News Karnataka Kannada
Friday, May 03 2024
ಮಂಗಳೂರು

ಮಂಗಳೂರು: ವೀಕೆಂಡ್ ಕರ್ಫ್ಯೂ ಮರುಪರಿಶೀಲಿಸಲು ಯುಟಿ ಖಾದರ್ ಆಗ್ರಹ

U T Khadar
Photo Credit :

ಮಂಗಳೂರು: ಮಂಗಳೂರಲ್ಲಿ ಜಾರಿ ಮಾಡಿರುವ ವೀಕೆಂಡ್ ಕರ್ಫ್ಯೂವನ್ನು ಮರು ಪರಿಶೀಲಿಸುವಂತೆ ಶಾಸಕ ಯುಟಿ ಖಾದರ್ ಒತ್ತಾಯಿಸಿದ್ದಾರೆ. ಮಂಗಳೂರು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವಾರಾಂತ್ಯ ಕರ್ಫ್ಯೂವಿನ ಹಿಂದಿನ ತರ್ಕ ಏನೆಂದು ಅರ್ಥವಾಗುತ್ತಿಲ್ಲ. ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯ ವಸ್ತುಗಳ ಅಂಗಡಿ ತೆರೆಯಲು ಅವಕಾಶ ನೀಡಲಾಗಿದೆ. ಆದರೆ ಪಾದರಕ್ಷೆ, ಜವಳಿ ಮುಂತಾದ ಇತರ ಅಂಗಡಿಗಳಿಗೆ ಏಕೆ ಅನುಮತಿ ಇಲ್ಲ. ಜಿಲ್ಲಾಡಳಿತವು ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಅನ್ನು ಮರುಪರಿಶೀಲಿಸಬೇಕು ಎಂದು ಒತ್ತಾಯಿಸಿದರು.

ರಾತ್ರಿಯ ಸಮಯದಲ್ಲಿ ಸಾಮಾಜಿಕ ಕೂಟಗಳನ್ನು ತಪ್ಪಿಸಲು ರಾತ್ರಿ ಕರ್ಫ್ಯೂ ವಿಧಿಸುವುದು ಉತ್ತಮ. ಆದರೆ ವಿಕೇಂಡ್ ಕರ್ಪ್ಯೂವಿನಿಂದ ಯಾವುದೇ ಪ್ರಯೋಜನವಿಲ್ಲ. ವಿಕೇಂಡ್ ಕರ್ಪ್ಯೂ ಇರೋ ಕಾರಣ ಜನರು ವಿಕೇಂಡ್ ಬದಲು ಶುಕ್ರವಾರ ಅಥವಾ ಸೋಮವಾರದಂದು ಕಾರ್ಯಕ್ರಮಗಳನ್ನು ಆಯೋಜಿಸುತ್ತಾರೆ ಎಂದರು.

ಇನ್ನು ಟಾಸ್ಕ್ ಫೋರ್ಸ್ ಸಮಿತಿಯಲ್ಲಿರುವ ನಮ್ಮ ಶಾಸಕರೇ ಮುಖ್ಯಮಂತ್ರಿಗೆ ವಾರಾಂತ್ಯ ಕರ್ಫ್ಯೂ ಹಿಂಪಡೆಯಲು ಮನವಿ ಪತ್ರವನ್ನು ಸಲ್ಲಿಸುತ್ತಾರೆ. ಶಾಸಕರು ಮುಖ್ಯಮಂತ್ರಿಗೆ ಮನವಿ ಸಲ್ಲಿಸುವ ಮೂಲಕ ಜನರನ್ನು ಸಮಾಧಾನಪಡಿಸಲು ಮತ್ತು ಗೊಂದಲ ಸೃಷ್ಟಿಸಲು ಬಯಸುತ್ತಾರೆ ಎಂದು ಆರೋಪಿಸಿದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು