು ಕರ್ತವ್ಯ ಎಂದು ಈ ಮೂಲಕ ಸ್ಪಷ್ಠೀಕರಿಸಲಾಗಿದೆ, ಎಂದು ಕುಲಸಚಿವರು (ಪರೀಕ್ಷಾಂಗ) ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು