ಮಂಗಳೂರು : ಹಸುಳೆ ಮೇಲೆ ಲೈಂಗಿಕ ದೌರ್ಜನ್ಯ ಕೊಲೆ ಯತ್ನ ಬಿಹಾರ ಮೂಲದ ಆರೋಪಿ ಸೆರೆ. ಹೊಯ್ಗೆ ಬಜಾರ್ ಬಳಿ ಒಣ ಮೀನು ಸಂಸ್ಕರಣಾ ಘಟಕದಲ್ಲಿ ಕೆಲಸ ಮಾಡುತ್ತಿರುವ ಬಿಹಾರ ಮೂಲದ ದಂಪತಿಯ 2 ವರ್ಷದ ಹಸುಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಕೊಲೆಗೆ ಯತ್ನಿಸಿದ ಆರೋಪದ ಮೇಲೆ ಬಿಹಾರದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಬಿಹಾರ ಮೂಲದ ಚಂದನ್ ಎಂದು ಗುರುತಿಸಲಾಗಿದೆ ಹಸುಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ ಬಳಿಕ ಮಗುವನ್ನು ಉಪ್ಪು ತುಂಬಿದ ನೀರಿನ ಟ್ಯಾಂಕ್ನಲ್ಲಿ ಮುಳುಗಿಸಿ ಕೊಲೆ ಮಾಡುವ ಪ್ರಯತ್ನ ನಡೆಸಿದ್ದು ಸದ್ಯ ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ ಎಂದು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ತಿಳಿಸಿದ್ದಾರೆ.