Categories: ಮಂಗಳೂರು

ಮಂಗಳೂರು: ಹಣಕ್ಕಾಗಿ ವ್ಯಕ್ತಿಯನ್ನು ಹನಿಟ್ರಾಪ್ ಮಾಡುತ್ತಿದ್ದ ದಂಪತಿ ಸೆರೆ

ಮಂಗಳೂರು : ನಗರದ ಪದವಿನಂಗಡಿನ ದಂಪತಿಗಳ ನಡುವಿನ ಸಮಸ್ಯೆಯನ್ನು ಪರಿಹಾರ ಮಾಡಲು ಮನೆಯಲ್ಲಿ ಪೂಜೆ ಮಾಡಬೇಕೆಂದು ಪುರೋಹಿತ ರನ್ನು ಕರೆಯಿಸಿ ಹನಿ ಟ್ರ್ಯಾಪ್ ಮಾಡಿ ವ್ಯಕ್ತಿಯೊಬ್ಬರನ್ನು ಸುಲಿಗೆ ಮಾಡಿದ ಪ್ರಕರಣದಲ್ಲಿ ಭಾಗಿಯಾದ ಆರೋಪಿ ದಂಪತಿ ಗಳನ್ನು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತನಿಖೆಯನ್ನು ಕೈಗೊಂಡ ಮಂಗಳೂರು ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದ ತಂಡ ಪ್ರಮುಖ ಅರೋಪಿಗಳಾದ ಆರೋಪಿಗಳಾದ ಮೇರಿಹಿಲ್ ನಲ್ಲಿರುವ ಕೊಡಗು ಜಿಲ್ಲೆಯ ಶನಿವಾರ ಸಂಜೆ ಮೂಲದ ಭವ್ಯ ( 30 ) ಆಕೆಯ ಪತಿ ಹಾಸನ ಜಿಲ್ಲೆಯ ಅರಕಲಗೂಡು ಮೂಲದ ಕಾರು ಚಾಲಕನಾಗಿರುವ ಕುಮಾರ್ ಪುರಾಜು( 35 ) ಎಂಬವರನ್ನು ಬಂಧಿಸಲಾಗಿದೆ.

ಪ್ರಕರಣದ ವಿವರ

ಚಿಕ್ಕಮಗಳೂರು ಜಿಲ್ಲೆಯ ಪುರೋಹಿತ ಮತ್ತು ಜ್ಯೋತಿಷಿಯೊಬ್ಬರನ್ನು ಭೇಟಿಯಾಗಿದ್ದ ದಂಪತಿಗಳು ತಮ್ಮ ಮನೆಯಲ್ಲಿನ ಸಮಸ್ಯೆಯನ್ನು ಬಗೆಹರಿಸಲು ಪೂಜೆಯನ್ನು ಮಾಡಿಕೊಡಬೇಕೆಂದು ಮನೆಗೆ ಕರೆಯಿಸಿಕೊಂಡು ಮನೆಯಲ್ಲಿರುವ ಸಮಯ ಪುರೋಹಿತರ ಜೊತೆಗಿರುವ ಫೋಟೋ ಮತ್ತು ವಿಡಿಯೋವನ್ನು ತೆಗೆದು ನಂತರ ಬ್ಲಾಕ್ ಮೇಲ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಹೆದರಿಸಿ, ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿ 15 ಲಕ್ಷ ರೂ ನಗದು ಹಣ ಹಾಗೂ ಸುಮಾರು 14 ಲಕ್ಷ ರೂಪಾಯಿಗಳನ್ನು ಬೇರೆ ಬೇರೆ ಖಾತಗಳಿಂದ ಆರೋಪಿಗಳು ನೀಡಿದ ಬ್ಯಾಂಕ್ ಬೇರೆ ಬೇರೆ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿರುತ್ತಾರೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿದೆ.

ಆರೋಪಿಗಳು ಇತರ ಕೆಲವು ವ್ಯಕ್ತಿಗಳಿಗೆ ಇದೇ ರೀತಿ ಹಟ್ಯಾಪ್ ಮಾಡಿ ಹಣ ಸುಲಿಗೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿರುವ ಸಾಧ್ಯತೆಯಿದ್ದು , ಈ ಬಗ್ಗೆ ತನಿಖೆ ಮುಂದುವರಿದಿದೆ. ಆರೋಪಿಗಳ ಬಳಿಯಿಂದ 37,000 ಮೌಲ್ಯದ ಎರಡು 2 ಚಿನ್ನದ ರಿಂಗ್ , ನಗದು 31,000 ರೂ ಮತ್ತು 4 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಆರೋಪಿಗಳ ಜೊತೆ ಇತರರು ಕೂಡಾ ಭಾಗಿಯಾಗಿ ಹಣವನ್ನು ಪಡೆದುಕೊಂಡಿರುವ ಬಗ್ಗೆ ಮಾಹಿತಿಯಿದ್ದು , ಈ ಬಗ್ಗೆ ತನಿಖೆ ಮುಂದುವರಿಸಲಾಗಿದೆ.

ಆರೋಪಿಗಳು ಇನ್ನಷ್ಟು ಹಣಕ್ಕಾಗಿ ಪೊಲೀಸರ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ರವರ , ಮಹಿಳಾ ಸಂಘಟನೆಗಳ ಹೆಸರಿನಲ್ಲಿ ಬೆದರಿಕೆ ಹಾಕಿರುವುದಲ್ಲದೇ ಇನ್ನಷ್ಟು ಹಣವನ್ನು ನೀಡದೇ ಇದ್ದರೆ ಸುದ್ದಿ ಮಾಧ್ಯಮಗಳಲ್ಲಿ ಫೋಟೋ ಮತ್ತು ವಿಡಿಯೋವನ್ನು ವೈರಲ್ ಮಾಡುವುದಾಗಿ ಬೆದರಿಕೆಯೊಡ್ಡಿದ್ದರು.

ಮೊದಲು ಸಣ್ಣ ಬಾಡಿಗೆ ಮನೆಯಲ್ಲಿದ್ದ ಆರೋಪಿಗಳು ಈ ಕೃತ್ಯವೆಸಗಿದ ನಂತರ ಫಿರ್ಯಾದಿದಾರರಿಂದ ಸುಲಿಗೆ ಮಾಡಿದ ಹಣದಲ್ಲಿ ರೂ . 10 ಲಕ್ಷ ಹಣವನ್ನು ನೀಡಿ ಫ್ಲಾಟ್ ವೊಂದನ್ನು ಲೀಸ್ ಗೆ ಪಡೆದುಕೊಂಡಿರುವುದಲ್ಲದೇ , ಈ ಫ್ಲಾಟ್ ಗೆ ಸುಮಾರು 7 ಲಕ್ಷ ಮೌಲ್ಯದ ಮನೆ ಸಾಮಾಗ್ರಿಗಳನ್ನು ಖರೀದಿಸಿದ್ದರು. ಅಲ್ಲದೇ ಹೊಸ ದ್ವಿಚಕ್ರ ವಾಹನವೊಂದನ್ನು ಖರೀದಿಸಿರುವ ಬಗ್ಗೆ ತನಿಖೆಯಿಂದ ತಿಳಿದುಬಂದಿದೆ.

ಅರೋಪಿಗಳ ಪೈಕಿ ಭವ್ಯಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು , ಹೆಚ್ಚಿನ ತನಿಖೆಗಾಗಿ 5 ದಿನಗಳ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ. ಆರೋಪಿಗಳ ಪತ್ತೆ ಕಾರ್ಯದಲ್ಲಿ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ , ಪಿಎಸ್‌ಐ ಯವರಾದ ರಾಜೇಂದ್ರ ಬಿ , ಪ್ರದೀಪ ಟಿ . ಆರ್ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

Gayathri SG

Recent Posts

ರಕ್ಷಿತ್ ಶೆಟ್ಟಿ ಅಭಿನಯದ `777 ಚಾರ್ಲಿ’ ಚಿತ್ರ ಇದೀಗ ಜಪಾನಿನಲ್ಲಿ ಬಿಡುಗಡೆಗೆ ಸಿದ್ಧ

ಪರಂವಃ ಸ್ಟುಡಿಯೋಸ್ ನಿರ್ಮಾಣದ, ಸಿಂಪಲ್‌ ಸ್ಟಾರ್‌ ರಕ್ಷಿತ್ ಶೆಟ್ಟಿ ಅಭಿನಯದ `777 ಚಾರ್ಲಿ’ ಚಿತ್ರ ಇದೀಗ ಜಪಾನೀಸ್ ಭಾಷೆಯಲ್ಲಿ ಬಿಡುಗಡೆಯಾಗುತ್ತಿದೆ.…

28 mins ago

ರೈತರಿಗಾಗಿ ಹಣ ಕೇಳಿದ್ದು, ಗ್ಯಾರಂಟಿಗಾಗಿ ಹಣ ಕೇಳಿಲ್ಲ, ಕೇಳುವುದು ಇಲ್ಲ : ಸಿಎಂ

ರೈತರಿಗಾಗಿ ಹಣ ಕೇಳಿದ್ದು, ಗ್ಯಾರಂಟಿಗಾಗಿ ಹಣ ಕೇಳಿಲ್ಲ ಮತ್ತು ಕೇಳುವುದು ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ…

1 hour ago

ತಂದೆ ಕಿರುಕುಳಕ್ಕೆ ಬೇಸತ್ತು ತಾಯಿ ಆತ್ಮಹತ್ಯೆಗೆ ಯತ್ನ: ಪ್ರಾಣ ಉಳಿಸಿದ 7 ವರ್ಷದ ಬಾಲಕಿ

ಅಪ್ಪನ ದೌರ್ಜನ್ಯಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ತಾಯಿಯನ್ನು ಏಳು ವರ್ಷದ ಬಾಲಕಿಯೊಬ್ಬಳು ಕಾಪಾಡಿದ ಘಟನೆ ಗುಜರಾತ್​ನ ಅಹಮದಾಬಾದ್​ನಲ್ಲಿ ನಡೆದಿದೆ.

1 hour ago

ಇರಾಕ್‌ನ ಟಿಕ್‌ ಟಾಕ್‌ ಸ್ಟಾರ್‌ ಓಂ ಫಹಾದ್‌ ದುಷ್ಕರ್ಮಿಗಳ ಗುಂಡಿಗೆ ಬಲಿ

ಇರಾಕ್‌ನ ಟಿಕ್‌ ಟಾಕ್‌ ಸ್ಟಾರ್‌ ಓಂ ಫಹಾದ್‌ ರನ್ನು ಬಾಗ್ದಾದ್‌ನ ಜೊಯೌನಾ ಜಿಲ್ಲೆಯಲ್ಲಿ ತಡ ರಾತ್ರಿ ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿದ್ದಾರೆ.  

2 hours ago

ತೆಕ್ಕಟ್ಟೆ: ಇನ್ನೋವಾ ಕಾರು ಮರಕ್ಕೆ ಡಿಕ್ಕಿ; ಯುವತಿ ಸ್ಥಳದಲ್ಲೇ ಮೃತ್ಯು, ನಾಲ್ವರು ಗಂಭೀರ

ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟು, ನಾಲ್ವರು ಗಂಭೀರವಾಗಿ…

2 hours ago

ಮೋದಿ ಹೇಳಿಕೆಯನ್ನು ಟೀಕಿಸಿ ಪಕ್ಷದಿಂದ ಉಚ್ಛಾಟನೆಗೊಂಡಿದ್ದ ಉಸ್ಮಾನ್‌ ಘನಿ ಪೊಲೀಸರ ವಶಕ್ಕೆ

ಪ್ರಧಾನಿ ಮೋದಿಯವರ ಹೇಳಿಕೆಯನ್ನು ಟೀಕಿಸಿ ಪಕ್ಷದಿಂದ ಉಚ್ಛಾಟನೆಗೊಂಡಿದ್ದ ಬಿಕಾನೇರ್‌ನ ಬಿಜೆಪಿ ಅಲ್ಪಸಂಖ್ಯಾತ ಮೋರ್ಛಾದ ಜಿಲ್ಲಾಧ್ಯಕ್ಷ ಉಸ್ಮಾನ್‌ ಘನಿಯನ್ನು ಪೊಲೀಸರು ಬಂಧಿಸಿದ್ದಾರೆ.

2 hours ago